Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಜಿಲ್ಲಾ ಕಸಾಪ ದತ್ತಿ ಪ್ರಶಸ್ತಿಗೆ ಆಯ್ಕೆ :ಇಂದು ಪ್ರದಾನ

ಮಾ.೨೨ ರಂದು ಸಂವಿಧಾನ ಜಾಗೃತಿ ಸಮಾವೇಶ :ಮಯೂರ

ಅವಕಾಶ ವಂಚಿತ ಮಹಿಳೆಯರಿಗೆ ಅವಕಾಶ ನೀಡಿ :ಉಜ್ವಲಾ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಜಿಲ್ಲೆಯ ನಿರುದ್ಯೋಗಿಗಳು ನೊಂದಾಯಿಸಿಕೊಳ್ಳಲು ಕ್ರಮ ವಹಿಸಿ :ಡಿಸಿ ಟಿ.ಭೂಬಾಲನ್
(ರಾಜ್ಯ ) ಜಿಲ್ಲೆ

ಜಿಲ್ಲೆಯ ನಿರುದ್ಯೋಗಿಗಳು ನೊಂದಾಯಿಸಿಕೊಳ್ಳಲು ಕ್ರಮ ವಹಿಸಿ :ಡಿಸಿ ಟಿ.ಭೂಬಾಲನ್

By Updated:No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಫೆ.೨೬-೨೭ ರಂದು ಬೆಂಗಳೂರಿನಲ್ಲಿ ಬೃಹತ್ ಉದ್ಯೋಗ ಮೇಳ

