ಇಂಡಿ: ಸುಂದರ ಬದುಕು ಹಾಗೂ ಆರೋಗ್ಯಕರ ಸಮಾಜ ಕಟ್ಟುವಲ್ಲಿ ಸ್ಕೌಟ್ಸ್ ಮತ್ತು ಗೈಡ್ಸ್ನ ಶಿಸ್ತು ಮತ್ತು ಕೌಶಲ್ಯದ ಪಾತ್ರ ಮಹತ್ವದ್ದಾಗಿದೆ ಎಂದು ಜಿಲ್ಲಾ ಪ್ರಭಾರಿ ದೈಹಿಕ ಶಿಕ್ಷಣ ಪರಿವೀಕ್ಷಕ ಎ.ಎಸ್. ಲಾಳಸೇರಿ ಹೇಳಿದರು.
ಅವರು ಪಟ್ಟಣದ ಗುರುಭವನದಲ್ಲಿ ಭಾರತ ಸ್ಕೌಟ್ಸ್, ಗೈಡ್ಸ್ ಸ್ಥಳೀಯ ಸಂಸ್ಥೆ ಮತ್ತು ಕ್ಷೇತ್ರ ಶಿಕ್ಷಣಾಧಿಕಾರಿಗಳು ಮತ್ತು ಕ್ಷೇತ್ರ ಸಮನ್ವಯಾಧಿಕಾರಿಗಳ ಕಾರ್ಯಾಲಯದ ವತಿಯಿಂದ ಹಮ್ಮಿಕೊಂಡ ಸ್ಕೌಟ್ಸ್ ಮತ್ತು ಕಬ್ ಮಾಸ್ಟರ್, ಗೈಡ್ ಕ್ಯಾಪ್ಟನ್ ಹಾಗೂ ಪ್ಲ್ಯಾಕ್ ಲೀಡರ್ ರವರ ತಾಲೂಕಾ ಸಮಾವೇಶವನ್ನು ಉದ್ಘಾಟಿಸಿ ಮಾತನಾಡಿದರು.
ಮಕ್ಕಳು ನಾಲ್ಕು ಗೋಡೆಗಳ ನಡುವೆ ಓದು-ಬರಹ ಕಲಿಯುವುದರ ಜತೆಗೆ ನಿಸರ್ಗದ ಮಡಿಲಲ್ಲಿ ಒಂದಾಗಿ ಬೆರೆತು, ಸಮನ್ವಯದಿಂದ ಬಾಳಲು ಕಲಿಯುವಂತೆ ಉತ್ತೇಜಿಸುವ ಸ್ಕೌಟ್ಸ್ ಚಟುವಟಿಕೆಗಳು ತಾಲೂಕಿನಲ್ಲಿ ಹೆಚ್ಚಾಗಿ ನಡೆಯಬೇಕಿದೆ ಎಂದು ಸಲಹೆ ನೀಡಿದರು.
ಜಿಲ್ಲಾ ಕಾರ್ಯದರ್ಶಿ ಪಿ.ಎಸ್‌ಕುಂಬಾರ ಮಾತನಾಡಿ, ಸ್ಕೌಟ್ಸ್ ಮತ್ತು ಗೈಡ್ಸ್ ಸೇರ್ಪಡೆಯಿಂದ ವಿದ್ಯಾರ್ಥಿಯ ವ್ಯಕ್ತಿತ್ವ ವಿಕಸನದ ಜತೆಗೆ ಕಲಿಕೆಯಲ್ಲೂ ಪ್ರಗತಿ ಸಾಧಿಸಲು ಸಾಧ್ಯ. ಹಾಗಾಗಿ ಎಲ್ಲ ಶಾಲಾ ಮಕ್ಕಳು ಸ್ಕೌಟ್ಸ್ ಮತ್ತು ಗೈಡ್ಸ್ಗೆ ಸೇರ್ಪಡೆಗೊಳ್ಳುವಂತೆ ಕ್ರಮವಹಿಸಬೇಕು ಎಂದು ತಿಳಿಸಿದರು.
ಸ್ಕೌಟ್ಸ್ ಮಾಸ್ಟರ್ ಸಂತೋಷ ಬಂಡೆ ಮಾತನಾಡಿದರು.
ತಾಲೂಕ ಕಾರ್ಯದರ್ಶಿ ಶಹಾಜಿ ಪಾಟೀಲ ಪ್ರಾಸ್ತಾವಿಕವಾಗಿ ಮಾತನಾಡಿದರು.
ಇಂಡಿ ತಾಲೂಕ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಎಸ್.ವ್ಹಿ. ಹರಳಯ್ಯ, ಖಜಾಂಚಿ ಬಸವರಾಜ ಗೊರನಾಳ, ಸ್ಕೌಟ್ಸ್ ಮಾಸ್ಟರ್‌ಗಳಾದ ವೈ.ಜಿ. ಬಿರಾದಾರ, ದತ್ತಾತ್ರೆಯ ಕೋಳಾರಿ, ಸಂಗಮೇಶ ಬಂಡೆ, ಎಸ್.ಎಸ್. ಧೂಳಖೇಡ, ಸಿ.ಎಸ್. ಮೇತ್ರಿ ಹಾಗೂ ಗೈಡ್ ಕ್ಯಾಪ್ಟನ್‌ಗಳಾದ ನಾಗೇಶ್ವರಿ, ಸುಮಂಗಲಾ ಸಿ, ಗೌರಿ, ಮಲ್ಲಮ್ಮ ಗಿರಣಿವಡ್ಡರ ಸೇರಿದಂತೆ ಅನೇಕರು ಉಪಸ್ಥಿತರಿದ್ದರು.
ಗೈಡ್ ಕ್ಯಾಪ್ಟನ್ ಸವಿತಾ ಹಾದಿಮನಿ ವರದಿ ವಾಚಿಸಿದರು.
Subscribe to Updates
Get the latest creative news from FooBar about art, design and business.
ಆರೋಗ್ಯಕರ ಸಮಾಜ ಕಟ್ಟುವಲ್ಲಿ ಸ್ಕೌಟ್ಸ್ ಮತ್ತು ಗೈಡ್ಸ್ನ ಪಾತ್ರ ಮುಖ್ಯ
Related Posts
Add A Comment

