ಫೆ.೧೫ರಂದು ಶ್ರೀ ಸಂತ ಸೇವಾಲಾಲ್ & ಫೆ.೧೬ರಂದು ಸವಿತಾ ಮಹರ್ಷಿ ಜಯಂತಿ ಅರ್ಥಪೂರ್ಣ ಆಚರಣೆಗೆ ನಿರ್ಧಾರ
ವಿಜಯಪುರ: ಜಿಲ್ಲಾಡಳಿತದ ವತಿಯಿಂದ ಇದೇ ಫೆಬ್ರವರಿ೧೦ರಂದು ಕಾಯಕ ಶರಣರ ಜಯಂತಿ, ಫೆಬ್ರವರಿ೧೫ರಂದು ಶ್ರೀ ಸಂತ ಸೇವಾಲಾಲ್ ಜಯಂತಿ, ಫೆಬ್ರವರಿ ೧೬ರಂದು ಸವಿತಾ ಮಹರ್ಷಿ ಜಯಂತಿ ಕಾರ್ಯಕ್ರಮಗಳನ್ನು ಅತ್ಯಂತ ಅರ್ಥಪೂರ್ಣವಾಗಿ ಆಚರಿಸಲು ನಿರ್ಧರಿಸಲಾಯಿತು.
ಸೋಮವಾರ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಅಪರ ಜಿಲ್ಲಾಧಿಕಾರಿ ಮಹಾದೇವ ಮುರಗಿ ಅವರ ಅಧ್ಯಕ್ಷತೆಯಲ್ಲಿ ಜರುಗಿದ ಸಭೆಯಲ್ಲಿ, ಫೆಬ್ರವರಿ೧೦ರಂದು ಕಾಯಕ ಶರಣರ ಜಯಂತಿ ಆಚರಣೆಯನ್ನು ಬೆಳಿಗ್ಗೆ ೯:೩೦ಕ್ಕೆ ಶ್ರೀ ಸಿದ್ಧೇಶ್ವರ ದೇವಸ್ಥಾನದಿಂದ ಭಾವಚಿತ್ರದ ಮೆರವಣಿಗೆ ಬೆಳಿಗ್ಗೆ ೧೧ಕ್ಕೆ ನಗರದ ಕಂದಗಲ್ ಹನುಮಂತರಾಯ ರಂಗಮಂದಿರದಲ್ಲಿ ಸಭಾ ಕಾರ್ಯಕ್ರಮ ಏರ್ಪಡಿಸಿ, ಓರ್ವ ಉಪನ್ಯಾಸಕರನ್ನು ಆಹ್ವಾನಿಸಿ, ಮಹನೀಯರ ಕುರಿತ ಉಪನ್ಯಾಸ ನೀಡಲು ತೀರ್ಮಾನಿಸಲಾಯಿತು.
ಫೆಬ್ರವರಿ೧೫ರಂದು ಶ್ರೀ ಸಂತ ಸೇವಾಲಾಲ್ ಜಯಂತಿ : ಜಯಂತಿ ಕಾರ್ಯಕ್ರಮದ ಅಂಗವಾಗಿ ಶ್ರೀ ಸಿದ್ಧೇಶ್ವರ ದೇವಸ್ಥಾನದಿಂದ ವಿವಿಧ ಕಲಾ ತಂಡಗಳೊಂದಿಗೆ ೧೧ ಗಂಟೆಗೆ ಭಾವಚಿತ್ರದ ಮೆರವಣಿಗೆ ಹಾಗೂ ನಗರದ ಕಂದಗಲ್ ಹನುಮಂತರಾಯ ರಂಗಮಂದಿರದಲ್ಲಿ ಸಭಾ ಕಾರ್ಯಕ್ರಮ, ಉಪನ್ಯಾಸಕರ ಗೊತ್ತುಪಡಿಸಿ ಉಪನ್ಯಾಸ ನೀಡಲು ಹಾಗೂ ಬಹು ಅರ್ಥಪೂರ್ಣವಾಗಿ ಆಚರಿಸಲು ಸಭೆ ನಿರ್ಧರಿಸಿತು.
