Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಉದಯರಶ್ಮಿ ಇಂದಿನ ದಿನಪತ್ರಿಕೆ ಜೂನ್ 26, 2026

ಅಥಣಿ: ಮತ್ತಷ್ಟು 4 ಎಐ ಕ್ಯಾಮೆರಾಗಳ ಕಾರ್ಯಾರಂಭ

ವಿದ್ಯಾರ್ಥಿಗಳು ಯಾವುದೇ ವ್ಯಸನಗಳಿಗೆ ಒಳಗಾಗಬಾರದು

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಪರಿವಾರ/ತಳವಾರ ಎಸ್‌ಟಿ ಗೆ ಸೇರಿಸಲು ತೀರ್ಮಾನ
(ರಾಜ್ಯ ) ಜಿಲ್ಲೆ

ಪರಿವಾರ/ತಳವಾರ ಎಸ್‌ಟಿ ಗೆ ಸೇರಿಸಲು ತೀರ್ಮಾನ

By No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಈ ಬಗ್ಗೆ ಕೂಡಲೇ ಸಭೆ ಕರೆದು ಕ್ರಮ ವಹಿಸುವುದಾಗಿ ಸಿಎಂ ಸಿದ್ದರಾಮಯ್ಯ ಸ್ಪಷ್ಠನೆ


