ವಿಜಯಪುರ: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯಿಂದ ಫೆಬ್ರುವರಿ ೧೦ ರಂದು ನಗರದ ಕಂದಗಲ್ ಶ್ರೀ ಹನುಮಂತರಾಯ ರಂಗಮಂದಿರದಲ್ಲಿ ಕಾಯಕ ಶರಣ ಜಯಂತಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.
ಅಂದು ಬೆಳಗ್ಗೆ ೯:೩೦ ಗಂಟೆಗೆ ನಗರದ ನಗರದ ಶ್ರೀ ಸಿದ್ದೇಶ್ವರ ದೇವಸ್ಥಾನದಿಂದ ಕಂದಗಲ್ ಶ್ರೀ ಹನುಮಂತರಾಯ ರಂಗಮಂದಿರದವರೆಗೆ ಕಾಯಕ ಶರಣರ ಭಾವಚಿತ್ರದ ಮೆರವಣಿಗೆ ಹಾಗೂ ಬೆಳಿಗ್ಗೆ ೧೦:೩೦ಕ್ಕೆ ಕಂದಗಲ್ ಶ್ರೀ ಹನುಮಂತರಾಯ ರಂಗಮಂದಿರದಲ್ಲಿ ನಡೆಯುವ ಜಯಂತಿ ಕಾರ್ಯಕ್ರಮವನ್ನು ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಹಾಗೂ ಮೂಲಸೌಲಭ್ಯ ಅಭಿವೃದ್ಧಿ ಸಚಿವರು ಹಾಗೂ ವಿಜಯಪುರ ಜಿಲ್ಲಾ ಉಸ್ತುವಾರಿ ಸಚಿವರಾದ ಡಾ.ಎಂ.ಬಿ.ಪಾಟೀಲ ಅವರು ಉದ್ಘಾಟಿಸುವರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಿಜಯಪುರ ನಗರ ಶಾಸಕರಾದ ಬಸನಗೌಡ ಪಾಟೀಲ ವಹಿಸಲಿದ್ದಾರೆ. ಜವಳಿ,ಕಬ್ಬು ಅಭಿವೃದ್ಧಿ ಮತ್ತು ಸಕ್ಕರೆ ಹಾಗೂ ಕೃಷಿ ಮಾರುಕಟ್ಟೆ ಸಚಿವರಾದ ಶಿವಾನಂದ ಪಾಟೀಲ, ನವದೆಹಲಿಯಲ್ಲಿನ ಕರ್ನಾಟಕ ಸರ್ಕಾರದ ವಿಶೇಷ ಪ್ರತಿನಿಧಿ-೨ ಹಾಗೂ ವಿಧಾನ ಪರಿಷತ್ ಶಾಸಕರಾದ ಪ್ರಕಾಶ ಹುಕ್ಕೇರಿ, ಕರ್ನಾಟಕ ಸೋಪ್ಸ್ ಮತ್ತು ಡಿಟರ್ಜೆಂಟ್ ನಿಯಮಿತದ ಅಧ್ಯಕ್ಷರಾದ ಶಾಸಕ ಅಪ್ಪಾಜಿ ಸಿ.ಎಸ್ ನಾಡಗೌಡ,ಸಂಸದರಾದ ರಮೇಶ ಜಿಗಜಿಣಗಿ, ಯಶವಂತರಾಯಗೌಡ ಪಾಟೀಲ, ಹಣಮಂತ. ಆರ್. ನಿರಾಣಿ, ಪ್ರಕಾಶ ರಾಠೋಡ, ಸುನೀಲಗೌಡ ಪಾಟಿಲ, ಪಿ.ಎಚ್. ಪೂಜಾರ, ವಿಠ್ಠಲ ಕಟಕಧೋಂಡ, ಭೀಮನಗೌಡ (ರಾಜುಗೌಡ) ಬಸನಗೌಡ ಪಾಟೀಲ,ಅಶೋಕ ಮನಗೂಳಿ,ವಿಜಯಪುರ ಮಹಾನಗರ ಪಾಲಿಕೆಯ ಮಹಾಪೌರರಾದ ಶ್ರೀಮತಿ ಮಹೇಜಬಿನ ಅಬ್ದುಲರಜಾಕ ಹೊರ್ತಿ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ.
ತಾಳಿಕೋಟೆಯ ಎಸ್.ಕೆ. ಕಾಲೇಜಿನ ಸಹಾಯಕ ಪ್ರಾಧ್ಯಾಪಕರಾದ ಶ್ರೀಮತಿ ಸುಜಾತಾ ಚಲವಾದಿ, ವಿಜಯಪುರದ ಬಿ.ವಿ ದರಬಾರ ಪದವಿ ಪೂರ್ವ ಮಹಾವಿದ್ಯಾಲಯದ ಉಪನ್ಯಾಸಕರಾದ ಕಾಶಿನಾಥ ಕೋಣೆನವರ ವಿಶೇಷ ಉಪನ್ಯಾಸ ನೀಡಲಿದ್ದಾರೆ. ಶ್ರೀಮತಿ ಶ್ರೀದೇವಿ ಪತ್ತಾರ ವಚನ ಗಾಯನ ನಡೆಸಿಕೊಡಲಿದ್ದಾರೆ.
Subscribe to Updates
Get the latest creative news from FooBar about art, design and business.
Related Posts
Add A Comment
