ವಿಜಯಪುರ: ಪ್ರತಿವರ್ಷದಂತೆ ಈ ವರ್ಷವೂ ಫೆ.೧೦ ರಿಂದ ೧೮ರವರೆಗೆ ಇಂಡಿ ತಾಲೂಕಿನ ಇಂಚಗೇರಿಯಲ್ಲಿ ಜರುಗುವ ಶ್ರೀ ಬಾವುಸಾಹೇಬ ಮಹಾರಾಜರ ಸಪ್ತಹ ಹಾಗೂ ಸಿಂದಗಿ ತಾಲೂಕಿನ ಯಂಕಂಚಿಯಲ್ಲಿ ಜರುಗುವ ದಾವಲಮಲಿಕ ಉರುಸಿಗೆ ತೆರಳುವ ಪ್ರಯಾಣಿಕರ ಅನುಕೂಲಕ್ಕಾಗಿ ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮದ ವಿಜಯಪುರ ವಿಭಾಗದಿಂದ ವಿಶೇಷ ಸಾರಿಗೆ ವ್ಯವಸ್ಥೆ ಕಾರ್ಯಾಚರಣೆ ಮಾಡಲಾಗುವುದು.
ಪ್ರಯಾಣಿಕರಿಗೆ ಉತ್ತಮ ಸಾರಿಗೆ ಸೌಲಭ್ಯ ಕಲ್ಪಿಸುವ ದೃಷ್ಟಿಯಿಂದ ನಿಗಮದ ವಿಜಯಪುರ ವಿಭಗದ ವಿಜಯಪುರ ಕೇಂದ್ರ ಬಸ್ ನಿಲ್ದಾಣ, ಇಂಡಿ ಸಿಂದಗಿ, ಚಡಚಣ ಹಾಗೂ ಹೊರ್ತಿ ಬಸ್ ನಿಲ್ದಾಣಗಳಿಂದ ವಿಶೇಷ ಬಸ್‌ಗಳ ಕಾರ್ಯಾಚರಣೆ ಮಾಡಲಾಗುವುದು. ಪ್ರಯಾಣಿಕರು ಇದರ ಸದುಪಯೋಗ ಪಡೆದುಕೊಳ್ಳಬೇಕು ಹಾಗೂ ಸಾರಿಗೆ ಸೌಲಭ್ಯ ಮತ್ತು ಈ ಕುರಿತಂತೆ ಹೆಚ್ಚಿನ ಮಾಹಿತಿಗಾಗಿ ಘಟಕ ವ್ಯವಸ್ಥಾಪಕರು ವಿಜಯಪುರ ಘಟಕ-೧ ಮೊ: ೭೭೬೦೯೯೨೨೬೩, ಘಟಕ-೨ ಮೊ: ೭೭೬೦೯೯೨೨೬೪, ಇಂಡಿ ಮೊ: ೭೭೬೦೯೯೨೨೬೫, ಸಿಂದಗಿ ಮೊ: ೭೭೬೦೯೯೨೨೬೬, ಕೇಂದ್ರ ಬಸ್ ನಿಲ್ದಾಣ ನಿಲ್ದಾಣಾಧಿಕಾರಿಗಳು ವಿಜಯಪುರ ಮೊ: ೭೭೬೦೯೯೨೨೫೮ ಹಾಗೂ ಕೇಂದ್ರ ಬಸ್ ನಿಲ್ದಾಣ ವಿಜಯಪುರ ದೂ:೦೮೩೫೨-೨೫೧೩೪೪ ಸಂಖ್ಯೆಗೆ ಸಂಪರ್ಕಿಸುವಂತೆ ಪ್ರಕಟಣೆ ತಿಳಿಸಿದೆ.
Subscribe to Updates
Get the latest creative news from FooBar about art, design and business.
Related Posts
Add A Comment
