ವಿಜಯಪುರ: ಜಿಲ್ಲಾಡಳಿತದಿಂದ ಫೆಬ್ರವರಿ ೧೯ರಂದು ಛತ್ರಪತಿ ಶಿವಾಜಿ ಜಯಂತಿ ಹಾಗೂ ಫೆ.೨೦ರಂದು ಸಂತ ಕವಿ ಸರ್ವಜ್ಞ ಜಯಂತಿ ಕಾರ್ಯಕ್ರಮವನ್ನು ಅರ್ಥಪೂರ್ಣವಾಗಿ ಆಚರಿಸಲು ನಿರ್ಧರಿಸಲಾಯಿತು.
ಮಂಗಳವಾರ ಜಿಲ್ಲಾಧಿಕಾರಿಗಳ ಕಚೇರಿಯ ಸಭಾಂಗಣದಲ್ಲಿ ಅಪರ ಜಿಲ್ಲಾಧಿಕಾರಿ ಮಹಾದೇವ ಮುರಗಿ ಅವರ ಅಧ್ಯಕ್ಷತೆಯಲ್ಲಿ ನಡೆದ ಪೂರ್ವಭಾವಿ ಸಿದ್ಧತಾ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಯಿತು.
ಫೆಬ್ರವರಿ ೧೯ರಂದು ಛತ್ರಪತಿ ಶಿವಾಜಿ ಜಯಂತಿ ಅಂಗವಾಗಿ ಶಿವಾಜಿ ಸರ್ಕಲ್ ದಿಂದ ಅಂದು ಬೆಳಿಗ್ಗೆ ೯:೩೦ಕ್ಕೆ ಛತ್ರಪತಿ ಶಿವಾಜಿ ಅವರ ಭಾವಚಿತ್ರದ ಮೆರವಣಿಗೆ ಹಾಗೂ ಕಂದಗಲ್ ಶ್ರೀ ಹನುಂತರಾಯ ರಂಗಮಂದಿರದಲ್ಲಿ ೧೧ ಗಂಟೆಗೆ ಸಭಾ ಕಾರ್ಯಕ್ರಮ ಹಾಗೂ ಉಪನ್ಯಾಸಕರಿಂದ ಉಪನ್ಯಾಸ ಕಾರ್ಯಕ್ರಮ ನೀಡುವುದು.
ಸಂತ ಕವಿ ಸರ್ವಜ್ಞ ಜಯಂತಿಯನ್ನು ಫೆ.೨೦ರಂದು ಆಚರಿಸಲಾಗುವುದು ಅಂದು ಬೆಳಿಗ್ಗೆ ೯:೩೦ಕ್ಕೆ ಶ್ರೀ ಸಿದ್ಧೇಶ್ವರ ದೇವಸ್ಥಾನದಿಂದ ಮೆರವಣಿಗೆ ಬೆಳಿಗ್ಗೆ ೧೧ ಗಂಟೆಗೆ ಕಂದಗಲ್ ಶ್ರೀ ಹನುಮಂತರಾಯ ರಂಗಮಂದಿರದಲ್ಲಿ ಸಭಾ ಕಾರ್ಯಕ್ರಮ ನಡೆಯುವುದು.
ಆಮಂತ್ರಣ ಮುದ್ರಣ ಹಾಗೂ ವಿತರಣೆ, ಶಿಷ್ಠಾಚಾರದಂತೆ ಅತಿಥಿ ಗಣ್ಯರಿಗೆ ಅಹ್ವಾನ, ವೇದಿಕೆ ಅಲಂಕಾರ, ಕುಡಿಯುವ ನೀರಿನ ವ್ಯವಸ್ಥೆ, ಸಮರ್ಪಕ ವಿದ್ಯುತ್ ವ್ಯವಸ್ಥೆ, ಸೂಕ್ತ ಆಸನದ ವ್ಯವಸ್ಥೆ ಸೇರಿದಂತೆ ಎಲ್ಲ ಅಗತ್ಯ ಸಿದ್ಧತೆಗಳನ್ನು ಕೈಗೊಳ್ಳುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸಲಾಯಿತು.
ಈ ಸಭೆಯಲ್ಲಿ ಜಿಲ್ಲಾ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಶಂಕರ ಮಾರಿಹಾಳ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಕರಣಕುಮಾರ್, ವಿವಿಧ ಸಂಘ-ಸಂಸ್ಥೆಗಳ ಪದಾಧಿಕಾರಿಗಳು ಉಪಸ್ಥಿತರಿದ್ದರು.
Subscribe to Updates
Get the latest creative news from FooBar about art, design and business.
Related Posts
Add A Comment
