ವಿಜಯಪುರ: ನಗರದ ಎಸ್. ಎಸ್. ಹೈಸ್ಕೂಲ್ ಕ್ಯಾಂಪಸ್ ದೇಶ ನಾಡಿಗೆ ಗಣ್ಯಾತಿಗಣ್ಯರನ್ನು ಕೊಡುಗೆಯಾಗಿ ನೀಡಿದೆ ಎಂದು ಬಿ.ಎಲ್.ಡಿ.ಇ ಸಂಸ್ಥೆಯ ನಿರ್ದೇಶಕ ಬಸನಗೌಡ ಎಂ. ಪಾಟೀಲ ತಿಳಿಸಿದ್ದಾರೆ.
ನಗರದ ಬಿ.ಎಲ್.ಡಿ.ಇ ಸಂಸ್ಥೆಯ ಸಮನ್ವಯ ಇಂಗ್ಲಿಷ್ ಮೀಡಿಯಮ್ ಮತ್ತು ಎಸ್. ಎಸ್. ಪ್ರೈಮರಿ ಕನ್ನಡ ಮೀಡಿಯಂ ಶಾಲೆಯಲ್ಲಿ ಗುರುವಾರ ರಾತ್ರಿ ನಡೆದ ವಾರ್ಷಿಕೋತ್ಸವ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.
ವಚನಪಿತಾಮಹ ಡಾ. ಫ. ಗು. ಹಳಕಟ್ಟಿ ಅವರು ಸ್ಥಾಪಿಸಿದ ಬಿ.ಎಲ್.ಡಿ.ಇ ಸಂಸ್ಥೆ ಈಗ 114ನೇ ವರ್ಷ ಪೂರೈಸುತ್ತಿದೆ. ಈ ಸಂಸ್ಥೆಯ ಅಡಿಯಲ್ಲಿರುವ ಎಸ್. ಎಸ್. ಹೈಸ್ಕೂಲು ದೇಶಕ್ಕೆ ಉಪರಾಷ್ಟ್ರಪತಿಗಳಿಂದ ಹಿಡಿದು ಅನೇಕ ಜನ ಐಎಎಸ್ ಅಧಿಕಾರಿಗಳನ್ನು ಕೊಡುಗೆಯಾಗಿ ನೀಡಿದೆ. ಇಲ್ಲಿ ವಿದ್ಯಾಭ್ಯಾಸ ಮಾಡಿದ ಸಾವಿರಾರು ವಿದ್ಯಾರ್ಥಿಗಳು ನಾಡಿನಾದ್ಯಂತ ಮತ್ತು ದೇಶಾದ್ಯಂತ ಸರಕಾರಿ ಉನ್ನತ ಹುದ್ದೆಗಳಲ್ಲಿದ್ದಾರೆ. ಅಲ್ಲದೇ, ಆರ್ಥಿಕ, ಸಾಮಾಜಿಕ, ರಾಜಕೀಯ ಕ್ಷೇತ್ರಗಳಲ್ಲಿಯೂ ಉನ್ನತ ಸ್ಥಾನ ಗಳಿಸಿದ್ದಾರೆ ಎಂದು ಹೇಳಿದರು.
ಸಮನ್ವಯ ಶಾಲೆಯಲ್ಲಿ ಕಡಿಮೆ ಶುಲ್ಕ ಪಡೆದು ಅತ್ಯುತ್ತಮ ಶಿಕ್ಷಣ ನೀಡಲಾಗುತ್ತಿದೆ. 2017ರಲ್ಲಿ ಪ್ರಾರಂಭವಾದ ಶಾಲೆಯಲ್ಲಿ ಈಗ 1100 ವಿದ್ಯಾರ್ಥಿಗಳಿದ್ದಾರೆ. ರಾಜ್ಯದ ಇತರ ಶಾಲೆಗಳಿಗೆ ಮಾದರಿಯಾಗುವಂತೆ ಇಲ್ಲಿನ ವಿದ್ಯಾರ್ಥಿಗಳು ಸಾಂಸ್ಕೃತಿಕ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳುತ್ತಿರುವುದು ಸಂತಸ ತಂದಿದೆ. ಪ್ರತಿಯೊಬ್ಬರೂ ಪಠ್ಯದ ಜೊತೆಗೆ ಕ್ರೀಡೆ ಮತ್ತು ಸಾಂಸ್ಕೃತಿಕ ಚಟುವಟಿಕೆಗಳಲ್ಲಿ ಪಾಲ್ಗೊಳ್ಳಬೇಕು. ಸಂಸ್ಥೆ ಮತ್ತು ಶಿಕ್ಷಕರು ಇದಕ್ಕೆ ಅಗತ್ಯವಾದ ಎಲ್ಲ ಪ್ರೋತ್ಸಾಹ ನೀಡುತ್ತೇವೆ ಎಂದು ಅವರು ಹೇಳಿದರು.
