ವಿಜಯಪುರ: ಸಮಾಜ ಕಲ್ಯಾಣ ಇಲಾಖೆ ವತಿಯಿಂದ ಹಮ್ಮಿಕೊಂಡ ಸಂವಿಧಾನ ಜಾಗೃತಿ ಜಾಥಾದ ಸ್ತಭ್ದಚಿತ್ರಕ್ಕೆ ಫೆ.೨ ರಂದು ವಿಜಯಪುರ ಉಪ ವಿಭಾಗದ ತಿಕೋಟಾ ಗ್ರಾಮ ಪಂಚಾಯತಿಯಲ್ಲಿ ಹಾಗೂ ಫೆ.೩ ರಂದು ಬಬಲೇಶ್ವರ ಹಾಗೂ ಇಂಡಿ ಉಪವಿಭಾಗದ ಬಬಲಾದ, ರೂಗಿ ಗ್ರಾಮಗಳಲ್ಲಿ ಅತ್ಯಂತ ವಿಜೃಂಭಣೆಯಿಂದ ಸ್ವಾಗತಿಸಲಾಯಿತು.
ಸರ್ಕಾರದ ಆದೇಶದ ಮೇರೆಗೆ ಸಮಾಜ ಕಲ್ಯಾಣ ಇಲಾಖೆಯಿಂದ “ಸಂವಿಧಾನ ಜಾಗೃತಿ ಜಾಥಾ” ರಾಜ್ಯಾಧ್ಯಾಂತ ಹಮ್ಮಿಕೊಂಡಿದ್ದು, ಅದರಂತೆ ವಿಜಯಪುರ ಜಿಲ್ಲೆಯಲ್ಲಿ ವಿವಿಧ ಗ್ರಾಮಗಳಲ್ಲಿ ಸಂವಿಧಾನ ಜಾಗೃತಿ ಜಾಥಾದ ರಥವು ಸಂಚರಿಸಿ ಗ್ರಾಮಸ್ಥರಲ್ಲಿ ಅರಿವು ಮೂಡಿಸಿತು.
ಸದರಿ ಗ್ರಾಮ ಪಂಚಾಯತಿಗಳ ಆವರಣದಲ್ಲಿ ಅಧ್ಯಕ್ಷರು, ಉಪಾಧ್ಯಕ್ಷರು ಹಾಗೂ ಗ್ರಾಮಸ್ಥರು ಸೇರಿ ಅತ್ಯಂತ ವಿಜೃಂಬಣೆಯಿಂದ “ಸಂವಿಧಾನ ಜಾಗೃತಿ ಜಾಥಾ”ದಲ್ಲಿ ಭಾಗವಹಿಸಿ ವಿಶೇಷ ಉಪನ್ಯಾಸ ಸೇರಿದಂತೆ ವಿವಿಧ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವ ಮೂಲಕ ಸಂವಿಧಾನದ ಕುರಿತು ಜಾಗೃತಿ ಮೂಡಿಸಲಾಯಿತು.
ಫೆ.೨ರಂದು ಬಾಬಾನಗರ, ಹೊನವಾಡ, ಕೋಟ್ಯಾಳದಲ್ಲಿ ಸಂಚರಿಸಿ ಅರಿವು ಮೂಡಿಸಲಾಯಿತು. ಸಂಜೆ ತಿಕೋಟಾ ಗ್ರಾಮ ಪಂಚಾಯತಿ ವತಿಯಿಂದ ಅತ್ಯಂತ ವಿಜೃಂಭಣೆಯಿಂದ ಸ್ವಾಗತಿಸಲಾಯಿತು. ಫೆ.೩ರಂದು ಹೊನಗನಹಳ್ಳಿ ಗ್ರಾಮ ಪಂಚಾಯತಿಯಲ್ಲಿ ಸಂವಿಧಾನ ಜಾಗೃತಿ ಕುರಿತು ಗ್ರಾಮಸ್ಥರಲ್ಲಿ ಅರಿವು ಮೂಡಿಸಲಾಯಿತು. ನಂತರ ಕಾರಜೋಳ, ಕಾಖಂಡಕಿ ಗ್ರಾಮಗಳಲ್ಲಿ ಸಂಚರಿಸಿ ಸಂಜೆ ಬಬಲೇಶ್ವರ ಗ್ರಾಮದಲ್ಲಿ ಜಾಗೃತಿ ಜಾಥಾದ ಸ್ಥಬ್ಧಚಿತ್ರಕ್ಕೆ ಅದ್ದೂರಿಯಾಗಿ ಸ್ವಾಗತಿಸಲಾಯಿತು.
