Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಉದಯರಶ್ಮಿ ಇಂದಿನ ದಿನಪತ್ರಿಕೆ ಜೂನ್ 26, 2026

ಅಥಣಿ: ಮತ್ತಷ್ಟು 4 ಎಐ ಕ್ಯಾಮೆರಾಗಳ ಕಾರ್ಯಾರಂಭ

ವಿದ್ಯಾರ್ಥಿಗಳು ಯಾವುದೇ ವ್ಯಸನಗಳಿಗೆ ಒಳಗಾಗಬಾರದು

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಗೃಹಲಕ್ಷ್ಮಿ ಯೋಜನೆ: ವಿಜಯಪುರ ಜಿಲ್ಲೆ ಮುಂಚೂಣಿ
(ರಾಜ್ಯ ) ಜಿಲ್ಲೆ

ಗೃಹಲಕ್ಷ್ಮಿ ಯೋಜನೆ: ವಿಜಯಪುರ ಜಿಲ್ಲೆ ಮುಂಚೂಣಿ

By No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ವಿಜಯಪುರ ಜಿಲ್ಲಾ ಉಸ್ತುವಾರಿ ಸಚಿವ ಎಂ. ಬಿ. ಪಾಟೀಲ ಸ್ಪಷ್ಠನೆ