ಬಿ.ಎಲ್.ಡಿ.ಇ ಸಂಸ್ಥೆಯ ಮುಖ್ಯ ಆಡಳಿತಾಧಿಕಾರಿ ಡಾ. ಆರ್. ಬಿ. ಕೊಟ್ನಾಳ ಮಾತನಾಡಿದರು.
ಈ ಸಂದರ್ಭದಲ್ಲಿ ಶಾಲೆಯ ಸಾಧನೆ ಕುರಿತು ಪುಸ್ತಕವನ್ನು ಬಿಡುಗಡೆ ಮಾಡಲಾಯಿತು. ಅಲ್ಲದೇ, ನಾನಾ ಕ್ರೀಡೆಗಳಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಬಹುಮಾನ ವಿತರಿಸಲಾಯಿತು.
ಈ ಸಂದರ್ಭದಲ್ಲಿ ಬಿ.ಎಲ್.ಡಿ.ಇ ಸಂಸ್ಥೆಯ ಆಡಳಿತಾಧಿಕಾರಿ ಬಿ. ಆರ್. ಪಾಟೀಲ, ಎಸ್. ಎಸ್. ಕ್ಯಾಂಪಸ್ ಆಡಳಿತಾಧಿಕಾರಿ ಪ್ರೊ. ಐ. ಎಸ್. ಕಾಳಪ್ಪನವರ, ಸಂಸ್ಥೆಯ ಅಧೀಕ್ಷಕ ಎಸ್. ಎ. ಬಿರಾದಾರ(ಕನ್ನಾಳ ಗೌಡ್ರು), ಎಸ್.ಎಸ್.ಬಿ. ಹೈಸ್ಕೂಲ್ ಮುಖ್ಯ ಶಿಕ್ಷಕ ವಿ. ಬಿ. ಪಾಟೀಲ, ಸಹಾಯಕ ಶಿಕ್ಷಕಿ ವಿದ್ಯಾ ಎಸ್. ಬಿರಾದಾರ, ಜೆಎಸ್ಎಸ್ ಬಿ.ಎಡ್.ಕಾಲೇಜಿನ ಪ್ರಾಚಾರ್ಯೆ ಡಾ. ಬಿ. ವೈ. ಖಾಸನೀಸ, ಸಮನ್ವಯ ಇಂಗ್ಲಿಷ್ ಮೀಡಿಯಂ ಸ್ಕೂಲ್ ಮುಖ್ಯ ಶಿಕ್ಷಕ ಎಸ್. ಸಿ. ಬಿರಾದಾರ, ಶಾಲೆಯ ಪ್ರಧಾನ ಕಾರ್ಯದರ್ಶಿ ವಿಕಾಸ ಹಡಪದ ಮುಂತಾದವರು ಉಪಸ್ಥಿತರಿದ್ದರು.
ಆರ್. ಎಂ. ಪೋತದಾರ ಸ್ವಾಗತಿಸಿದರು. ವಿದ್ಯಾರ್ಥಿನಿ ಮೇಘಾ ಗಾಡಿವಡ್ಡರ ನಿರೂಪಿಸಿದರು.
Subscribe to Updates
Get the latest creative news from FooBar about art, design and business.
ನಾಡಿಗೆ ಗಣ್ಯಾತಿಗಣ್ಯರ ಕೊಡುಗೆ ನೀಡಿದ ಎಸ್. ಎಸ್. ಹೈಸ್ಕೂಲ್
Related Posts
Add A Comment