ವಿಜಯಪುರ: ಬೆಂಗಳೂರಿನ ಅರಮನೆ ಮೈದಾನದಲ್ಲಿ ಫೆ.೨೬ ಹಾಗೂ ೨೭ ರಂದು ರಾಜ್ಯ ಮಟ್ಟದ ಯುವ ಬೃಹತ್ ಉದ್ಯೋಗ ಮೇಳ-೨೦೨೪ ಅಯೋಜಿಸಲಾಗಿದ್ದು, ಈ ಉದ್ಯೋಗ ಮೇಳದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಜಿಲ್ಲೆಯ ನಿರುದ್ಯೋಗಿಗಳು ಭಾಗವಹಿಸಲು ನೋಂದಣಿಗೆ ಅಗತ್ಯ ಕ್ರಮ ಕೈಗೊಳ್ಳುವಂತೆ ಜಿಲ್ಲಾಧಿಕಾರಿ ಟಿ.ಭೂಬಾಲನ್ ಅವರು ಸೂಚನೆ ನೀಡಿದರು.
ಜಿಲ್ಲಾ ಕೌಶಲ್ಯ ಮಿಷನ್ ಅಧ್ಯಕ್ಷರಾದ ಟಿ.ಭೂಬಾಲನ್ ಅವರ ಅಧ್ಯಕ್ಷತೆಯಲ್ಲಿ ಸೋಮವಾರ ಜಿಲ್ಲಾಧಿಕಾರಗಳ ಸಭಾ ಭವನದಲ್ಲಿ ಜರುಗಿದ ಜಿಲ್ಲಾ ಕೌಶಲ್ಯ ಮಿಷನ್ ಸಮಿತಿ ಸಭೆಯಲ್ಲಿ, ಸದರಿ ಉದ್ಯೋಗ https://skillconnect.kaushalkar.com ಪೋರ್ಟಲ್‌ದಲ್ಲಿ ನೋಂದಣಿ ಮಾಡಿಸುವಂತೆ ಎಲ್ಲಾ ಜಿಲ್ಲಾ ಮಟ್ಟದ ಅಧಿಕಾರಿಗಳಿಗೆ ಹಾಗೂ ಉಪ ನಿರ್ದೇಶಕರು, ಪದವಿ ಪೂರ್ವ ಶಿಕ್ಷಣ ಇಲಾಖೆ ಮತ್ತು ಉಪ ನಿರ್ದೇಶಕರು, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ, ವಿಜಯಪುರ ಇವರಿಗೆ ಜಿಲ್ಲಾಧಿಕಾರಿಗಳು ಸೂಚಿಸಿದರು.
ಜಿಲ್ಲೆಯ ನಿರುದ್ಯೋಗಿಗಳು ರಾಜ್ಯಮಟ್ಟದ ಉದ್ಯೋಗ ಮೇಳದಲ್ಲಿ ಭಾಗವಹಿಸಿ ಉದ್ಯೋಗ ದೊರೆಯಲು ಅನುಕೂಲವಾಗುವಂತೆ ವ್ಯಾಪಕ ಪ್ರಚಾರ ಕೈಗೊಳ್ಳಬೇಕು. ಗ್ರಾಮ ಪಂಚಾಯತ್, ನಗರ ಸ್ಥಳೀಯ ಸಂಸ್ಥೆಗಳ ಸ್ವಚ್ಛವಾಹಿನಿಯ ಮೂಲಕ ವ್ಯಾಪಕ ಪ್ರಚಾರ ಕೈಗೊಳ್ಳಬೇಕು. ಆಶಾ-ಅಂಗನವಾಡಿ ಕಾರ್ಯಕರ್ತೆಯರು, ಸಮುದಾಯ ಸಂಪನ್ಮೂಲ ವ್ಯಕ್ತಿಗಳ ಮೂಲಕ ಗ್ರಾಮಗಳಲ್ಲಿ ಉದ್ಯೊಗ ಮೇಳ ಕುರಿತು ವ್ಯಾಪಕ ಮಾಹಿತಿ ಒದಗಿಸಬೇಕು. ಉದ್ಯೋಗ ಮೇಳಕ್ಕೆ ಸಂಬಂಧಿಸಿದಂತೆ, ಜಿಂಗಲ್ ತಯಾರಿಸಿ, ಎಲ್ಲಾ ನಗರ ಸ್ಥಳೀಯ ಸಂಸ್ಥೆಗಳಿಗೆ ಪ್ರಚುರಪಡಿಸುವಂತೆ ಜಿಲ್ಲಾ ಕೌಶಲ್ಯಾಭಿವೃದ್ಧಿ ಅಧಿಕಾರಿಗಳಿಗೆ ಸೂಚಿಸಿದರು.
ಡೇ-ನಲ್ಮ್ ಅಭಿಯಾನದ ಪಿ.ಎಂ. ಸ್ವ-ನಿಧಿ ೧,೨ಮತ್ತು ೩ನೇ ಹಂತದಲ್ಲಿ ಬಾಕಿ ಇರುವ ಫಲಾನುಭವಿಗಳ ಅರ್ಜಿಗಳನ್ನು ಪಡೆದು, ಸಾಲ ಮಂಜೂರಾತಿ ಹಾಗೂ ಬಿಡುಗಡೆ ಮಾಡಲು, ಸ್ವ-ನಿಧಿ ಸೇ ಸಮೃದ್ಧಿ ಯೋಜನೆಯಡಿ ೮ ಸಾಮಾಜಿಕ ಭದ್ರತಾ ಯೋಜನೆಯಡಿ ಫಲಾನುಭವಿಗಳಿಗೆ ಒದಗಿಸಲು ಕ್ರಮ ವಹಿಸುವಂತೆ ಭದ್ರತಾ ಯೋಜನೆಗಳನ್ನು ಅರ್ಹ ಸಂಬಂಧಿಸಿದ ಇಲಾಖೆಗಳಿಗೆ ಅವರು ಸೂಚಿಸಿದರು.
ಸ್ವ-ಸಹಾಯ ಸಂಘ ರಚನೆ, ಪ್ರದೇಶ ಮಟ್ಟದ ಒಕ್ಕೂಟ, ಸ್ವಯಂ-ಉದ್ಯೋಗ- ವೈಯಕ್ತಿಕ, ಗುಂಪು, ಬ್ಯಾಂಕ್ ಲಿಂಕೇಜ್ ನಲ್ಲಿ ಶೇ ೧೦೦ ರಷ್ಟು ಪ್ರಗತಿ ಸಾಧಿಸಬೇಕು. ಸ್ವ-ನಿಧಿ ಸೇ ಸಮೃದ್ಧಿ ಹಾಗೂ ಸಮಾಜ ಕಲ್ಯಾಣ ಇಲಾಖೆಯಡಿಯ ವಿಶೇಷ ಕೇಂದ್ರೀಯ ನೇರವಿನಡಿ JAY (SCA to SCSP)ಕಾರ್ಯಕ್ರಮದಡಿ ಮತ್ತು ಡೇ-ನಲ್ಮ ಅಭಿಯಾನದಲ್ಲಿ ಬಿಡುಗಡೆಯಾದ ಅನುದಾನ ಶೇ ೧೦೦ ರಷ್ಟು ವೆಚ್ಚ ಮಾಡಲು ನಗರ ಸ್ಥಳೀಯ ಸಂಸ್ಥೆಗಳ ಆಯುಕ್ತರು ಹಾಗೂ ಮುಖ್ಯಾಧಿಕಾರಿಗಳಿಗೆ ಅವರು ಸೂಚಿಸಿದರು.
ಈ ಸಂದರ್ಭದಲ್ಲಿ ಉದ್ಯೋಗ ಮೇಳದ ಪೋಸ್ಟರ್ ಜಿಲ್ಲಾಧಿಕಾರಿ ಟಿ.ಭೂಬಾಲನ್ ಅವರು ಬಿಡುಗಡೆಗೊಳಿಸಿದರು.
ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಮಹಾದೇವ ಮುರಗಿ,ಮಹಾನಗರ ಪಾಲಿಕೆ ಆಯುಕ್ತ ಬದ್ರುದ್ದಿನ ಸೌದಾಗರ್, ಜಿಲ್ಲಾ ಪಂಚಾಯತಿಯ ಉಪ ಕಾರ್ಯದರ್ಶಿ ವಿಜಯ ಅಜೂರ್, ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕ ವಿಜಯಕುಮಾರ್ ಮೆಕ್ಕಳಕಿ,ಮಹಾನಗರ ಪಾಲಿಕೆ ಉಪ ಆಯುಕ್ತ ಮಹಾವೀರ ಬೋರಣ್ಣವರ, ಆಹಾರ ಇಲಾಖೆ ಉಪ ನಿರ್ದೇಶಕ ವಿನಯಕುಮಾರ ಪಾಟೀಲ, ಜಿಲ್ಲಾ ಕೌಶಲ್ಯಾಭಿವೃದ್ದಿ ಅಧಿಕಾರಿ ಸಿ.ಬಿ.ಕುಂಬಾರ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಈರಣ್ಣ ಆಶಾಪೂರ, ಸೇರಿದಂತೆ ವಿವಿಧ ನಗರ ಸ್ಥಳೀಯ ಸಂಸ್ಥೆಗಳ ಮುಖ್ಯಾಧಿಕಾರಿಗಳು ಹಾಗೂ ವಿವಿಧ ಅಧಿಕಾರಿಗಳು ಉಪಸ್ಥಿತರಿದ್ದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಜಿಲ್ಲಾ ಕಸಾಪ ದತ್ತಿ ಪ್ರಶಸ್ತಿಗೆ ಆಯ್ಕೆ :ಇಂದು ಪ್ರದಾನ