ಈ ಸಂದರ್ಭದಲ್ಲಿ ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕ ಪುಂಡಲೀಕ ಮಾನವರ, ಸಹಾಯಕ ನಿರ್ದೇಶಕ ಎಸ್.ಎಂ.ಪಾಟೀಲ ಸೇರಿದಂತೆ ಅಯಾ ಗ್ರಾಮದ ಗಣ್ಯರು, ಮುಖಂಡರು ಭಾಗವಹಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಲಾಯಿತು.
ಇಂಡಿ ಉಪವಿಭಾಗದಲ್ಲಿ ಅದ್ದೂರಿ ಸ್ವಾಗತ:
ಫೆ.೨ ರಂದು ಇಂಡಿ ಉಪ ವಿಭಾಗದ ಅರ್ಜುಣಗಿ ಗ್ರಾಮ ಪಂಚಾಯತಿಯಲ್ಲಿ ಸಂವಿಧಾನ ಜಾಗೃತಿ ಕುರಿತು ಗ್ರಾಮಸ್ಥರಲ್ಲಿ ಅರಿವು ಮೂಡಿಸಲಾಯಿತು. ನಂತರ ನಾದ, ಸಾಲೋಟಗಿಯಲ್ಲಿ ಸಂಚರಿಸಿ ಸಂಜೆ ರೂಗಿ ಗ್ರಾಮದಲ್ಲಿ ಸ್ಥಬ್ಧಚಿತ್ರವನ್ನು ಅದ್ದೂರಿಯಾಗಿ ಸ್ವಾಗತಿಸಲಾಯಿತು.
ಫೆ.೩ರಂದು ಇಂಡಿ ಉಪವಿಭಾಗದ ತಡವಲಗಾ ಗ್ರಾಮ ಪಂಚಾತಿಯಲ್ಲಿ ಸಂವಿಧಾನ ಜಾಗೃತಿ ಕುರಿತು ಅರಿವು ಮೂಡಿಸಲಾಯಿತು. ನಂತರ ನಿಂಬಾಳ ಕೆ.ಡಿ., ಹಂಜಗಿ ಹಾಗೂ ಚವಡಿಹಾಳ ಗ್ರಾಮಗಳಲ್ಲಿ ಸಂಚರಿಸಿ ಸಂಜೆ ಬಬಲಾದ ಗ್ರಾಮದಲ್ಲಿ ಅದ್ದೂರಿಯಾಗಿ ಸ್ವಾಗತಿಸಲಾಯಿತು.
ಈ ಸಂದರ್ಭದಲ್ಲಿ ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕ ಬಿ.ಜೆ.ಇಂಡಿ, ಅಧೀಕ್ಷಕ ಚನ್ನಲಿಂಗಪ್ಪ ಚೌಧರಿ, ವಸತಿ ನಿಲಯದ ವಾರ್ಡನ್‌ಗಳು ಸೇರಿದಂತೆ ಗ್ರಾಮದ ಗಣ್ಯರು, ಮುಖಂಡರು ಭಾಗವಹಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಲಾಯಿತು.
Subscribe to Updates
Get the latest creative news from FooBar about art, design and business.
Related Posts
Add A Comment

