ವಿಜಯಪುರ: ಭಾರತದ ಸಂವಿಧಾನ ಶ್ರೇಷ್ಠವಾದ ಸಂವಿಧಾನವಾಗಿದೆ. ಸಂವಿಧಾನ ಸರ್ವಜನರ ಸರ್ವತೋಮುಖ ಅಭಿವೃದ್ದಿಗೆ ಸಹಕಾರಿಯಾಗಿದೆ ಎಂದು ಮಮದಾಪುರ ಗ್ರಾಮ ಪಂಚಾಯತ್ ಅಧ್ಯಕ್ಷ ಮಲ್ಲಿಕಾರ್ಜುನ ಗಂಗೂರ ಅವರು ಹೇಳಿದರು.
ಸಮಾಜ ಕಲ್ಯಾಣ ಇಲಾಖೆ ವತಿಯಿಂದ ಹಮ್ಮಿಕೊಂಡ ಸಂವಿಧಾನ ಜಾಗೃತಿ ಜಾಥಾದ ಸ್ತಭ್ದಚಿತ್ರಕ್ಕೆ ಮಮದಾಪುರ ಗ್ರಾಮದಲ್ಲಿ ಫೆ.೬ ರಂದು ಅದ್ದೂರಿಯಾಗಿ ಸ್ವಾಗತಿಸಿ, ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಭಾರತದ ಸಂವಿಧಾನ ಪ್ರತಿಯೊಬ್ಬರು ಸಮಾನವಾದ ಹಕ್ಕನ್ನು ಒದಗಿಸಿದೆ. ಅನೇಕತೆಯಲ್ಲಿ ಏಕತೆಯನ್ನು ಸಾರುವ ಶ್ರೇಷ್ಠವಾದ ಸಂವಿಧಾನವಾಗಿದೆ ಎಂದು ಹೇಳಿದರು.
ಸಂವಿಧಾನ ಜಾಗೃತಿ ಜಾಥಾದ ಸ್ತಭ್ದಚಿತ್ರವು ಬಬಲೇಶ್ವರ ತಾಲೂಕಿನ ದೇವರಗೆಣ್ಣೂರ, ಜೈನಾಪುರ, ಮಮದಾಪುರ ಗ್ರಾಮಗಳಲ್ಲಿ ಸಂಚರಿಸಿ ಸಂವಿಧಾನ ಕುರಿತು ಜಾಗೃತಿ ಮೂಡಿಸಿತು.
ಈ ಸಂದರ್ಭದಲ್ಲೊಇ ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕ ಎಸ್.ಎಂ.ಪಾಟೀಲ, ನೋಡಲ್ ಅಧಿಕಾರಿ ಎಸ್.ಬಿ.ಪಾಟೀಲ, ಸೇರಿದಂತೆ ಗ್ರಾಮದ ಮುಖಂಡರು, ಗಣ್ಯರು, ಸಾರ್ವಜನಿಕರು ಉಪಸ್ಥಿತರಿದ್ದರು. ಕಾರ್ಯಕ್ರಮದಲ್ಲಿ ಸಂತೋಷ ಕಾಂಬಳೆ ಸಂವಿಧಾನ ಕುರಿತು ವಿವರವಾದ ಮಾಹಿತಿ ಒದಗಿಸಿದರು.
Subscribe to Updates
Get the latest creative news from FooBar about art, design and business.
Related Posts
Add A Comment

