Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಬಿಸಿಲ ತಾಪ: ಕಛೇರಿ ವೇಳೆ ಬದಲಾವಣೆಗೆ ನೌಕರರ ಸಂಘ ಮನವಿ

ಕುಡಿವ ನೀರಿನ ತೊಂದರೆಯಾಗದಂತೆ ಕ್ರಮ ವಹಿಸಿ

ವರದಿಗಳ ತಯಾರಿಕೆಗೆ ನಿಖರ ಹಾಗೂ ಸಮಗ್ರ ಮಾಹಿತಿ ಒದಗಿಸಿ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ರೈತರಿಗೆ ಎಫ್‌ಆರ್‌ಪಿ ದರಕ್ಕಿಂತ ಹೆಚ್ಚಿನ ದರ ನೀಡಿಕೆ
(ರಾಜ್ಯ ) ಜಿಲ್ಲೆ

ರೈತರಿಗೆ ಎಫ್‌ಆರ್‌ಪಿ ದರಕ್ಕಿಂತ ಹೆಚ್ಚಿನ ದರ ನೀಡಿಕೆ

By Updated:No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಭೀಮಾಶಂಕರ ಸಕ್ಕರೆ ಕಾರ್ಖಾನೆ ಆಡಳಿತ ಮಂಡಳಿ ಚುನಾವಣೆ ಪ್ರಚಾರ ಸಭೆಯಲ್ಲಿ ಶಾಸಕ ಯಶವಂತ್ರಾಯಗೌಡ ಸ್ಪಷ್ಠನೆ

