Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ನೃತ್ಯ ಆತ್ಮದ ಗುಪ್ತ ಭಾಷೆ..

ಅಕ್ರಮ ಅಕ್ಕಿ ಸಾಗಣೆ: ಆರೋಪಿಗಳಿಂದ 32,850 ಕೆಜಿ ಅಕ್ಕಿ‌ ವಶ

ವಸತಿ ಶಾಲೆ, ನಿಲಯ ವ್ಯವಸ್ಥೆ ಜಂಟಿ ಸಮಿತಿ ರಚನೆ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಮಕ್ಕಳ ರಕ್ಷಣೆಗೆ ಅಧಿಕಾರಿಗಳು ಸಮನ್ವಯದಿಂದ ಕಾರ್ಯನಿರ್ವಹಿಸಿ
(ರಾಜ್ಯ ) ಜಿಲ್ಲೆ

ಮಕ್ಕಳ ರಕ್ಷಣೆಗೆ ಅಧಿಕಾರಿಗಳು ಸಮನ್ವಯದಿಂದ ಕಾರ್ಯನಿರ್ವಹಿಸಿ

By Updated:No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಸದಸ್ಯ ಶಶಿಧರ್ ಕೋಸಂಬೆ ಸಲಹೆ

ವಿಜಯಪುರ: ಬಾಲ್ಯವಿವಾಹ, ಬಾಲ ಕಾರ್ಮಿಕ ಪದ್ದತಿ, ಕಿಶೋರ್ ಕಾರ್ಮಿಕ ಪದ್ಧತಿ ಸಂಪೂರ್ಣ ನಿಷೇಧಿಸಿ, ಫೋಕ್ಸೋ ಪ್ರಕರಣ ದಾಖಲಿಸುವುದು ಹಾಗೂ
ಶಾಲೆಯಿಂದ ಹೊರಗುಳಿದ ಮಕ್ಕಳನ್ನು ಸಮಾಜದ ಮುಖ್ಯವಾಹಿನಿಗೆ ತರುವ ಮೂಲಕ ಮಕ್ಕಳ ರಕ್ಷಣೆ ಮಾಡಲು ಅಧಿಕಾರಿಗಳು ಪರಿಣಾಮಕಾರಿಯಾಗಿ ಕಾರ್ಯನಿರ್ವಹಿಸಬೇಕು ಎಂದು ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಸದಸ್ಯರಾದ ಶಶಿಧರ್ ಕೋಸಂಬೆ ಹೇಳಿದರು.
ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ ಬೆಂಗಳೂರು, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಪೊಲೀಸ್ ಇಲಾಖೆ, ಜಿಲ್ಲಾ ಮಕ್ಕಳ ರಕ್ಷಣಾ ಘಟಕ, ಶಾಲಾ ಶಿಕ್ಷಣ ಹಾಗೂ ಸಾಕ್ಷರತಾ ಇಲಾಖೆ ಹಾಗೂ ವಿವಿಧ ಇಲಾಖೆಗಳ ಆಶ್ರಯದಲ್ಲಿ ಬಾಲನ್ಯಾಯ (ಮಕ್ಕಳ ಪಾಲನೆ ಮತ್ತು ರಕ್ಷಣೆ) ಕಾಯ್ದೆ-೨೦೧೫ ಪೋಕ್ಸೋ ಕಾಯ್ದೆ-೨೦೧೨ ಬಾಲ್ಯವಿವಾಹ ನಿಷೇಧ ಕಾಯ್ದೆ-೨೦೦೬, ಆರ್.ಟಿ.ಇ ಕಾಯ್ದೆ-೨೦೦೯ರ ಕುರಿತು ಭಾಗೀದಾರ ಇಲಾಖೆಗಳ ಜಿಲ್ಲಾ, ತಾಲ್ಲೂಕು ಮತ್ತು ಗ್ರಾಮ ಮಟ್ಟದ ಅಧಿಕಾರಿಗಳಿಗೆ ಹಮ್ಮಿಕೊಂಡ ಎರಡು ದಿನಗಳ ಕಾರ್ಯಾಗಾರಕ್ಕೆ ಫೆ.೮ ರಂದು ಚಾಲನೆ ನೀಡಿ, ಅವರು ಮಾತನಾಡಿದರು.
