ವಿಜಯಪುರ: ಸಂವಿಧಾನ ನಮಗೆಲ್ಲ ಮೂಲಭೂತ ಹಕ್ಕುಗಳನ್ನು ನೀಡಿದೆ. ಕರ್ತವ್ಯಗಳನ್ನು ನೀಡಿದೆ. ಭಾರತಕ್ಕೆ ಸಂವಿಧಾನವೇ ಬಹುದೊಡ್ಡ ಬಲ. ನಮ್ಮ ಸಂವಿಧಾನ ನಮ್ಮೆಲ್ಲರನ್ನು ರಕ್ಷಿಸುವ ಬಹುದೊಡ್ಡ ಕಾನೂನು ಗ್ರಾಮ ಪಂಚಾಯತ್ ಅಧ್ಯಕ್ಷೆ ಮಂಜುಳಾ ನಡುವಿನಕೇರಿ ಹೇಳಿದರು.
ವಿಜಯಪುರ ಜಿಲ್ಲೆಯ ಆಲಮೇಲ ತಾಲೂಕಿನ ಮಲಘಾಣ ಗ್ರಾಮದಲ್ಲಿ ಸರ್ಕಾರದ ವತಿಯಿಂದ ಹಮ್ಮಿಕೊಂಡ ಸಂವಿಧಾನ ಜಾಗೃತಿ ಜಾಥಾದ ಅಭಿಯಾನವನ್ನು ಸ್ವಾಗತಿಸಿ ವೇಧಿಕೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ಭಾರತ ಸಂವಿಧಾನವು ಜನರನ್ನು ಸಶಕ್ತಗೊಳಿಸಿದೆ. ಸರ್ವರಿಗೂ ಸಮಾನತೆ ಒದಗಿಸಿದೆ ಎಂದು ಹೇಳಿದರು.
ಗ್ರಾಮ ಪಂಚಾಯತ್ ಅಧ್ಯಕ್ಷರು, ಸದಸ್ಯರು, ಗ್ರಾಮಸ್ಥರು, ಯುವಕರು, ಸೇರಿದಂತೆ ಸಾವಿರಾರು ಜನರು ಸಂವಿಧಾನ ಜಾಗೃತಿ ಜಾಥಾದ ಸ್ತಭ್ದಚಿತ್ರಕ್ಕೆ ಪುಷ್ಪನಮನ ಸಲ್ಲಿಸಿ, ಬಳಿಕ ಮುಖ್ಯ ರಸ್ತೆಯಿಂದ ಮೆರವಣಿಗೆದೊಂದಿಗೆ ಅದ್ದೂರಿಯಾಗಿ ಸ್ವಾಗತಿಸಿದರು.
ಸ್ತ್ಥಭ್ದಚಿತ್ರ ಜಾಥಾವು ಆಲಮೇಲ ತಾಲೂಕಿನ ಬಮ್ಮನಹಳ್ಳಿ, ಮಲಘಾಣ, ಕಕ್ಕಳಮೇಲಿ, ಬಗಲೂರು, ದೇವರನಾವದಗಿ, ಗ್ರಾಮಗಳಲ್ಲಿ ಸಂಚರಿಸಿ ಸಂವಿಧಾನ ಕುರಿತು ಜಾಗೃತಿ ಮೂಡಿಸಿತು.
ಈ ಸಂದರ್ಭದಲ್ಲಿ ಉಪಾಧ್ಯಕ್ಷರಾದ ಸಂಗಮ್ಮ ದುದ್ದನಗಿ, ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳಾದ ಸಿದ್ಧರಾಮ ಅಂಕಲಗಿ, ಸಹಾಯಕ ನಿದೇಶಕರಾದ ಶಿವಲಿಂಗಪ್ಪ ಹಚಡದ, ಪಿಡಿಒ ಸಂಜುಕುಮಾರ ದೊಡ್ಡಮನಿ, ನೋಡಲ್ ಅಧಿಕಾರಿಗಳು ಸಮಾಜ ಕಲ್ಯಾಣ ಸಹಾಯಕ ನಿರ್ದೇಶಕರಾದ ಅಧಿಕಾರಿಗಳು, ವಿವಿಧ ಮುಖಂಡರು, ಅಧಿಕಾರಿಗಳು, ಮತ್ತು ಹಿರಿಯರು ಉಪಸ್ಥಿತರಿದ್ದರು.
Subscribe to Updates
Get the latest creative news from FooBar about art, design and business.
Related Posts
Add A Comment

