ಗೋಲಗೇರಿ: ರಾಯಚೂರು ಜಿಲ್ಲೆಯ ಸಿರವಾರ್ ಪಟ್ಟಣದಲ್ಲಿ ಹಜರತ್ ಟಿಪ್ಪು ಸುಲ್ತಾನ್ ರವರ ಭಾವಚಿತ್ರಕ್ಕೆ ಆದ ಅಪಮಾನ ಖಂಡಿಸಿ, ಗೋಲಗೇರಿಯಲ್ಲಿ ಕರ್ನಾಟಕ ರಾಜ್ಯ ಟಿಪ್ಪು ಸುಲ್ತಾನ್ ಅಭಿಮಾನಿಗಳ ಮಹಾ ವೇದಿಕೆ(ರಿ) ಹಾಗೂ ಟಿಪ್ಪು ಕ್ರಾಂತಿ ಸೇನೆ(ರಿ) ಪ್ರಗತಿಪರ ಸಂಘಟನೆಗಳ ಒಕ್ಕೂಟದಿಂದ ಗ್ರಾಮ ಲೆಕ್ಕಾಧಿಕಾರಿಗಳ ಮುಖಾಂತರ ಆರೋಪಿಗಳಿಗೆ ಕಠಿಣ ಶಿಕ್ಷೆ ವಿಧಿಸಿ ರಾಜ್ಯದಿಂದ ಗಡಿ ಪಾರು ಮಾಡುವಂತೆ ಗೃಹಮಂತ್ರಿಗಳಿಗೆ ಮನವಿ ಸಲ್ಲಿಸಲಾಯಿತು.
ಈ ಸಂದರ್ಭದಲ್ಲಿ ಮಾತನಾಡಿದ ಕರ್ನಾಟಕ ರಾಜ್ಯ ಟಿಪ್ಪು ಸುಲ್ತಾನ್ ಅಭಿಮಾನಿಗಳ ಮಹಾವೇದಿಕೆಯ ಜಿಲ್ಲಾ ಯುವ ಅಧ್ಯಕ್ಷ ಮೋದಿನ್ ಶಾಬಾದಿ ಮಾತನಾಡಿ, ರಾಯಚೂರು ಜಿಲ್ಲೆಯ ಸಿರವಾರ್ ಪಟ್ಟಣದಲ್ಲಿರುವ ಸ್ವಾತಂತ್ರ್ಯ ಹೋರಾಟಗಾರ ಟಿಪ್ಪು ಸುಲ್ತಾನ್ ಅವರ ಭಾವಚಿತ್ರಕ್ಕೆ ಅವಮಾನ ಮಾಡಿದ ನೀಚ ಮನಸ್ಸಿನ ಕಿಡಿಗೇಡಿಗಳನ್ನು ಕೂಡಲೇ ಬಂಧಿಸಿ ಕಠಿಣ ಶಿಕ್ಷೆಗೆ ಒಳಪಡಿಸಬೇಕೆಂದು ಆಗ್ರಹಿಸಿದರು
ತಳವಾರ ಸಮಾಜದ ಮುಖಂಡ ಮಡಿವಾಳ ನಾಯ್ಕೋಡಿ ಮಾತನಾಡಿದರು.
ಈ ಸಂದರ್ಭದಲ್ಲಿ ಕಾಂಗ್ರೆಸ್ ಪಕ್ಷದ ಮುಖಂಡರಾದ ಶಿವು.ಹತ್ತಿ, ರವಿರಾಜ ದೇವರಮನಿ, ವಿಜುಗೌಡ ಬಿರಾದಾರ, ಶ್ರೀಶೈಲ ಜಾಲವಾದಿ, ಬಸವರಾಜ ಮಾರಲಭಾವಿ, ಸೈಪನ್ ಕೋರವಾರ, ಅಜೀಜ್ ಭಾಗವಾನ, ಸಲೀಮ್ ಭಾಗವಾನ, ರಮೇಶ ತಳವಾರ, ಸಂತೋಷ ಸಾಲಿ ಸೇರಿದಂತೆ ಅನೇಕರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.
Subscribe to Updates
Get the latest creative news from FooBar about art, design and business.
Related Posts
Add A Comment

