ಬಸವನ ಬಾಗೇವಾಡಿ: ನಾಡಿನಲ್ಲಿ ಮಠಗಳು ಬಸವಣ್ಣನವರ ಕಾಯಕ, ದಾಸೋಹ ತತ್ವ ಅಳವಡಿಸಿಕೊಳ್ಳುವ ಮೂಲಕ ಜನಪರ ಕಾರ್ಯಗಳನ್ನು ಮಾಡುತ್ತಿವೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಹೇಳಿದರು.
ತಾಲೂಕಿನ ಮನಗೂಳಿಯಲ್ಲಿ ಲಿಂ.ಡಾ.ಮಹಾಂತ ಶಿವಾಚಾರ್ಯ ಸ್ವಾಮೀಜಿಯವರ 11ನೇ ಪುಣ್ಯಾರಾಧನೆ, ಅಭಿನವ ಸಂಗನಬಸವ ಶಿವಾಚಾರ್ಯ ಸ್ವಾಮೀಜಿಯವರ ಪಟ್ಟಾಧಿಕಾರದ ದಶಮಾನೋತ್ಸವ, ಸಂಗನಬಸವ ಕಲ್ಯಾಣಮಂಟಪ, ನೂತನ ರಥೋತ್ಸವ ಲೋಕಾರ್ಪಣೆ ಸಾಮೂಹಿಕ ವಿವಾಹದ ಅಂಗವಾಗಿ ಭಾನುವಾರ ಹಮ್ಮಿಕೊಂಡಿದ್ದ ಧರ್ಮಸಭೆ ಉದ್ಘಾಟಿಸಿ ಮಾತನಾಡಿದ ಅವರು, ರಾಜ್ಯದ ಮಠಗಳು ನಾಡಿನ ಅಭಿವೃದ್ಧಿ ಶ್ರಮಿಸುತ್ತಿರುವದು ಶ್ಲಾಘನೀಯ. ರಾಜ್ಯಕ್ಕೆ ಶಕ್ತಿ ತುಂಬುವ ಕೆಲಸ ಮಠಗಳು ಮಾಡುತ್ತಿವೆ ಎಂದು ಹೇಳಿದರು.
ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪನವರು ಮಠಗಳ ಅಭಿವೃದ್ಧಿಗೆ ಆರ್ಥಿಕ ಶಕ್ತಿ ತುಂಬುವ ಕೆಲಸ ಮಾಡಿದ್ದಾರೆ. ಮಠಾಧೀಶರ, ಜನರ ಆಶೀರ್ವಾದದಿಂದ ನಾಲ್ಕು ಬಾರಿ ಮುಖ್ಯಮಂತ್ರಿಯಾಗಿ ರಾಜ್ಯದ ಅಭಿವೃದ್ಧಿಗೆ ಶ್ರಮಿಸಿದ್ದಾರೆ. ರೈತ ಕುಟುಂಬದಲ್ಲಿ ಜನಿಸಿರುವ ನನ್ನ ತಂದೆ ರೈತರು, ಸೈನಿಕರನ್ನು ಎರಡು ಕಣ್ಣುಗಳೆಂದು ತಿಳಿದು ರೈತರ ಹೆಸರಿನಲ್ಲಿ ಪ್ರಮಾಣವಚನ ಸ್ವೀಕರಿಸಿದ್ದರು ಎಂದು ಹೇಳಿದರು.
ರಾಜ್ಯದಲ್ಲಿ ಭೀಕರ ಬರಗಾಲ ಇದೆ. ತೋಟಗಾರಿಕೆ ಬೆಳೆಗೆ ಸಮರ್ಪಕ ವಿದ್ಯುತ್ ಸಿಗುತ್ತಿಲ್ಲ. ರೈತರು ಮಕ್ಕಳೊಂದಿಗೆ ಗೂಳೆ ಹೋಗುವ ಪರಿಸ್ಥಿತಿ ನಿರ್ಮಾಣವಾಗಿದೆ. ಮುಂಬರುವ ದಿನಗಳಲ್ಲಿ ಸರಿಯಾದ ಮಳೆ, ಬೆಳೆ ಬರಲಿ ಎಂದು ಪ್ರಾರ್ಥಿಸುತ್ತೇನೆ. ನನ್ನ ಜೀವನವನ್ನು ರೈತರ ಪರವಾಗಿ ಮುಡಿಪಾಗಿಡುತ್ತೇನೆ ಎಂದು ಹೇಳಿದರು.
