ವಿಜಯಪುರ: ೨೦೨೩-೨೪ನೇ ಸಾಲಿನಲ್ಲಿ ಇಂಡಿ ಪುರಸಭೆ ವ್ಯಾಪ್ತಿಯಲ್ಲಿ ಡೇ-ನಲ್ಮ್ ಅಭಿಯಾನ ಮತ್ತು ಪಿಎಂ ಸ್ವನಿಧಿ ಯೋಜನೆ ಅಡಿಯಲ್ಲಿ ನಗರ ಕಲಿಕಾ ಪ್ರಾಯೋಗಿಕ ತರಬೇತಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗುತ್ತಿದೆ.
ಈ ಯೋಜನೆಯ ಮೂಲಕ ಬೀದಿ ವ್ಯಾಪಾರಿಗಳ ಕುರಿತು ಅಧ್ಯಯನ ಮಾಡಿ ಜ್ಞಾನ ಮತ್ತು ಕೌಶಲ್ಯ ವೃದ್ಧಿಸಿಕೊಳ್ಳಲು ಅವಕಾಶವನ್ನು ಕಲ್ಪಿಸಿಕೊಡಲಾಗುತ್ತದೆ. ಈ ತರಬೇತಿ ಕಾರ್ಯಕ್ರಮಕ್ಕೆ ಪದವಿ, ಸ್ನಾತಕೋತ್ತರ, ಡೀಪ್ಲೋಮ ಪಾಸಾದ ಅಭ್ಯರ್ಥಿಗಳಿಂದ ಅರ್ಜಿಯನ್ನು ಆಹ್ವಾನಿಸಲಾಗಿದೆ.
ಆಸಕ್ತ ಅಭ್ಯರ್ಥಿಗಳು ತಮ್ಮ ಶೈಕ್ಷಣಿಕ ದಾಖಲೆಗಳೊಂದಿಗೆ ೧೪-೦೨-೨೦೨೪ರ ಸಂಜೆ ೫ ಗಂಟೆಯೊಳಗೆ ಇಂಡಿ ಪುರಸಭೆ ಡೇ-ನಲ್ಮ್ ಶಾಖೆಗೆ ಸಲಿಸಬಹುದಾಗಿದ್ದು, ಈ ಕುರಿತಂತೆ ಹೆಚ್ಚಿನ ಮಾಹಿತಿಗಾಗಿ ಡೇ-ನಲ್ಮ್ ಶಾಖೆಯನ್ನು ಸಂಪರ್ಕಿಸುವಂತೆ ಇಂಡಿ ಪುರಸಭೆ ಮುಖ್ಯಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Subscribe to Updates
Get the latest creative news from FooBar about art, design and business.
Related Posts
Add A Comment