ವಿಜಯಪುರ: ಕಾರಜೋಳ ಬಳಿ ಬಾಕಿ ಉಳಿದಿರುವ 500 ಎಕರೆ ಜಮೀನಿಗೆ ನೀರಾವರಿ ಸೌಲಭ್ಯ ಒದಗಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕೆ, ಮೂಲಸೌಲಭ್ಯ ಅಭಿವೃದ್ಧಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಂ. ಬಿ. ಪಾಟೀಲ ತಿಳಿಸಿದ್ದಾರೆ.
ಬಬಲೇಶ್ವರ ತಾಲೂಕಿನ ಕಾರಜೋಳ ಗ್ರಾಮದಲ್ಲಿ ಶುಕ್ರವಾರ ರಾತ್ರಿ ಶ್ರೀ ಬೀರಲಿಂಗೇಶ್ವರ ಜಾತ್ರಾ ಮಹೋತ್ಸವದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.
ಭಾರತ ಗ್ರಾಮಗಳ ದೇಶ. ಹಳ್ಳಿಗಳು ಅಭಿವೃದ್ಧಿಯಾದರೆ ದೇಶ ಅಭಿವೃದ್ಧಿಯಾದಂತೆ. ಇದರಿಂದ ಗ್ರಾಮ ಸ್ವರಾಜ್ಯ ಸಾಧ್ಯ ಎಂದು ರಾಷ್ಟ್ರಪಿತ ಮಹಾತ್ಮಾ ಗಾಂಧಿ ಹೇಳಿದ್ದರು. ಆವರ ಆಶಯದಂತೆ ನಮ್ಮ ಸರಕಾರ ರೈತರು, ಬಡವರು ಸೇರಿದಂತೆ ಎಲ್ಲ ಜಾತಿವರ್ಗಗಳ ಕಲ್ಯಾಣಕ್ಕಾಗಿ ಯೋಜನೆಗಳನ್ನು ರೂಪಿಸಿದೆ. ಪಂಚ ಗ್ಯಾರಂಟಿ ಯೋಜನೆಗಳ ಜಾರಿಯಿಂದಾಗಿ ಸಮಾಜದ ಎಲ್ಲ ವರ್ಗದ ಜನರಿಗೆ ಶಕ್ತಿ ತುಂಬಲಾಗುತ್ತಿದೆ. ಗೃಹಲಕ್ಷ್ಮಿ ಯೋಜನೆಯಲ್ಲಿ ವಿಜಯಪುರ ಜಿಲ್ಲೆ ಮುಂಚೂಣಿಯಲ್ಲಿದೆ. ಗೃಹಲಕ್ಷ್ಮಿ ಯುವನಿಧಿ, ಅನ್ನಭಾಗ್ಯ ಸೇರಿದಂತೆ ಎಲ್ಲ ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತರುವ ಮೂಲಕ ಕೊಟ್ಟ ಮಾತುಗಳನ್ನು ಉಳಿಸಿಕೊಂಡು, ನುಡಿದಂತೆ ನಡೆಯುತ್ತಿದ್ದೇವೆ ಎಂದು ಅವರು ತಿಳಿಸಿದರು.
ಕಾರಜೋಳ ಬಳಿ ಸಕ್ಕರೆ ಕಾರ್ಖಾನೆ ನಿರ್ಮಾಣಕ್ಕೆ ಭೂಮಿ ನೀಡಿದ ರೈತರ ಕುಟುಂಬಗಳಿಗೆ ಉದ್ಯೋಗ ಕಲ್ಪಿಸಲು ಕ್ರಮ ಕೈಗೊಳ್ಳುತ್ತೇವೆ. ನಾನು ಜಲಸಂಪನ್ಮೂಲ ಸಚಿವನಾಗಿದ್ದಾಗ ರೂಪಿಸಿದ ನೀರಾವರಿ ಯೋಜನೆಗಳು ಈಗ ಉಂಟಾಗಿರುವ ಬರದ ತೀವ್ರತೆಯನ್ನು ಕಡಿಮೆ ಮಾಡಿವೆ. ಇದರಿಂದಾಗಿ ಪ್ರತಿವರ್ಷ ಬಳಸಲಾಗುತ್ತಿದ್ದ ನೀರಿನ ಟ್ಯಾಂಕರ್ ಗಳ ಬಳಕೆ ಗಣನೀಯವಾಗಿ ಕಡಿಮೆಯಾಗಿದೆ. ಬರಪೀಡಿತ ಜಿಲ್ಲೆ ಎಂದು ಹಣೆಪಟ್ಟಿ ಹೊತ್ತಿದ್ದ ವಿಜಯಪುರದ ಇತಿಹಾಸವನ್ನು ಬದಲಿಸಲಾಗುತ್ತಿದೆ. ಜಲಸಂಪನ್ಮೂಲ ಇಲಾಖೆಯಲ್ಲಿ ಮಾಡಿರುವಂತೆ ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಇಲಾಖೆಯಲ್ಲಿಯೂ ಛಾಪು ಮೂಡಿಸಲು ಯೋಜನೆಗಳನ್ನು ರೂಪಿಸಿದ್ದೇನೆ. ವಿಜಯಪುರ ಜಿಲ್ಲೆಯಲ್ಲಿ ಕನಿಷ್ಠ 10 ಸಾವಿರ ಉದ್ಯೋಗ ಸೃಷ್ಠಿಸಲು ಕ್ರಮ ಕೈಗೊಳ್ಳಲಾಗುತ್ತಿದೆ. ಫ್ಯಾಕ್ಟರಿ ಪ್ರಾರಂಭಿಸುವ ಗುರಿಯಿದೆ ಎಂದು ಅವರು ತಿಳಿಸಿದರು.
ಗ್ರಾಮಸ್ಥರು ತಮ್ಮ ಮಕ್ಕಳ ಶಿಕ್ಷಣಕ್ಕೆ ಆದ್ಯತೆ ನೀಡಬೇಕು. ಅದರಲ್ಲೂ ಹೆಣ್ಣು ಮಕ್ಕಳಿಗೆ ಉತ್ತಮ ಶಿಕ್ಷಣ ನೀಡಲು ಕಾಳಜಿ ವಹಿಸಬೇಕು ಎಂದು ಅವರು ಹೇಳಿದರು.
ಇದಕ್ಕೂ ಮುನ್ನ ಸಚಿವರು ಶ್ರೀ ಬೀರಲಿಂಗೇಶ್ವರ ದೇವಸ್ಥಾನದಲ್ಲಿ ದರ್ಶನ ಪಡೆದರು.
ಈ ಸಂದರ್ಭದಲ್ಲಿ ಮುಖಂಡರಾದ ಸೋಮನಾಥ ಕಳ್ಳಿಮನಿ, ಬಿ. ಡಿ. ಆಸಂಗಿ, ಸುಜಾತಾ ಕಳ್ಳಿಮನಿ, ಮಲ್ಲು ಪರಸಣ್ಣವರ, ರಾಜು ಕಂಬಾಗಿ, ಪಾಂಡು ಜಾಧವ, ರಾಚಯ್ಯ ಮಠಪತಿ, ಕಾಂತು ಒಡೆಯರ, ಪರಶುರಾಮ ಮಲಘಾಣ, ಸುರೇಶ ಜಾಧವ, ಬಸವರಾಜ ಪಾಯ್ಣಿ, ಶಿವಪ್ಪ ತಳವಾರ, ಮುದಕಪ್ಪ ಹಳಿಜೋಳ, ಕಲ್ಲಯ್ಯ ಹಿರೇಮಠ, ಯಲ್ಲಪ್ಪ ಆಸಂಗಿ ಮುಂತಾದವರು ಉಪಸ್ಥಿತರಿದ್ದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಉದಯರಶ್ಮಿ ಇಂದಿನ ದಿನಪತ್ರಿಕೆ ಜೂನ್ 26, 2026

