ಬಸವನಬಾಗೇವಾಡಿ: ಸಂವಿಧಾನ ದಿನಾಚರಣೆ ಅಂಗವಾಗಿ ಫೆಬ್ರುವರಿ ೧೦ ರಿಂದ ೧೪ ರವರೆಗೆ ನಡೆಯುವ ಸಂವಿಧಾನ ಜಾಗೃತಿ ಜಾಥಾ ಸ್ಥಬ್ದಚಿತ್ರ ಮೆರವಣಿಗೆಯನ್ನು ರಾಷ್ಟ್ರೀಯ ಹಬ್ಬದ ಮಾದರಿಯಲ್ಲಿ ಆಚರಿಸುವಲ್ಲಿ ಅಧಿಕಾರಿಗಳು ಸನ್ನದರಾಗಬೇಕು ಎಂದು ತಹಶೀಲ್ದಾರ ಯಮನಪ್ಪ ಸೋಮನಕಟ್ಟಿ ಹೇಳಿದರು.
ಪಟ್ಟಣದ ನೂತನ ಪುರಸಭೆಯ ಸಭಾಭವನದಲ್ಲಿ ಗುರುವಾರ ನಡೆದ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದ ಅವರು ಫೆ, ೧೦ ರಂದು ಮುತ್ತಗಿ ಗ್ರಾಮಕ್ಕೆ ಆಗಮಿಸುವ ಜಾಗೃತಿ ಜಾಥಾವನ್ನು ಸಕಲ ಸರ್ಕಾರಿ ಗೌರವದೊಂದಿಗೆ ಅದ್ದೂರಿಯಾಗಿ ಬರಮಾಡಿಕೊಳ್ಳಲಾಗುವದು ನಂತರ ಯರನಾಳ ಮಾರ್ಗವಾಗಿ ಜಾಗೃತಿ ನಾಲ್ಕು ದಿನಗಳ ಕಾಲ ಜಾಗೃತಿ ಜಾತಾ ತಾಲೂಕಿನ ವಿವಿಧ ಗ್ರಾಮ ಪಂಚಾಯತ ವ್ಯಾಪ್ತಿಯಲ್ಲಿ ಸಂಚರಿಸಲಿದೆ, ಸಂವಿಧಾನ ದಿನಾಚರಣೆ ಪ್ರಯುಕ್ತ ತಾಲೂಕಿನ ಎಲ್ಲ ಶಾಲಾ ಕಾಲೇಜುಗಳಲ್ಲಿ ಸಂವಿಧಾನದ ಜಾಗೃತಿ ಮೂಡಿಸುವ ನಿಟ್ಟಿನಲ್ಲಿ ಮಕ್ಕಳಿಗೆ ವಿಶೇಷವಾಗಿ ಪ್ರಬಂದ ಸೇರಿದಂತೆ ವಿವಿಧ ಚಟುವಟಿಕೆಗಳನ್ನ ಏರ್ಪಡಿಸುವ ಮೂಲಕ ಮಕ್ಕಳಿಗೆ ಸಂವಿಧಾನದ ಮಹತ್ವವನ್ನು ತಿಳಿಸಲಾಗುತ್ತದೆ. ಫೆ, ೧೧ ರಂದು ನಡೆಯುವ ಸಂವಿಧಾನ ಜಾಗೃತಿ ಜಾಥಾ ಕಾರ್ಯಕ್ರಮದಲ್ಲಿ ವಿಜೇತರಿಗೆ ಬಹುಮಾನ ವಿತರಿಸಲಾಗುವದು. ಕಾರ್ಯಕ್ರಮದ ಯಶಸ್ವಿಗೆ ತಾಲೂಕಿನಲ್ಲಿ ನಾಲ್ಕು ಜನ ನೂಡಲ್ ಅಧಿಕಾರಿಗಳನ್ನ ನೇಮಿಸಲಾಗಿದೆ ಎಂದರು.
ಈ ಸಂಧರ್ಬದಲ್ಲಿ ಪುರಸಭೆ ಮುಖ್ಯಧಿಕಾರಿ ರುದ್ರೇಶ ಚಿತ್ತರಗಿ, ಸಮಾಜ ಕಲ್ಯಾಣ ಇಲಾಖೆ ಭವಾನಿ ಪಾಟೀಲ, ಕ್ಷೇತ್ರ ಶಿಕ್ಷಣಾಧಿಕಾರಿ ವಸಂತ ರಾಠೋಡ ಸೇರಿದಂತೆ ವಿವಿಧ ಇಲಾಖೆ ಅಧಿಕಾರಿಗಳು ಹಾಗೂ ವಿವಿಧ ಸಂಘಟನೆ ಸದಸ್ಯರು ಹಾಗೂ ಪುರಸಬೆ ಸದಸ್ಯರು ಸಭೆಯಲ್ಲಿ ಭಾಗವಹಿಸಿದ್ದರು.
Subscribe to Updates
Get the latest creative news from FooBar about art, design and business.
Related Posts
Add A Comment

