ಶ್ರೀ ಎಸ್.ಎಂ.ಮಣೂರ, ಎಸ್.ಬಿ.ಮಾಡೆಲ್ ಪಬ್ಲಿಕ್ ಶಾಲೆಯ ವಾರ್ಷಿಕ ಸ್ನೇಹ ಸಮ್ಮೇಳನ
ಸಿಂದಗಿ: ಪಾಲಕರು ಮಕ್ಕಳನ್ನು ಮೋಬೈಲನಿಂದ ದೂರವಿಟ್ಟು, ಅವರಲ್ಲಿ ಉನ್ನತ ಜೀವನ ಮೌಲ್ಯಗಳನ್ನು ತುಂಬಿ ಭವಿಷ್ಯದ ಸತ್ಪ್ರಜೆಯಾಗಿಸಬೇಕು ಎಂದು ಮಕ್ಕಳ ಹಿರಿಯ ಸಾಹಿತಿ ಹ.ಮ.ಪೂಜಾರ ಪಾಲಕರಿಗೆ ಕರೆ ನೀಡಿದರು.
ಪಟ್ಟಣದ ಶ್ರೀ ಎಸ್.ಎಂ.ಮಣೂರ, ಎಸ್.ಬಿ.ಮಾಡೆಲ್ ಪಬ್ಲಿಕ್ ಶಾಲೆಯಲ್ಲಿ ಈಚೆಗೆ ನಡೆದ ವಾರ್ಷಿಕ ಸ್ನೇಹ ಸಮ್ಮೇಳನದ ಮುಖ್ಯ ಅತಿಥಿಯಾಗಿ ಅವರು ಮಾತನಾಡಿದರು.
ಸಂಸ್ಥೆಯ ಅಧ್ಯಕ್ಷೆ ಶ್ರೀಮತಿ ಎನ್.ಆರ್.ಮಣೂರ ಮಾತನಾಡಿ, ಮಕ್ಕಳ ಸರ್ವತೋಮುಖ ಬೆಳವಣಿಗೆಯೇ ನಮ್ಮ ಶಿಕ್ಷಣ ಸಂಸ್ಥೆಯ ಪ್ರಮುಖ ದ್ಯೇಯವಾಗಿದ್ದು, ಈ ದಿಸೆಯಲ್ಲಿ ಶಾಲಾ ಶಿಕ್ಷಕರ ಬಳಗ ನಿರಂತರ ಮಾರ್ಗದರ್ಶನ ಮಾಡುತ್ತಿದೆ. ಪಾಲಕರೂ ಸಹ ಮಕ್ಕಳ ಚಟುವಟಿಕೆಗಳನ್ನು ಸದಾ ಗಮನಿಸುತ್ತಿರಬೇಕು ಎಂದು ಸಲಹೆ ನೀಡಿದರು.
ಶಾಲಾ ಆಡಳಿತಾಧಿಕಾರಿ ಪ್ರೊ. ಎಸ್.ಎನ್.ಹೊಳಿ ಮಾತನಾಡಿ, ಇಂದಿನ ಸ್ಪರ್ಧಾತ್ಮಕ ಯುಗದಲ್ಲಿ ಪಾಲಕರು ಮಕ್ಕಳ ಶಿಕ್ಷಣಕ್ಕೆ ಹೆಚ್ಚಿನ ಒತ್ತು ನೀಡಬೇಕು ಎಂದರು.
ಶಾಲಾ ಮುಖ್ಯ ಗುರುಮಾತೆ ಶ್ರೀಮತಿ ಪಿ.ಎಸ್.ಹೊಳಿ ವರದಿ ವಾಚಿಸಿದರು.
ಅಶೋಕ ಕಮರಡ್ಡಿ ಸ್ವಾಗತಿಸಿದರು. ಶ್ರೀದೇವಿ ಚೌಕಿಮಠ ವಂದಿಸಿದರು.
ಸಂಸ್ಥೆಯ ನಿರ್ದೇಶಕ ಮಂಡಳಿ ಸದಸ್ಯರು, ಶಿಕ್ಷಕಿಯರು ಸೇರಿದಂತೆ ಪಾಲಕರು, ಮಕ್ಕಳು ಇದ್ದರು.
ನಂತರ ನಡೆದ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಮಕ್ಕಳು ಪ್ರದರ್ಶಿಸಿದ ನೃತ್ಯ ಪ್ರದರ್ಶನಗಳು ನೋಡುಗರ ಗಮನ ಸೆಳೆದವು.

