ವಿಜಯಪುರ: ಇಂಡಿ ತಾಲೂಕಿನ ಆಳೂರು, ಇಂಗಳಗಿ, ಖೇಡಗಿ, ಗೊಳಸಾರ, ಮಿರಗಿ ಗ್ರಾಮಗಳಲ್ಲಿ ಸಂವಿಧಾನ ಜಾಗೃತಿ ಜಾಥಾ ಸ್ತಬ್ಧಚಿತ್ರವನ್ನು ಫೆ.೬ ರಂದು ಗ್ರಾಮ ಪಂಚಾಯತಿ ಅಧ್ಯಕ್ಷರು ಉಪಾಧ್ಯಕ್ಷರು, ಪಂಚಾಯತಿ ಅಭಿವೃದ್ಧಿ ಅಧಿಕಾರಿಗಳು ಹಾಗೂ ಸಮಾಜ ಕಲ್ಯಾಣ ಇಲಾಖೆಯ ಅಧಿಕಾರಿಗಳು,ಸಾರ್ವಜನಿಕರು ಬಹು ವಿಜೃಂಭಣೆಯಿಂದ ಅದ್ಧೂರಿಯಾಗಿ ಬರಮಾಡಿಕೊಂಡರು.
ಗೊಂಬೆ ಕುಣಿತ, ಡೊಳ್ಳು ಕುಣಿತ ಕಲಾ ತಂಡ ಮೆರುಗು ಕಳೆ ಕಟ್ಟಿತ್ತು.
ಈ ಸಂದರ್ಭದಲ್ಲಿ ಸಂವಿಧಾನದ ಆಶೋತ್ತರಗಳ ಕುರಿತಾಗಿ ಉಪನ್ಯಾಸ ಏರ್ಪಡಿಸಲಾಗಿತ್ತು. ಗ್ರಾಮಪಂಚಾಯತಿಯ ಅಧ್ಯಕ್ಷರು, ಉಪಾಧ್ಯಕ್ಷರು ಮಾತನಾಡಿದರು.
ಈ ಕಾರ್ಯಕ್ರಮದಲ್ಲಿ ಬಿ.ಜೆ.ಇಂಡಿ, ಪಿಡಿಒ ಹಾಗೂ ನೋಡಲ್ ಅಧಿಕಾರಿಗಳು, ಶಿಕ್ಷಕರು, ಸಮಸ್ತ ಗ್ರಾಮಸ್ಥರು ಹಾಜರಿದ್ದು ಕಾರ್ಯಕ್ರಮ ಯಶಸ್ವಿಗೊಳಿಸಿದರು.
Subscribe to Updates
Get the latest creative news from FooBar about art, design and business.
Related Posts
Add A Comment