ಅಥಣಿ: ಮತ್ತಷ್ಟು 4 ಎಐ ಕ್ಯಾಮೆರಾಗಳ ಕಾರ್ಯಾರಂಭ

ವಿದ್ಯಾರ್ಥಿಗಳು ಯಾವುದೇ ವ್ಯಸನಗಳಿಗೆ ಒಳಗಾಗಬಾರದು

ಜು.೨೭ರಂದು ಬಿ.ಎಲ್.ಡಿ.ಇ–ರಘುಕುಲ ಸಮನ್ವಯ ಶಾಲೆ ಉದ್ಘಾಟನೆ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಉದಯರಶ್ಮಿ ಇಂದಿನ ದಿನಪತ್ರಿಕೆ ಜೂನ್ 26, 2026
    In ದಿನಪತ್ರಿಕೆ
  • ಅಥಣಿ: ಮತ್ತಷ್ಟು 4 ಎಐ ಕ್ಯಾಮೆರಾಗಳ ಕಾರ್ಯಾರಂಭ
    In (ರಾಜ್ಯ ) ಜಿಲ್ಲೆ
  • ವಿದ್ಯಾರ್ಥಿಗಳು ಯಾವುದೇ ವ್ಯಸನಗಳಿಗೆ ಒಳಗಾಗಬಾರದು
    In (ರಾಜ್ಯ ) ಜಿಲ್ಲೆ
  • ಜು.೨೭ರಂದು ಬಿ.ಎಲ್.ಡಿ.ಇ–ರಘುಕುಲ ಸಮನ್ವಯ ಶಾಲೆ ಉದ್ಘಾಟನೆ
    In (ರಾಜ್ಯ ) ಜಿಲ್ಲೆ
  • ಸಚಿವ ಎಂ ಬಿ ಪಾಟೀಲ ಜಿಲ್ಲಾ ಪ್ರವಾಸ ಇಂದು
    In (ರಾಜ್ಯ ) ಜಿಲ್ಲೆ
  • ನೀಟ್ ಪರೀಕ್ಷೆಯಲ್ಲಿ ಮಹಮ್ಮದ್ ಯಾಸೀನ್ 3226ನೇ ರ‍್ಯಾಂಕ್
    In (ರಾಜ್ಯ ) ಜಿಲ್ಲೆ
  • ಮತದಾರರ ಪಟ್ಟಿ ಪರಿಷ್ಕರಣೆ: 15.24 ಲಕ್ಷ ಗಣತಿ ಫಾರಂ ಡಿಜಿಟಲೀಕರಣ
    In (ರಾಜ್ಯ ) ಜಿಲ್ಲೆ
  • ಇಂಡಿಯಲ್ಲಿ ಸಂಚಲನ: ಎರಡೂವರೆ ತಿಂಗಳ ಬಳಿಕ ಕೊಲೆ ಆರೋಪದ ತಿರುವು
    In (ರಾಜ್ಯ ) ಜಿಲ್ಲೆ
  • ಸಿಂದಗಿಯಲ್ಲಿ ಜು.೨೭ ರಂದು ಪತ್ರಿಕಾ ದಿನಾಚರಣೆ
    In (ರಾಜ್ಯ ) ಜಿಲ್ಲೆ
  • ಶ್ರೀ ಖಾಸ್ಗತರ ಗದ್ದುಗೆ ದರ್ಶನ ಪಡೆದ ಶಾಸಕ ರಾಜುಗೌಡ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.