ಜಿಲ್ಲೆಯಲ್ಲಿ ಬಾಲ್ಯ ವಿವಾಹ ತಡೆಗಟ್ಟಲು ಎಲ್ಲಾ ಇಲಾಖೆಗಳು ಜನರಲ್ಲಿ ಜಾಗೃತಿ ಮೂಡಿಸಬೇಕು. ಫೋಕ್ಸೋ ಪ್ರಕರಣಗಳನ್ನು ದಾಖಲಿಸಿಕೊಂಡು ಕ್ರಮ ವಹಿಸಬೇಕು. ಶಿಶು ಮರಣ ಘಟಿಸದಂತೆ ನೋಡಿಕೊಳ್ಳಲು ಮುಂಜಾಗೃತ ಕ್ರಮ ವಹಿಸಬೇಕು. ಸಂಬಂಧಿಸಿದ ಇಲಾಖೆಯ ಅಧಿಕಾರಿಗಳು ಸಮನ್ವಯದೊಂದಿಗೆ ಕಾರ್ಯನಿರ್ವಹಿಸಿ, ಸಮಾಜದ ಅನಿಷ್ಟ ಪದ್ಧತಿಗಳನ್ನು ತಡೆಯಬೇಕೆಂದು ಎಂದು ಅವರು ತಿಳಿಸಿದರು.
ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಸಂತೋಷ ಎಸ್. ಕುಂದರ್ ಅವರು ಮಾತನಾಡಿ, ಮಕ್ಕಳ ಮೇಲಿನ ದೌರ್ಜನ್ಯ ಪ್ರಕರಣಗಳ ತಡಗಟ್ಟಲು ಮುಂಜಾಗ್ರತಾ ಕ್ರಮಗಳನ್ನು ಕೈಗೊಂಡು ಅಧಿಕಾರಿಗಳು ಪರಿಣಾಮಕಾರಿಯಾಗಿ ಜಾಗೃತಿ ಕಾರ್ಯಕ್ರಮ ಅನುಷ್ಠಾನಗೊಳಿಸಿ ಕಾರ್ಯನಿರ್ವಹಿಸಬೇಕು ಎಂದು ಅವರು ತಿಳಿಸಿದರು.
ಅಪರ ಜಿಲ್ಲಾಧಿಕಾರಿ ಮಹಾದೇವ ಮುರಗಿ ಅವರು ಮಾತನಾಡಿದರು.
ಯುನಿಸೆಫ್ ಪ್ರಾದೇಶಿಕ ಸಂಯೋಜಕರಾದ ಡಾ.ಕೆ. ರಾಘವೇಂದ್ರ ಭಟ್ ಅವರು ಸಂಪನ್ಮೂಲ ವ್ಯಕ್ತಿಯಾಗಿ ಮಾಹಿತಿ ನೀಡಿದರು.
ಇದೇ ಸಂದರ್ಭದಲ್ಲಿ ಹೆಚ್ಚುವರಿ ಪೊಲೀಸ್ ಅಧೀಕ್ಷಕ ರಾಮಣ್ಣ ಗೌಡ ಹಟ್ಟಿ, ಜಿಲ್ಲಾ ಪಂಚಾಯತ್ ಯೋಜನಾ ನಿರ್ದೇಶಕ ಸಿ.ಬಿ ದೇವರಮನಿ, ಮಕ್ಕಳ ಕಲ್ಯಾಣ ಸಮಿತಿ ಅಧ್ಯಕ್ಷ ಶ್ರೀಧರ್ ಕುಲಕರ್ಣಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕ ಕೆ ಕೆ ಚವ್ಹಾಣ ಹಾಗೂ ಜಿಲ್ಲಾ ಮತ್ತು ತಾಲ್ಲೂಕು ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.
ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ದೀಪಾಕ್ಷಿ ಜಾನಕಿ ಸ್ವಾಗತಿಸಿದರು, ಗುರುರಾಜ್ ನಿರೂಪಿಸಿದರು, ಮೌನೇಶ್ ಪೋತದಾರ ವಂದಿಸಿದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ನೃತ್ಯ ಆತ್ಮದ ಗುಪ್ತ ಭಾಷೆ..

