Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಜಿಲ್ಲಾ ಕಸಾಪ ದತ್ತಿ ಪ್ರಶಸ್ತಿಗೆ ಆಯ್ಕೆ :ಇಂದು ಪ್ರದಾನ

ಮಾ.೨೨ ರಂದು ಸಂವಿಧಾನ ಜಾಗೃತಿ ಸಮಾವೇಶ :ಮಯೂರ

ಅವಕಾಶ ವಂಚಿತ ಮಹಿಳೆಯರಿಗೆ ಅವಕಾಶ ನೀಡಿ :ಉಜ್ವಲಾ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಮೌಡ್ಯ – ಕಂದಾಚಾರ – ಕರ್ಮ ಸಿದ್ಧಾಂತ ತಿರಸ್ಕರಿಸಿ
(ರಾಜ್ಯ ) ಜಿಲ್ಲೆ

ಮೌಡ್ಯ – ಕಂದಾಚಾರ – ಕರ್ಮ ಸಿದ್ಧಾಂತ ತಿರಸ್ಕರಿಸಿ

By Updated:No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಗ್ಯಾರಂಟಿ ಯೋಜನೆಗಳನ್ನು ಬಿಟ್ಟಿ ಗ್ಯಾರಂಟಿ ಎನ್ನದಿರಿ |

ಗ್ರಾಮೀಣ ಪತ್ರಕರ್ತರಿಗೆ ಉಚಿತ ಬಸ್ ಪಾಸ್ | ಪತ್ರಕರ್ತರಿಗೆ ರಾಜಕೀಯ ಬೇಡ | ಸುದ್ದಿ ವಸ್ತುನಿಷ್ಠವಾಗಿರಲಿ