ಮಾ.೨೨ ರಂದು ಸಂವಿಧಾನ ಜಾಗೃತಿ ಸಮಾವೇಶ :ಮಯೂರ

ಅವಕಾಶ ವಂಚಿತ ಮಹಿಳೆಯರಿಗೆ ಅವಕಾಶ ನೀಡಿ :ಉಜ್ವಲಾ

ಅಂಬರ ಚುಂಬಿತ ಪ್ರೇಮ ಪ್ರೇಮ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಜಿಲ್ಲಾ ಕಸಾಪ ದತ್ತಿ ಪ್ರಶಸ್ತಿಗೆ ಆಯ್ಕೆ :ಇಂದು ಪ್ರದಾನ
    In (ರಾಜ್ಯ ) ಜಿಲ್ಲೆ
  • ಮಾ.೨೨ ರಂದು ಸಂವಿಧಾನ ಜಾಗೃತಿ ಸಮಾವೇಶ :ಮಯೂರ
    In (ರಾಜ್ಯ ) ಜಿಲ್ಲೆ
  • ಅವಕಾಶ ವಂಚಿತ ಮಹಿಳೆಯರಿಗೆ ಅವಕಾಶ ನೀಡಿ :ಉಜ್ವಲಾ
    In (ರಾಜ್ಯ ) ಜಿಲ್ಲೆ
  • ಅಂಬರ ಚುಂಬಿತ ಪ್ರೇಮ ಪ್ರೇಮ
    In ವಿಶೇಷ ಲೇಖನ
  • ಅಗ್ನಿ ಅವಘಡ: ರೂ.50 ಲಕ್ಷ ಮೌಲ್ಯದ ವಸ್ತುಗಳು ಭಸ್ಮ!
    In (ರಾಜ್ಯ ) ಜಿಲ್ಲೆ
  • ಏತ ನೀರಾವರಿ ಯೋಜನೆಯ ಪ್ರಾರಂಭಕ್ಕೆ ಆಗ್ರಹಿಸಿ ಮನವಿ
    In (ರಾಜ್ಯ ) ಜಿಲ್ಲೆ
  • ಇಡ್ಲಿ-ವಡೆ ಜೊತೆಗೆ ಗ್ಯಾಸ್​ಗೂ ಬಿಲ್! :ಭಾರಿ ವೈರಲ್
    In (ರಾಜ್ಯ ) ಜಿಲ್ಲೆ
  • ಸಚಿವ ಎಂ.ಬಿ.ಪಾಟೀಲ ಜಿಲ್ಲಾ ಪ್ರವಾಸ
    In (ರಾಜ್ಯ ) ಜಿಲ್ಲೆ
  • ವಿಜಯಪುರ ಜಿಲ್ಲೆಯಲ್ಲಿ ಗೃಹ ಬಳಕೆ ಸಿಲಿಂಡರ್ ಕೊರತೆ ಇಲ್ಲ
    In (ರಾಜ್ಯ ) ಜಿಲ್ಲೆ
  • ಸಿಲಿಂಡರ್ ಸ್ಟಾಕ್ ಇಲ್ಲ :ಸಚಿವ ಮುನಿಯಪ್ಪ!
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.