ವಿಜಯಪುರ: ಸಂವಿಧಾನದ ಪಾವಿತ್ರ‍್ಯತೆ ರಕ್ಷಿಸುವುದು ಪ್ರತಿಯೊಬ್ಬ ಭಾರತೀಯರ ಕರ್ತವ್ಯ ಎಂದು ಗ್ರಾಮ ಪಂಚಾಯತ್ ಅಧ್ಯಕ್ಷ ಶ್ರಿಕಾಂತ ಗಣಿ ಹೇಳಿದರು.
ಕೊಲ್ಹಾರ ತಾಲೂಕಿನ ಹಣಮಾಪುರ ಗ್ರಾಮದಲ್ಲಿ ಸರ್ಕಾರದ ವತಿಯಿಂದ ಹಮ್ಮಿಕೊಂಡ ಸಂವಿಧಾನ ಜಾಗೃತಿ ಜಾಥಾ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಸಂವಿಧಾನದ ಮುಖ್ಯ ಉದ್ದೇಶವೆಂದರೆ ಪ್ರತಿಯೊಬ್ಬ ನಾಗರಿಕರಿಗೆ ಸಮಾನ ಅವಕಾಶ ದೊರೆಯಬೇಕು. ಅದಕ್ಕೆ ಮೊದಲು ನಾವು ಸಂವಿಧಾನದ ಮಹತ್ವವನ್ನು ಎಲ್ಲರಿಗೂ ತಿಳಿಸಿಕೊಡುವುದು ಹಾಗೂ ಸಂವಿಧಾನದ ಆಶಯ ಕುರಿತು ಜಾಗೃತಿ ಮೂಡಿಸುವುದಾಗಿದೆ ಎಂದರು.
ಗ್ರಾಮ ಪಂಚಾಯತ್ ಅಧ್ಯಕ್ಷರು, ಸದಸ್ಯರು, ಗ್ರಾಮಸ್ಥರು, ಯುವಕರು, ಸೇರಿದಂತೆ ಸಾವಿರಾರು ಜನರು ಸಂವಿಧಾನ ಜಾಗೃತಿ ಜಾಥಾದ ಸ್ತಭ್ದಚಿತ್ರಕ್ಕೆ ಪುಷ್ಪನಮನ ಸಲ್ಲಿಸಿ, ಬಳಿಕ ಮುಖ್ಯ ರಸ್ತೆಯಿಂದ ಮೆರವಣಿಗೆದೊಂದಿಗೆ ಅದ್ದೂರಿಯಾಗಿ ಸ್ವಾಗತಿಸಿದರು. ಶಾಲಾ ಮಕ್ಕಳಿಂದ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು, ಮಹಿಳೆಯರಿಂದ ಕುಂಭಮೇಳ, ಡೊಳ್ಳು ಕುಣಿತ ಮೆರವಣಿಗೆ ಕಳೆ ತಂದುಕೊಟ್ಟಿತು.
ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರ ಭಾವ ಚಿತ್ರಕ್ಕೆ ಪುಷ್ಪನಮನ ಸಲ್ಲಿಸಿ, ಸಂವಿಧಾನ ಪೀಠಿಕೆ ಓದುವುದರ ಮೂಲಕ ಪ್ರಮಾಣ ಮಾಡಲಾಯಿತು.
ಕೊಲ್ಹಾರ್ ತಾಲೂಕಿನ ಹಣಮಾಪುರ, ಸಿದ್ದನಾಥ ಆರ್.ಸಿ, ಅರಷಣಗಿ, ತೆಲಗಿ, ಕೂಡಗಿ, ಗ್ರಾಮಗಳಲ್ಲಿ ಸ್ಥಭ್ದಚಿತ್ರ ಜಾಥಾ ವಾಹನ ಸಂಚರಿಸಿ ಸಂವಿಧಾನ ಕುರಿತು ಜಾಗೃತಿ ಮೂಡಿಸಿತು.
ಈ ಸಂದರ್ಭದಲ್ಲಿ ಪಿಡಿಓ ಐ.ಡಿ.ಬಡಿಗೇರ, ಎಸ್‌ಡಿಎಂಸಿ ಅಧ್ಯಕ್ಷ ಸಂಗಪ್ಪಾ ಮಾದರ, ತಹಶಿಲ್ದಾರ ಎಸ್.ಎಸ್. ನಾಯ್ಕಲಮಠ, ನೋಡಲ್ ಅಧಿಕಾರಿ ವಿಲಾಸ ರಾಠೋಡ, ಸಮಾಜ ಕಲ್ಯಾಣ ಅಧಿಕಾರಿ ಭವಾನಿ ಪಾಟೀಲ್, ಸಮಾಜ ಕಲ್ಯಾಣ ಸಹಾಯಕ ನಿರ್ದೇಶಕರಾದ ಅಧಿಕಾರಿಗಳು ಉಪಸ್ಥಿತರಿದ್ದರು.
Subscribe to Updates
Get the latest creative news from FooBar about art, design and business.
ಸಂವಿಧಾನದ ಪಾವಿತ್ರ‍್ಯತೆ ರಕ್ಷಣೆ ಪ್ರತಿಯೊಬ್ಬರ ಕರ್ತವ್ಯ :ಗಣಿ
Related Posts
Add A Comment