ಸಾನಿಧ್ಯ ವಹಿಸಿದ್ದ ಹುಬ್ಬಳ್ಳಿಯ ಡಾ.ಗುರುಸಿದ್ದ ರಾಜಯೋಗೀಂದ್ರ ಸ್ವಾಮೀಜಿ ಮಾತನಾಡಿದರು.
ಗದಗದ ಡಾ.ತೋಂಟದ ಸಿದ್ಧರಾಮ ಸ್ವಾಮೀಜಿ ಮಾತನಾಡಿದರು.
ವೀರಶೈವ ಲಿಂಗಾಯತ ಪಂಚಮಸಾಲಿ ಪೀಠದ ಡಾ.ಮಹಾದೇವ ಶಿವಾಚಾರ್ಯ ಸ್ವಾಮೀಜಿ, ಬಳಗಾನೂರದ ಮಂಜುಳಾತಾಯಿ, ಮುತ್ತಗಿಯ ರುದ್ರಮುನಿ ಶಿವಾಚಾರ್ಯ ಸ್ವಾಮೀಜಿ, ನೇತೃತ್ವ ವಹಿಸಿದ್ದ ಅಭಿನವ ಸಂಗನಬಸವ ಶಿವಾಚಾರ್ಯ ಸ್ವಾಮೀಜಿ, ಅಧ್ಯಕ್ಷತೆ ವಹಿಸಿದ್ದ ಬೀಜ ಮತ್ತು ಸಾವಯವ ಪ್ರಮಾಣ ಸಂಸ್ಥೆಯ ಮಾಜಿ ಅಧ್ಯಕ್ಷ ವಿಜುಗೌಡ ಪಾಟೀಲ, ಸಹಕಾರ ಮಹಾಮಂಡಳ ನಿರ್ದೇಶಕ ಈರಣ್ಣ ಪಟ್ಟಣಶೆಟ್ಟಿ, ಲಿಂಬೆ ಅಭಿವೃದ್ಧಿ ಮಂಡಳಿ ನಿಗಮದ ಮಾಜಿ ಅಧ್ಯಕ್ಷ ಅಶೋಕ ಅಲ್ಲಾಪೂರ, ಸಾಹಿತಿ ಪ.ಗು.ಸಿದ್ದಾಪುರ ಮಾತನಾಡಿದರು.
ಮಾಜಿ ಸಚಿವರಾದ ಎಸ್.ಕೆ.ಬೆಳ್ಳುಬ್ಬಿ, ಅಪ್ಪಾಸಾಹೇಬಗೌಡ ಪಾಟೀಲ, ಮಾಜಿ ಶಾಸಕರಾದ ಸೋಮನಗೌಡ ಪಾಟೀಲ, ರಮೇಶ ಭೂಸನೂರ, ಬಿಜೆಪಿ ಜಿಲ್ಲಾ ಅಧ್ಯಕ್ಷ ಆರ್.ಎಸ್.ಕೂಚಬಾಳ, ಮುಖಂಡರಾದ ಉಮೇಶ ಕಾರಜೋಳ, ರವಿ ಖಾನಾಪೂರ, ರಘು ಕೌಟಿಲ್ಯ ಇದ್ದರು.
ವಿಡಿಸಿಸಿ ಬ್ಯಾಂಕ್ ನಿರ್ದೇಶಕ ಚಂದ್ರಶೇಖರಗೌಡ ಪಾಟೀಲ ಸ್ವಾಗತಿಸಿದರು. ಸಂಗಮೇಶ ಗೆಣ್ಣೂರ, ಕೆ.ಸುನಂದಾ ನಿರೂಪಿಸಿದರು.
Subscribe to Updates
Get the latest creative news from FooBar about art, design and business.
Related Posts
Add A Comment