ಫೆಬ್ರವರಿ ೧೬ರಂದು ಸವಿತಾ ಮಹರ್ಷಿ ಜಯಂತಿ :ಕಾರ್ಯಕ್ರಮದ ಅಂಗವಾಗಿ ಫೆ.೧೬ರಂದು ಬೆಳಿಗ್ಗೆ ೯:೩೦ ಗಂಟೆಗೆ ಶ್ರೀ ಸಿದ್ಧೇಶ್ವರ ದೇವಸ್ಥಾನದಿಂದ ಮೆರವಣಿಗೆ ಹಾಗೂ ಸವಿತಾ ಮಹರ್ಷಿ ಜಯಂತಿ ಹಿನ್ನೆಲೆಯಲ್ಲಿ ರಂಗಮಂದಿರದಲ್ಲಿ ಉಪನ್ಯಾಸ ಅವರ ಭಾವಚಿತ್ರಕ್ಕೆ ಪೂಜೆ ಸಲ್ಲಿಸುವುದರ ಮೂಲಕ ಅಚ್ಚುಕಟ್ಟಾಗಿ ಜಯಂತಿ ಕಾರ್ಯಕ್ರಮ ಆಯೋಜಿಸಲು ನಿರ್ಧರಿಸಲಾಯಿತು. ಅವರ ವಿಚಾರಧಾರೆಗಳನ್ನು ಜನರಿಗೆ ತಲುಪಿಸುವ ನಿಟ್ಟಿನಲ್ಲಿ ಉಪನ್ಯಾಸ ಕಾರ್ಯಕ್ರಮ ಏರ್ಪಡಿಸಲು ನಿರ್ಧರಿಸಲಾಯಿತು.
ಶಿಷ್ಠಾಚಾರದಂತೆ ಅತಿಥಿ,ಗಣ್ಯರಿಗೆ ಆಹ್ವಾನ, ಕಾರ್ಯಕ್ರಮ ಸ್ಥಳಗಳಲ್ಲಿ ಸ್ವಚ್ಛತೆ, ದೀಪಾಲಂಕಾರ, ವೇದಿಕೆ ಅಲಂಕಾರ, ಕಾರ್ಯಕ್ರಮದಲ್ಲಿ ಭಾಗವಹಿಸುವರಿಗೆ ಕುಡಿಯುವ ನೀರಿನ ವ್ಯವಸ್ಥೆ, ಸಮರ್ಪಕ ವಿದ್ಯುತ್ ವ್ಯವಸ್ಥೆ, ಸೂಕ್ತ ಆಸನ ವ್ಯವಸ್ಥೆ ಸೇರಿದಂತೆ ಎಲ್ಲ ಅಗತ್ಯ ಸಿದ್ಧತೆಗಳನ್ನು ಕೈಗೊಳ್ಳುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸಲಾಯಿತು.
ಸಭೆಯಲ್ಲಿ ಹೆಚ್ಚುವರಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಾದ ಶಂಕರ ಮಾರಿಹಾಳ,ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಅಧಿಕಾರಿ ಈರಣ್ಣ ಆಶಾಪೂರ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಕರಣಕುಮಾರ ಸೇರಿದಂತೆ ಅಡಿವೆಪ್ಪ ಸಾಲಗಲ್,ಭೀಮರಾಯ ಜಿಗಜಿಣಗಿ,ರಾಜ ಪಾಲ ಚವ್ಹಾಣ,ಸೋಮನಗೌಡ ಕಲ್ಲೂರ, ಮಲ್ಲು ನಾಯಕ,ಸುರೇಶ ಬಿಜಾಪೂರ ಇತರರು ಉಪಸ್ಥಿತರಿದ್ದರು.