ದೇವರಹಿಪ್ಪರಗಿ: ಮಾಜಿಸಚಿವ, ಕೋಲಿ ಕಬ್ಬಲಿಗ ಸಮುದಾಯದ ಮುಖಂಡ ಪ್ರಮೋದ ಮದ್ವರಾಜ್ ಇವರಿಗೆ ಉಡುಪಿ-ಚಿಕ್ಕಮಗಳೂರು ಮತಕ್ಷೇತ್ರದಿಂದ ಲೋಕಸಭಾ ಟಿಕೆಟ್ ನೀಡುವಂತೆ ಕೋಲಿ ಕಬ್ಬಲಿಗ ಯುವವೇದಿಕೆ ರಾಜ್ಯಾಧ್ಯಕ್ಷ ಶಿವಾಜಿ ಮೆಟಗಾರ ಬಿಜೆಪಿ ನಾಯಕರನ್ನು ಆಗ್ರಹಿಸಿದ್ದಾರೆ.
ಪಟ್ಟಣದಲ್ಲಿ ಶುಕ್ರವಾರ ಪತ್ರಿಕೆಯೊಂದಿಗೆ ಮಾತನಾಡಿದ ಶಿವಾಜಿ, ಪ್ರಮೋದ ಮಧ್ವರಾಜ್ ಹಲವು ವರ್ಷಗಳ ಹಿಂದೆ ಕಾಂಗ್ರೆಸ್ ತೊರೆದು ಯಾವುದೇ ಬೇಡಿಕೆಯನ್ನಿಡದೆ ಪ್ರಧಾನಿ ನರೇಂದ್ರ ಮೋದಿ ಅವರ ನಾಯಕತ್ವ ಮೆಚ್ಚಿ ಬಿಜೆಪಿ ಸೇರಿದ್ದಾರೆ. ಕರಾವಳಿ ಭಾಗದ ರಾಜಕೀಯ ವಲಯದಲ್ಲಿ ಇವರ ತಂದೆ ಶಾಸಕರು, ಇವರ ತಾಯಿ ಶಾಸಕರು, ಸಚಿವರಾಗಿದ್ದರು, ಇವರು ಸಹ ಶಾಸಕರಾಗಿ, ಸಚಿವರಾಗಿ ಕಾರ್ಯ ನಿರ್ವಹಿಸಿದ್ದಾರೆ.
ಕಾಂಗ್ರೆಸ್ ತೊರೆದು ಯಾವುದೇ ಷರತ್ತು ಇಲ್ಲದೆ ಬಿಜೆಪಿಗೆ ಬಂದಿರುವ ಪ್ರಮೋದ ಮಧ್ವರಾಜ್ ಕೋಲಿ, ಕಬ್ಬಲಿಗ, ಅಂಬಿಗ ಸಮುದಾಯದ ರಾಜ್ಯ ಪ್ರಮುಖರಾಗಿದ್ದಾರೆ. ಇಡೀ ರಾಜ್ಯಾದ್ಯಂತ ಸುಮಾರು ೫೦ಲಕ್ಷ ಕೋಲಿ ಕಬ್ಬಲಿಗ ಮತದಾರರಿದ್ದು, ಇವರಿಗೆ ಲೋಕಸಭಾ ಚುನಾವಣೆಯಲ್ಲಿ ಟಿಕೆಟ್ ನೀಡುವುದರಿಂದ ಬಿಜೆಪಿಗೆ ಹೆಚ್ಚಿನ ಅನುಕೂಲವಾಗಲಿದೆ. ಜೊತೆಗೆ ನಮ್ಮ ಸಮುದಾಯವು ಸಹ ಬಿಜೆಪಿಯನ್ನು ಬೆಂಬಲಿಸಲಿದೆ. ಆದ್ದರಿಂದ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಯಿಂದ ಸ್ಪರ್ಧಿಸಲು ಅವಕಾಶ ನೀಡುವುದರ ಮೂಲಕ ಹಿಂದುಳಿದ ಸಮುದಾಯಕ್ಕೆ ನ್ಯಾಯ ಕಲ್ಪಿಸಬೇಕು ಎಂದು ತಿಳಿಸಿದ್ದಾರೆ.
Subscribe to Updates
Get the latest creative news from FooBar about art, design and business.
Related Posts
Add A Comment