ವಿಜಯಪುರ: ಜಿಲ್ಲೆಯಲ್ಲಿ ೪,೬೩,೯೫೮ ಗೃಹ ಬಳಕೆ ಸ್ಥಾವರಗಳಿದ್ದು, ಅದರಲ್ಲಿ ಜನವರಿ ೨೦೨೪ರ ಅಂತ್ಯಕ್ಕೆ ೪,೨೧,೨೪೦ ಗ್ರಾಹಕರು ಗೃಹಜ್ಯೋತಿ ಯೋಜನೆಯಡಿ ನೋಂದಣಿ ಮಾಡಿಕೊಂಡಿದ್ದಾರೆ. ಇದರಲ್ಲಿ ೪,೦೮,೯೮೧ ಗ್ರಾಹಕರು ಗೃಹಜ್ಯೋತಿಯಡಿ ಉಚಿತ ವಿದ್ಯುತ್ ಸೌಲಭ್ಯ ಪಡೆದಿದ್ದಾರೆ. ಈ ಮೂಲಕ ಇಲಾಖೆಗೆ ೧೭.೬೭ಕೋಟಿ ರೂ ಅನುದಾನ ಲಭ್ಯವಾಗಿದೆ.
ಗೃಹಜ್ಯೋತಿ ಯೋಜನೆಗೆ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಅವರು ದಿನಾಂಕ:೦೫-೦೮-೨೦೨೩ರಂದು ಚಾಲನೆ ನೀಡಿದ್ದರು. ಈ ಯೋಜನೆಯಡಿ ಅರ್ಹ ಫಲಾನುಭವಿಗಳಿಗೆ ಗರಿಷ್ಠ ೨೦೦ ಯೂನಿಟ್‌ವರೆಗೆ ಉಚಿತ ವಿದ್ಯುತ್ ಸೌಲಭ್ಯ ನೀಡಲಾಗುತ್ತದೆ.
ಗೃಹಜ್ಯೋತಿ ನೋಂದಣಿಗಾಗಿ ಸಾರ್ವಜನಿಕರು ಕರ್ನಾಟಕ ಒನ್ ಕೇಂದ್ರ, ಗ್ರಾಮ ಒನ್ ಕೇಂದ್ರ, ಸೇವಾ ಸಿಂಧು ಪೋರ್ಟಲ್, ಹೆಸ್ಕಾಂ ಉಪ ವಿಭಾಗದ ಕಚೇರಿಯ ಸೌಜನ್ಯ ಕೌಂಟರ್‌ನಲ್ಲಿ ಅರ್ಜಿ ಸಲ್ಲಿಸಬಹುದಾಗಿದೆ. ಈ ಯೋಜನೆಯಡಿ ನೋಂದಾಯಿಸಲು ಆಧಾರ್ ಕಾರ್ಡ್, ವಿದ್ಯುತ್ ಬಿಲ್, ಆಧಾರ್ ಲಿಂಕ್ ಇರುವ ಮೊಬೈಲ್ ಸಂಖ್ಯೆ ಅವಶ್ಯಕತೆ ಇದೆ ಎಂದು ವಿಜಯಪುರ ಹೆಸ್ಕಾಂನ ಅಧೀಕ್ಷಕ ಅಭಿಯಂತರರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Subscribe to Updates
Get the latest creative news from FooBar about art, design and business.
Related Posts
Add A Comment