ಇಂಡಿ: ೨೦೧೩ರ ಚುನಾವಣೆಯಲ್ಲಿ ಮಾತು ಕೊಟ್ಟಂತೆ ಭೀಮಾಶಂಕರ ಸಹಕಾರಿ ಸಕ್ಕರೆ ಕಾರ್ಖಾನೆ ಕಟ್ಟಿ ಕಬ್ಬು ನುರಿಸಲು ಪ್ರಾರಂಭಿಸಲಾಗಿದೆ. ಈಗ ಇಥೆನಾಲ್ ಘಟಕವನ್ನೂ ಸ್ಥಾಪಿಸಲಾಗುತ್ತಿದೆ. ಅಲ್ಲದೆ ಕಾರ್ಖಾನೆಗೆ ಸಾಲ ನೀಡಿದ ಬ್ಯಾಂಕ್‌ಳಿಗೆ ಪ್ರತೀ ವರ್ಷ ಮಾರ್ಚ ೩೧ ರ ಒಳಗಾಗಿ ಕಂತು ಹಾಗೂ ಬಡ್ಡಿಯನ್ನು ನಿಯಮಿತವಾಗಿ ಕಟ್ಟಲಾಗುತ್ತಿದೆ ಎಂದು ಶಾಸಕ ಯಶವಂತ್ರಾಯಗೌಡ ಪಾಟೀಲ ಹೇಳಿದರು.
ಅವರು ಶುಕ್ರವಾರ ಪಟ್ಟಣದ ಸಿಂದಗಿ ರಸ್ತೆಯ ಧನಶೆಟ್ಟಿ ಮಂಗಲ ಕಾರ್ಯಾಲಯದಲ್ಲಿ ಆಯೋಜಿಸಿದ್ದ ಭೀಮಾಶಂಕರ ಸಕ್ಕರೆ ಕಾರ್ಖಾನೆಯ ಆಡಳಿತ ಮಂಡಳಿಯ ಚುನಾವಣಾ ಪ್ರಚಾರ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.
೧೮೪ ಎಕರೆ ಪ್ರದೇಶದಲ್ಲಿ ೧೦೦ ವರ್ಷ ಬಾಳಿಕೆ ಬರುವ ಟರ್ಬೈನ್ ಅಳವಡಿಸಿ ಕಾರ್ಖಾನೆ ಕಟ್ಟಲಾಗಿದೆ. ಇದು ಮುಂದಿನ ೧೦೦ ವರ್ಷಗಳ ಕಾಲ ಕೆಲಸ ಮಾಡುವಂತೆ ಕ್ರಮ ಜರುಗಿಸಲಾಗಿದೆ. ನನ್ನ ಶಕ್ತಿ ಮೀರಿ ಕಾರ್ಖಾನೆ ಕಟ್ಟಿದ್ದೇನೆ. ಇದಕ್ಕೆ ಸಾಲ ಇದ್ದದ್ದು ನಿಜ. ನಿಸರ್ಗ ಅನುಕೂಲ ಕೊಟ್ಟರೆ ಕಾರ್ಖಾನೆ ಹೆಚ್ಚಿನ ಲಾಭದಲ್ಲಿರುತ್ತದೆ. ರೈತರಿಗೆ ಎಫ್‌ಆರ್‌ಪಿ ದರಕ್ಕಿಂತ ಹೆಚ್ಚಿನ ದರ ನೀಡುತ್ತಿದ್ದೇವೆ ಎಂದರು.
ಈ ಕಾರ್ಖಾನೆಯನ್ನು ಶೇರುದಾರ ರೈತರ ಆಸ್ತಿಯನ್ನಾಗಿ ಮಾಡಿದ್ದೇನೆ. ೧ ಸಾವಿರ ರೂ, ಗಳ ಶೇರಿನ ಬೆಲೆ ಇದೀಗ ೧ ಲಕ್ಷ ರೂ ಆಗಿದೆ. ರೈತರು ಸಹಕಾರ ನೀಡಿ ಸಂಪೂರ್ಣ ಬೆಳವಣಿಗೆಯಾದ ಕಬ್ಬನ್ನು ನೀಡಿದರೆ ರಿಕವರಿ ಹೆಚ್ಚಾಗಿ ಕಾರ್ಖಾನೆಗೆ ಲಾಭವಾಗುತ್ತದೆ. ಆ ನಿಟ್ಟಿನಲ್ಲಿ ರೈತರು ಸಹಕಾರ ನೀಡಬೇಕೆಂದು ಮನವಿ ಮಾಡಿದರು.
ಬರುವ ದಿನಾಂಕ ಫೆ. ೧೧ ರಂದು ಕಾರ್ಖಾನೆಗೆ ನಿರ್ದೇಶಕ ಮಂಡಳಿಗೆ ಚುನಾವಣೆ ನಡೆಯಲಿದ್ದು, ಸಾಮಾನ್ಯ “ಅ” ವರ್ಗಕ್ಕೆ ೫ ಜನರನ್ನು ಆಯ್ಕೆ ಮಾಡಬೇಕಿದೆ. ೮ ಜನ ಕಣದಲ್ಲಿದ್ದಾರೆ. ಇವರಲ್ಲಿ ನನ್ನನ್ನು ಸೇರಿ ಇನ್ನಿತರ ಅಭ್ಯರ್ಥಿಗಳಾದ ಬಸವರಾಜ ಸಿದ್ರಾಮಪ್ಪ ಧನಶ್ರೀ, ಮಲ್ಲನಗೌಡ ರಾಮಚಂದ್ರಗೌಡ ಪಾಟೀಲ, ರೇವಗೊಂಡಪ್ಪ ಅಣ್ಣಾರಾಯ ಪಾಟೀಲ ಮತ್ತು ಸಿದ್ದಣ್ಣ ರಾಮಣ್ಣ ಬಿರಾದಾರ ಅವರಿಗೆ ಅದರಂತೆ ಮಹಿಳಾ ಮೀಸಲು ಸ್ಥಾನಕ್ಕೆ ಸ್ಪರ್ಧಿಸಿರುವ ಲಲಿತಾ ಅಡಿವೆಪ್ಪ ನಡಗೇರಿ ಮತ್ತು ಸರೋಜಿನಿ ಸಿದ್ದಾರಾಯ ಪಾಟೀಲ ಅವರಿಗೆ ಪರಿಶಿಷ್ಟ ಜಾತಿಯ ಮೀಸಲು ಸ್ಥಾನಕ್ಕೆ ಸ್ಪರ್ಧೆ ಮಾಡಿರುವ ಅಶೋಕ ಅಂಬಾಜಿ ಗಜಾಕೋಶ ಅವರಿಗೆ ತಮ್ಮ ಅಮೂಲ್ಯವಾದ ಮತ ನೀಡಿ ಆಯ್ಕೆ ಮಾಡಬೇಕೆಂದು ಮನವಿ ಮಾಡಿಕೊಂಡರು. ಮಹಿಳಾ ಮೀಸಲು ಸ್ಥಾನಕ್ಕೆ ಸ್ಪರ್ಧೆ ಮಾಡಿರುವ ಇನ್ನೋರ್ವ ಅಭ್ಯರ್ಥಿ ದಾನಮ್ಮ ಕರಬಸಪ್ಪ ಬಿರಾದಾರ ಈಗಾಗಲೇ ಕಣದಿಂದ ಹಿಂದಕ್ಕೆ ಸರಿದಿರುವದಾಗಿ ಹೇಳಿಕೆ ನೀಡಿದ್ದಾರೆ. ಅವರಿಗೆ ಅಭಿನಂದಿಸುವದಾಗಿ ಹೇಳಿದರು.
ಚುನಾವಣಾ ಪ್ರಚಾರ ಸಭೆಯಲ್ಲಿ ಎಂ.ಆರ್. ಪಾಟೀಲ ಬಳ್ಳೊಳ್ಳಿ, ಬಿಜೆಪಿಯ ಹಿರಿಯ ಮುಖಂಡ ಸಿದ್ಧಲಿಂಗ ಹಂಜಗಿ, ಶಾಂತೇಶ್ವರ ಸಹಕಾರಿ ಸಂಘದ ಅಧ್ಯಕ್ಷ ಶ್ರೀಮಂತ ಇಂಡಿ, ಧನರಾಜ್ ಮುಜಗೊಂಡ, ಇಲಿಯಾಸ್ ಬೋರಾಮಣಿ ಮಾತನಾಡಿ, ಶಾಸಕ ಯಶವಂತರಾಯಗೌಡ ಪಾಟೀಲ ಕಾರ್ಖಾನೆ ಕಟ್ಟಿ ಬೆಳೆಸಿದ್ದಾರೆ, ಕಳೆದ ೫ ವರ್ಷಗಳ ಕಾಲ ಚೆನ್ನಾಗಿ ನಡೆಸಿಕೊಂಡು ಬಂದಿದ್ದಾರೆ. ಅವರು ಶಾಸಕರಾಗಿದ್ದರಿಂದ ಸರಕಾರದಿಂದ ಏನಾದರೂ ಸಹಾಯ ಪಡೆಯಲು ಸಾಧ್ಯವಾಗುತ್ತದೆ ಕಾರಣ ಅವರನ್ನು ಬೆಂಬಲಿಸಬೇಕೆಂದು ಮನವಿ ಮಾಡಿಕೊಂಡರು.
ಡಿ.ಎ.ಮುಜಗೊಂಡ ನಿರೂಪಿಸಿ, ವಂದಿಸಿದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಬಿಸಿಲ ತಾಪ: ಕಛೇರಿ ವೇಳೆ ಬದಲಾವಣೆಗೆ ನೌಕರರ ಸಂಘ ಮನವಿ