ಪತ್ರಕರ್ತರ ರಾಜ್ಯ ಮಟ್ಟದ ಸಮ್ಮೇಳನದಲ್ಲಿ ಸಿಎಂ ಸಿದ್ಧರಾಮಯ್ಯ ಕರೆ

ದಾವಣಗೆರೆ: ಗ್ರಾಮೀಣ ಪತ್ರಕರ್ತರಿಗೆ ಉಚಿತ ಬಸ್ ಪಾಸ್ ನೀಡುವ ಬಗ್ಗೆ ಗಂಭೀರವಾಗಿ ಪರಿಶೀಲಿಸಿ ಬಜೆಟ್‌ನಲ್ಲಿ ಸೂಕ್ತ ತೀರ್ಮಾನ ಕೈಗೊಳ್ಳುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ ನೀಡಿದರು.
ನಗರದ ಪಾರ್ವತಮ್ಮ ಶಾಮನೂರು ಶಿವಶಂಕರಪ್ಪ ಕಲ್ಯಾಣ ಮಂಟಪದಲ್ಲಿ ನಡೆಯುತ್ತಿರುವ ರಾಜ್ಯ ಮಟ್ಟದ ೩೮ನೇ ಸಮ್ಮೇಳನದಲ್ಲಿ ಮಾತನಾಡಿದ ಅವರು, ನಿಮ್ಮೊಂದಿಗೆ ನಾವಿರುತ್ತೇವೆ. ನಾವು ಒಳ್ಳೆಯ ಕೆಲಸ ಮಾಡಿದರೆ ಒಳ್ಳೆಯದನ್ನು ಬರೆಯಿರಿ, ಕೆಟ್ಟದ್ದನ್ನು ಮಾಡಿದರೆ ಕೆಟ್ಟದ್ದು ಬರೆಯಿರಿ. ಒಳ್ಳೆಯದನ್ನು ಕೆಟ್ಟದ್ದೆಂದು ಬಿಂಬಿಸಬಾರದು ಎಂದು ಸಲಹೆ ನೀಡಿದರು.
ಮೌಡ್ಯ, ಕಂದಾಚಾರ, ಕರ್ಮ ಸಿದ್ಧಾಂತವನ್ನು ಪತ್ರಕರ್ತರು ತಿರಸ್ಕರಿಸಿ ಜನರಿಗೆ ಸತ್ಯ ಹೇಳುವ ಧೈರ್ಯ ಬೆಳೆಸಿಕೊಳ್ಳಿ. ಪತ್ರಕರ್ತರಿಗೆ ರಾಜಕೀಯ ಬೇಕಾಗಿಲ್ಲ. ವಸ್ತುನಿಷ್ಠವಾಗಿ ಇರಬೇಕು. ನಾಡಿನ ಬಡವರು ಮತ್ತು ಮಧ್ಯಮ ವರ್ಗದವರ ಆರ್ಥಿಕ ಶಕ್ತಿ ಹೆಚ್ಚಿಸುವ ಗ್ಯಾರಂಟಿ ಯೋಜನೆಗಳನ್ನು ಪತ್ರಕರ್ತರು ಬಿಟ್ಟಿ ಗ್ಯಾರಂಟಿ ಎಂದು ಕರೆಯಬಾರದು. ಪಕ್ಷಾತೀತ, ಜಾತ್ಯತೀತ, ಧರ್ಮಾತೀತವಾಗಿ ಇರುವ ಈ ಯೋಜನೆಯನ್ನು ಬಿಟ್ಟಿ ಗ್ಯಾರಂಟಿ ಎಂದು ಕರೆಯದೆ, ನೀವೇ ಪರಿಶೀಲಿಸಿ ಬರೆಯಿರಿ. ಏನನ್ನಾದರೂ ಪ್ರಕಟಿಸುವ ಮೊದಲು ಪರಿಶೀಲನೆ ನಡೆಸಿ ಎಂದು ಸಲಹೆ ನೀಡಿದರು.
ಪಟ್ಟಭದ್ರರನ್ನು ಗುರುತಿಸಿ ಮಟ್ಟ ಹಾಕುವ ನಿಷ್ಠುರತೆಯನ್ನು ಪತ್ರಕರ್ತರು ಬೆಳೆಸಿಕೊಳ್ಳಬೇಕು. ಗಂಡ-ಹೆಂಡತಿ ಜಗಳವನ್ನು ಇಡೀ ದಿನ ತೋರಿಸುವುದಕ್ಕಿಂತ, ಸಮಾಜದ ಬೆಳವಣಿಗೆಗೆ ಅಡ್ಡಿ ಆಗಿರುವ ಪಟ್ಟಭದ್ರರನ್ನು ಗುರುತಿಸಿ ಬರೆಯಿರಿ. ಇದರಿಂದ ಸಮಾಜಮುಖಿ ಪತ್ರಿಕೋದ್ಯಮ ಸಾಧ್ಯ ಎಂದರು.
ಹಣವಂತರು, ಅತೀ ಶ್ರೀಮಂತರ ಕೈಯಲ್ಲಿ ಪತ್ರಿಕೋದ್ಯಮ ಸಿಲುಕಿದೆ. ಹೀಗಾಗಿ ಶ್ರೀಮಂತರ ಹಿತಾಸಕ್ತಿ ಕಾಯುವ, ಬಡವರ ಹಿತಾಸಕ್ತಿಗೆ ವಿರುದ್ಧವಾಗಿ ಬರೆಯುವ ಅಪಾಯ ಇರುತ್ತದೆ. ಇದನ್ನು ಪರಿಶೀಲಿಸಿಕೊಳ್ಳಿ. ನಾನು ಅಭಿವ್ಯಕ್ತಿ ಸ್ವಾತಂತ್ರ‍್ಯದ ಪರವಾಗಿ ಇರುವವನು, ಬೆಂಬಲಿಸುವವನು. ಅಭಿವ್ಯಕ್ತಿ ಸ್ವಾತಂತ್ರ‍್ಯಕ್ಕೆ ಘನತೆ ತರುವಂತೆ ಮಾಡಬೇಕು ಎಂದರು.
ಸ್ವಾತಂತ್ರ‍್ಯಾಪೂರ್ವದ ಪತ್ರಿಕೋದ್ಯಮದಲ್ಲಿ ದೇಶಕ್ಕೆ ಸ್ವಾತಂತ್ರ‍್ಯ ತರಬೇಕು ಎನ್ನುವ ಆಶಯ ಪ್ರಧಾನವಾಗಿ ಕೆಲಸ ಮಾಡಿತ್ತು. ಸ್ವಾತಂತ್ರ‍್ಯಾನಂತರ ಪ್ರಜಾಪ್ರಭುತ್ವವನ್ನು ಕಾಯುವ, ರಕ್ಷಿಸುವ ಆಶಯ ಪ್ರಮುಖವಾಗಿದೆ ಎಂದರು.
ಪತ್ರಿಕಾ ವೃತ್ತಿ ಸಮಾಜದ ಅಸಮಾನತೆ ಹೋಗಲಾಡಿಸಲು, ಅವಕಾಶ ವಂಚಿತರ ಪರವಾಗಿ, ಮೀಸಲಾತಿಯ ಆಶಯಗಳ ಪರವಾಗಿ ಇರಬೇಕು. ಇದರಿಂದ ಸಾಮಾಜಿಕ ನ್ಯಾಯಯನ್ನು ದ್ವನಿ ಇಲ್ಲದವರಿಗೆ ಕೊಡಲು ಸಾಧ್ಯ. ಹೀಗಾದಾಗ ಬಸವಣ್ಣನವರ ಸಮ ಸಮಾಜದ ಆಶಯ ಈಡೇರಲು ಸಾಧ್ಯ. ಪತ್ರಕರ್ತರು ಇದಕ್ಕೆ ಪೂರಕವಾಗಿ ವಸ್ತುನಿಷ್ಠವಾಗಿ ಕೆಲಸ ಮಾಡಬೇಕು ಎಂದರು.
ಮುಖ್ಯಮಂತ್ರಿ ಮಾಧ್ಯಮ ಸಲಹೆಗಾರರಾದ ಕೆ.ವಿ.ಪ್ರಭಾಕರ್ ಅವರ ಸಹಯೋಗದಲ್ಲಿ ನಡೆದ ಸಮ್ಮೇಳನದ ಅಧ್ಯಕ್ಷತೆಯನ್ನು ಅಧ್ಯಕ್ಷ ಶಿವಾನಂದ ತಗಡೂರು ವಹಿಸಿದ್ದರು.
ಮಾಜಿ ಸಚಿವರಾದ ಶಾಮನೂರು ಶಿವಶಂಕರಪ್ಪ, ತೋಟಗಾರಿಕಾ ಸಚಿವ ಎಸ್.ಎಸ್.ಮಲ್ಲಿಕಾರ್ಜುನ್, ಸಾರಿಗೆ ಸಚಿವ ರಾಮಲಿಂಗಾರೆಡ್ಡಿ, ಶಾಸಕರಾದ ಬಸವಂತಪ್ಪ, ಡಿ.ಜಿ.ಶಾಂತನಗೌಡ, ಇನ್ ಸೈಟ್ ಸಂಸ್ಥೆ ಸಂಸ್ಥಾಪಕ ನಿರ್ದೇಶಕ ಜಿ.ಬಿ.ವಿನಯ್‌ಕುಮಾರ್ ಸೇರಿ ಸಂಘದ ಪದಾಧಿಕಾರಿಗಳು ಇದ್ದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಜಿಲ್ಲಾ ಕಸಾಪ ದತ್ತಿ ಪ್ರಶಸ್ತಿಗೆ ಆಯ್ಕೆ :ಇಂದು ಪ್ರದಾನ