ಅಕ್ರಮ ಅಕ್ಕಿ ಸಾಗಣೆ: ಆರೋಪಿಗಳಿಂದ 32,850 ಕೆಜಿ ಅಕ್ಕಿ‌ ವಶ

ವಸತಿ ಶಾಲೆ, ನಿಲಯ ವ್ಯವಸ್ಥೆ ಜಂಟಿ ಸಮಿತಿ ರಚನೆ

ಕಾಂಗ್ರೆಸ್ ಸರ್ಕಾರದಿಂದ ಒಳ ಮೀಸಲಾತಿ ವೈಜ್ಞಾನಿಕವಾಗಿ ಅನುಷ್ಠಾನ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ನೃತ್ಯ ಆತ್ಮದ ಗುಪ್ತ ಭಾಷೆ..
    In ವಿಶೇಷ ಲೇಖನ
  • ಅಕ್ರಮ ಅಕ್ಕಿ ಸಾಗಣೆ: ಆರೋಪಿಗಳಿಂದ 32,850 ಕೆಜಿ ಅಕ್ಕಿ‌ ವಶ
    In (ರಾಜ್ಯ ) ಜಿಲ್ಲೆ
  • ವಸತಿ ಶಾಲೆ, ನಿಲಯ ವ್ಯವಸ್ಥೆ ಜಂಟಿ ಸಮಿತಿ ರಚನೆ
    In (ರಾಜ್ಯ ) ಜಿಲ್ಲೆ
  • ಕಾಂಗ್ರೆಸ್ ಸರ್ಕಾರದಿಂದ ಒಳ ಮೀಸಲಾತಿ ವೈಜ್ಞಾನಿಕವಾಗಿ ಅನುಷ್ಠಾನ
    In (ರಾಜ್ಯ ) ಜಿಲ್ಲೆ
  • ವಿಜಯಪುರಕ್ಕೆ ಮೇ.2 ರಂದು ರಾಜ್ಯ ಮಾಹಿತಿ ಆಯುಕ್ತರ ಪ್ರವಾಸ
    In (ರಾಜ್ಯ ) ಜಿಲ್ಲೆ
  • ಉಚಿತ ಆರೋಗ್ಯ ತಪಾಸಣೆ ಮತ್ತು ಚಿಕಿತ್ಸೆ ಬೃಹತ್ ಶಿಬಿರ
    In (ರಾಜ್ಯ ) ಜಿಲ್ಲೆ
  • ಬಿಸಿಲ ಝಳಕ್ಕೆ ತತ್ತರಿಸಿದ ಕುಕ್ಕುಟೋದ್ಯಮ: ಸಾಕಾಣಿಕೆಗಾರರ ಸಂಕಷ್ಟ
    In (ರಾಜ್ಯ ) ಜಿಲ್ಲೆ
  • ಜಿಲ್ಲೆಯ ಅಭಿವೃದ್ಧಿಗೆ ನಿಗದಿತ ಅವಧಿಯಲ್ಲಿ ಶ್ರಮಿಸಿ
    In (ರಾಜ್ಯ ) ಜಿಲ್ಲೆ
  • ಪಡಿತರ ದುರುಪಯೋಗಕ್ಕೆ ಕಠಿಣ ಕ್ರಮ :ಕಂಕಣವಾಡಿ
    In (ರಾಜ್ಯ ) ಜಿಲ್ಲೆ
  • ಫಲಿತಾಂಶದಲ್ಲಿ ಎಡವಟ್ಟು: ೮೬ ಅಂಕದ ಬದಲು ೪೫ ನಮೂದು
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.