ಕುಡಿವ ನೀರಿನ ತೊಂದರೆಯಾಗದಂತೆ ಕ್ರಮ ವಹಿಸಿ

ವರದಿಗಳ ತಯಾರಿಕೆಗೆ ನಿಖರ ಹಾಗೂ ಸಮಗ್ರ ಮಾಹಿತಿ ಒದಗಿಸಿ

ಜನಪ್ರತಿನಿಧಿಗಳ & ಅಧಿಕಾರಿಗಳ ವಿಶೇಷ ಸಭೆ ಕರೆಯಿರಿ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಬಿಸಿಲ ತಾಪ: ಕಛೇರಿ ವೇಳೆ ಬದಲಾವಣೆಗೆ ನೌಕರರ ಸಂಘ ಮನವಿ
    In (ರಾಜ್ಯ ) ಜಿಲ್ಲೆ
  • ಕುಡಿವ ನೀರಿನ ತೊಂದರೆಯಾಗದಂತೆ ಕ್ರಮ ವಹಿಸಿ
    In (ರಾಜ್ಯ ) ಜಿಲ್ಲೆ
  • ವರದಿಗಳ ತಯಾರಿಕೆಗೆ ನಿಖರ ಹಾಗೂ ಸಮಗ್ರ ಮಾಹಿತಿ ಒದಗಿಸಿ
    In (ರಾಜ್ಯ ) ಜಿಲ್ಲೆ
  • ಜನಪ್ರತಿನಿಧಿಗಳ & ಅಧಿಕಾರಿಗಳ ವಿಶೇಷ ಸಭೆ ಕರೆಯಿರಿ
    In (ರಾಜ್ಯ ) ಜಿಲ್ಲೆ
  • ಪಿ ಯು ಶಿಕ್ಷಣ ಸೇರ್ಪಡೆ ಬೇಡ ಆಗ್ರಹಿಸಿ ಉಪನ್ಯಾಸಕರ ಪ್ರತಿಭಟನೆ
    In (ರಾಜ್ಯ ) ಜಿಲ್ಲೆ
  • ದ್ರಾಕ್ಷಿ ಬೆಳೆಗಾರರ ಬಾಕಿ ವಿಮೆ ಹಣ ತಕ್ಷಣ ಬಿಡುಗಡೆಗೆ ಆಗ್ರಹ
    In (ರಾಜ್ಯ ) ಜಿಲ್ಲೆ
  • ಬಸವಣ್ಣ, ಅಕ್ಕಮಹಾದೇವಿಯನ್ನು ನಿಂದಿಸಿದವನ ಮೇಲೆ ಕ್ರಮಕ್ಕೆ ಆಗ್ರಹ
    In (ರಾಜ್ಯ ) ಜಿಲ್ಲೆ
  • ಜಿ.ಐ.ಎಸ್ ಆಧಾರಿತ ಮಹಾಯೋಜನೆ-೨೦೪೧ ಅನುಷ್ಠಾನ ಸಭೆ
    In (ರಾಜ್ಯ ) ಜಿಲ್ಲೆ
  • ಇತರರ ಕಾಳಜಿಯಲ್ಲಿ ಸ್ವಯಂ ನಿರ್ಲಕ್ಷ್ಯ ಬೇಡ
    In ವಿಶೇಷ ಲೇಖನ
  • ಶಿಸ್ತು ಮತ್ತು ಬದ್ಧತೆ
    In ವಿಶೇಷ ಲೇಖನ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.