ಬಸವನ ಬಾಗೇವಾಡಿ: ಪಟ್ಟಣದ ತಾಲೂಕು ಆಸ್ಪತ್ರೆಗೆ ೨೦೨೨-೨೩ ನೇ ಸಾಲಿನ ರಾಷ್ಟ್ರೀಯ ಆರೋಗ್ಯ ಅಭಿಯಾನ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಿಂದ ಕಾಯಕಲ್ಪ ಪ್ರಶಸ್ತಿ ಸಂದಿರುವ ಹಿನ್ನೆಲೆಯಲ್ಲಿ ಗುರುವಾರ ಸ್ಥಳೀಯ ವಿರಕ್ತಮಠದ ಸಿದ್ದಲಿಂಗ ಸ್ವಾಮೀಜಿಯವರು ಆಸ್ಪತ್ರೆಯ ಮುಖ್ಯ ವೈದ್ಯಾಧಿಕಾರಿ ಡಾ.ಸಾಬೀರ ಪಟೇಲ ಅವರನ್ನು ಶ್ರೀಮಠದಿಂದ ಸನ್ಮಾನಿಸಿ ಗೌರವಿಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಶ್ರೀಗಳು, ತಾಲೂಕು ಆಸ್ಪತ್ರೆಯಲ್ಲಿ ತಾಲೂಕಿನ ಜನತೆಗೆ ಉತ್ತಮ ಚಿಕಿತ್ಸೆ ಸಿಗುತ್ತಿರುವಲ್ಲಿ ಇಲ್ಲಿನ ವೈದ್ಯರ ಪಾತ್ರ ಮರೆಯುವಂತಿಲ್ಲ. ವೈದ್ಯರು ಉತ್ತಮ ಚಿಕಿತ್ಸೆ ನೀಡುವ ಜೊತೆಗೆ ಆಸ್ಪತ್ರೆಯ ಸ್ವಚ್ಛತೆ, ನೈರ್ಮಲ್ಯ ಮತ್ತು ಸೋಂಕು ನಿಯಂತ್ರಣ ಮಾಡುವಲ್ಲಿ ತಮ್ಮದೇ ಪಾತ್ರ ವಹಿಸಿದ್ದಾರೆ. ಇದನ್ನು ಗಮನದಲ್ಲಿಟ್ಟುಕೊಂಡು ಸರ್ಕಾರದಿಂದ ಕೊಡಲ್ಪಡುವ ಕಾಯಕಲ್ಪ ಪ್ರಶಸ್ತಿಗೆ ಭಾಜನವಾಗಿರುವದು ವೈದ್ಯರ, ಸಿಬ್ಬಂದಿಗಳ ಶ್ರಮಕ್ಕೆ ಸಂದ ಗೌರವವಾಗಿದೆ ಎಂದರು.
ಕೋವಿಡ್-೧೯ ರ ಸಂದಿಗ್ಧ ಸನ್ನಿವೇಶದಲ್ಲಿಯೂ ಇಲ್ಲಿನ ಆಸ್ಪತ್ರೆಯ ವೈದ್ಯರು, ಸಿಬ್ಬಂದಿಗಳು ತಮ್ಮ ಜೀವ ಹಂಗು ತೊರೆದು ಸೇವೆ ಮಾಡಿದ್ದು ಸ್ಮರಣೀಯ. ಇದು ರಾಜ್ಯದ ಗಮನ ಸೆಳೆದಿತ್ತು. ತಾಲೂಕು ಆಸ್ಪತ್ರೆಗೆ ಕಾಯಕಲ್ಪ ಪ್ರಶಸ್ತಿ ಸಂದಿರುವುದು ಬಸವನಾಡಿಗೆ ಹೆಮ್ಮೆ ತರುವಂತಾಗಿದೆ ಎಂದರು.
ಸನ್ಮಾನ ಸ್ವೀಕರಿಸಿದ ತಾಲೂಕು ಆಸ್ಪತ್ರೆಯ ಮುಖ್ಯಾಧಿಕಾರಿ ಡಾ.ಸಾಬೀರ ಪಟೇಲ, ವ್ಹಿಪಿಕೆಪಿಎಸ್ ಬ್ಯಾಂಕ್ ಅಧ್ಯಕ್ಷ ಸಂಗನಗೌಡ ಚಿಕ್ಕೊಂಡ ಮಾತನಾಡಿದರು.
ಈ ಸಂದರ್ಭದಲ್ಲಿ ರಾಷ್ಟ್ರೀಯ ಬಸವಸೈನ್ಯ ಸಂಸ್ಥಾಪಕ ಅಧ್ಯಕ್ಷ ಶಂಕರಗೌಡ ಬಿರಾದಾರ, ವಿವೇಕ ಬ್ರಿಗೇಡ್ ಸಂಘಟನೆಯ ವಿನೂತು ಕಲ್ಲೂರ,ಮುಖಂಡರಾದ ಶ್ರೀಕಾಂತ ಕೊಟ್ರಶೆಟ್ಟಿ, ಶಿವಾನಂದ ತೋಳನೂರ, ಸುನೀಲಗೌಡ ಚಿಕ್ಕೊಂಡ, ವಾಸುದೇವ ಮ್ಯಾಗೇರಿ,ಡಾ.ಬಸವರಾಜ ಮುತ್ತತ್ತಿ, ಡಾ.ಶಾಕೀರ ಪಟೇಲ, ಡಾ.ಬಸವರಾಜ ಝಳಕಿ ಇತರರು ಇದ್ದರು. ಕೊಟ್ರೇಶಿ ಹೆಗಡ್ಯಾಳ ಪ್ರಾರ್ಥಿಸಿದರು. ಪ್ರಭಾಕರ ಖೇಡದ ಸ್ವಾಗತಿಸಿದರು. ಎಚ್.ಬಿ.ಬಾರಿಕಾಯಿ ನಿರೂಪಿಸಿ,ವಂದಿಸಿದರು.
Subscribe to Updates
Get the latest creative news from FooBar about art, design and business.
Related Posts
Add A Comment