ಮಾ.೨೨ ರಂದು ಸಂವಿಧಾನ ಜಾಗೃತಿ ಸಮಾವೇಶ :ಮಯೂರ

ಅವಕಾಶ ವಂಚಿತ ಮಹಿಳೆಯರಿಗೆ ಅವಕಾಶ ನೀಡಿ :ಉಜ್ವಲಾ

ಅಂಬರ ಚುಂಬಿತ ಪ್ರೇಮ ಪ್ರೇಮ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಜಿಲ್ಲಾ ಕಸಾಪ ದತ್ತಿ ಪ್ರಶಸ್ತಿಗೆ ಆಯ್ಕೆ :ಇಂದು ಪ್ರದಾನ
    In (ರಾಜ್ಯ ) ಜಿಲ್ಲೆ
  • ಮಾ.೨೨ ರಂದು ಸಂವಿಧಾನ ಜಾಗೃತಿ ಸಮಾವೇಶ :ಮಯೂರ
    In (ರಾಜ್ಯ ) ಜಿಲ್ಲೆ
  • ಅವಕಾಶ ವಂಚಿತ ಮಹಿಳೆಯರಿಗೆ ಅವಕಾಶ ನೀಡಿ :ಉಜ್ವಲಾ
    In (ರಾಜ್ಯ ) ಜಿಲ್ಲೆ
  • ಅಂಬರ ಚುಂಬಿತ ಪ್ರೇಮ ಪ್ರೇಮ
    In ವಿಶೇಷ ಲೇಖನ
  • ಅಗ್ನಿ ಅವಘಡ: ರೂ.50 ಲಕ್ಷ ಮೌಲ್ಯದ ವಸ್ತುಗಳು ಭಸ್ಮ!
    In (ರಾಜ್ಯ ) ಜಿಲ್ಲೆ
  • ಏತ ನೀರಾವರಿ ಯೋಜನೆಯ ಪ್ರಾರಂಭಕ್ಕೆ ಆಗ್ರಹಿಸಿ ಮನವಿ
    In (ರಾಜ್ಯ ) ಜಿಲ್ಲೆ
  • ಇಡ್ಲಿ-ವಡೆ ಜೊತೆಗೆ ಗ್ಯಾಸ್​ಗೂ ಬಿಲ್! :ಭಾರಿ ವೈರಲ್
    In (ರಾಜ್ಯ ) ಜಿಲ್ಲೆ
  • ಸಚಿವ ಎಂ.ಬಿ.ಪಾಟೀಲ ಜಿಲ್ಲಾ ಪ್ರವಾಸ
    In (ರಾಜ್ಯ ) ಜಿಲ್ಲೆ
  • ವಿಜಯಪುರ ಜಿಲ್ಲೆಯಲ್ಲಿ ಗೃಹ ಬಳಕೆ ಸಿಲಿಂಡರ್ ಕೊರತೆ ಇಲ್ಲ
    In (ರಾಜ್ಯ ) ಜಿಲ್ಲೆ
  • ಸಿಲಿಂಡರ್ ಸ್ಟಾಕ್ ಇಲ್ಲ :ಸಚಿವ ಮುನಿಯಪ್ಪ!
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.