ಹರಿಹರ: ಮೈಸೂರು, ಚಾಮರಾಜನಗರ, ಕೊಡಗು, ಹಾಸನ, ಮಂಡ್ಯ, ಜಿಲ್ಲೆಗಳಲ್ಲಿರುವ ಪರಿವಾರ/ತಳವಾರ ಜನಾಂಗದವರನ್ನು ಪರಿಶಿಷ್ಟ ಪಂಗಡ (ಎಸ್‌ಟಿ)ಕ್ಕೆ ಸೇರಿಸಲು ತೀರ್ಮಾನ ಮಾಡಲಾಗಿದೆ. ಕೂಡಲೇ ಈ ಬಗ್ಗೆ ಸಭೆ ಕರೆದು ಕ್ರಮ ವಹಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.
ಹರಿಹರದ ರಾಜನಹಳ್ಳಿಯ ಶ್ರೀ ಮಹರ್ಷಿ ವಾಲ್ಮೀಕಿ ಗುರಪೀಠದ ವತಿಯಿಂದ ಯೋಜಿಸಿದ್ದ ಮಹರ್ಷಿ ವಾಲ್ಮೀಕಿ ಜಾತ್ರೆ- 2024 ಹಾಗೂ ಜನಜಾಗೃತಿ ಜಾಥಾ ಉದ್ಘಾಟಿಸಿ ಮಾತನಾಡಿದ ಸಿಎಂ, ಕೇಂದ್ರ ಸರ್ಕಾರ ಈಗಾಗಲೇ ಈ ಸಮುದಾಯವನ್ನು ಎಸ್‌ಟಿಗೆ ಸೇರ್ಪಡೆ ಮಾಡಿದೆ. ಇಲ್ಲಿ ಇನ್ನೂ ಪ್ರವರ್ಗದಲ್ಲಿರುವ ಸಮುದಾಯದ ಜನರ ಮೇಲಿರುವ ಎಲ್ಲಾ ಪ್ರಕರಣಗಳನ್ನು ವಾಪಸ್ಸು ಪಡೆಯಲೂ ಸೂಚನೆ ನೀಡಲಾಗಿದೆ ಎಂದರು.
*ಬುದ್ಧಿವಂತಿಕೆ ಯಾರ ಸ್ವತ್ತಲ್ಲ*
ಅಕ್ಷರ ಸಂಸ್ಕೃತಿಯಿಂದ ವಂಚಿತರಾದಾಗ ಸಾಮಾಜಿಕ, ಆರ್ಥಿಕ ಅಸಮಾನತೆ ನಿರ್ಮಾಣವಾಗುತ್ತದೆ. ವಿದ್ಯೆ, ಬುದ್ಧಿವಂತಿಕೆ ಯಾರ ಸ್ವತ್ತಲ್ಲ. ಬುದ್ಧಿ, ಜ್ಞಾನ ಪಡೆದಾಗ ಸ್ವಾಭಿಮಾನಿಗಳಾಗಿ ಬದುಕಲು ಸಾಧ್ಯ. ಎಲ್ಲರಿಗೂ ಸಮಾನ ಎಂಬ ಭಾವ ಬರಲು ಸ್ವಾಭಿಮಾನ ಅಗತ್ಯ ಎಂದು ಸಿಎಂ ಹೇಳಿದರು.
*ಸಮ ಸಮಾಜ ನಿರ್ಮಾಣವಾದಾಗಲೇ ರಾಮ ರಾಜ್ಯದ ಸ್ಥಾಪನೆ*
ಬೇಡ ಜನಾಂಗದಲ್ಲಿ ಜನಿಸಿದ ವಾಲ್ಮೀಕಿಯವರು ರಾಮಾಯಣವನ್ನು ರಚಿಸಿ ಮಹರ್ಷಿಯಾದರು. ರಾಮಾಯಣ ಮಹಾನ್ ಗ್ರಂಥ. ಮಹಾನ್ ಗ್ರಂಥಗಳನ್ನು ಮೇಲ್ಜಾತಿಯವರು ಮಾತ್ರ ರಚಿಸಲು ಸಾಧ್ಯವೆಂಬ ಪ್ರತೀತಿಯಿತ್ತು. ಆದರೆ, ಕಾವ್ಯ ಸಾಹಿತ್ಯವನ್ನು ಶೂದ್ರರು ರಚಿಸಬಹುದೆಂಬುದನ್ನು ಮಹರ್ಷಿ ವಾಲ್ಮೀಕಿ ನಿರೂಪಿಸಿದರು. ಶ್ರೀರಾಮಚಂದ್ರನ ಕಾಲದಲ್ಲಿಯೇ ಸಮಾನ ಸಮಾಜದ ಹಾಗೂ ಪ್ರಜಾಪ್ರಭುತ್ವದ ಪರಿಕಲ್ಪನೆಯಿತ್ತು. ಪ್ರಜೆಗಳೇ ಆಡಳಿತ ನಡೆಸುವ ಪ್ರಜಾಪ್ರಭುತ್ವದ ಮೂಲವನ್ನು ರಾಮಾಯಣದಲ್ಲಿ ಕಾಣಬಹುದು. ಬಸವಾದಿ ಶರಣರು ತಿಳಿಸಿದಂತೆ ವರ್ಗರಹಿತ, ಜಾತಿರಹಿತ, ಸಮಾನ ಅವಕಾಶ ನೀಡುವ ಸಮಾಜ ನಿರ್ಮಾಣವಾದಾಗ ಅದನ್ನು ರಾಮ ರಾಜ್ಯ ಎಂದು ಹೇಳಬಹುದು ಎಂದರು.
*ಸಹಿಷ್ಣುತೆ ಹಾಗೂ ಸಹಬಾಳ್ವೆ*
ಇಂದು ಜಾತಿ ಜಾತಿಗಳನ್ನು ಒಡೆಯುವ ಕೆಲಸವನ್ನು ಪಟ್ಟಭದ್ರ ಹಿತಾಸಕ್ತಿಗಳು ಮಾಡುತ್ತಿವೆ. ಸಮ ಸಮಾಜದ ಆಶಯವನ್ನೇ ಸಂವಿಧಾನ ಪ್ರತಿಪಾದಿಸುತ್ತದೆ. ಸಂವಿಧಾನದ ಆಶಯಗಳನ್ನು ಜಾರಿಗೆ ತರುವುದೇ ಸರ್ಕಾರದ ಗುರಿಯಾಗಿದೆ. ಸಹಿಷ್ಣುತೆ ಹಾಗೂ ಸಹಬಾಳ್ವೆಯನ್ನು ಮಾಡಬೇಕೆಂದು ಸಂವಿಧಾನ ಹೇಳುತ್ತದೆ. ಎಸ್‌ಸಿ, ಎಸ್‌ಟಿ, ಹಿಂದುಳಿದ ವರ್ಗ, ಅಲ್ಪಸಂಖ್ಯಾತರಿಗೆ ಸರಿಯಾದ ಅವಕಾಶ ದೊರೆತಲ್ಲಿ ಉತ್ತಮವಾಗಿ ಜೀವನ ರೂಪಿಸಿಕೊಳ್ಳುತ್ತಿದ್ದರು. ಇವರಿಗೆ ಸಮಾನ ಅವಕಾಶಗಳು ದೊರೆತಾಗ ಮಾತ್ರ ಸಮಸಮಾಜ ನಿರ್ಮಾಣ ಸಾಧ್ಯ ಎಂದು ಸಿಎಂ ಪ್ರತಿಪಾದಿಸಿದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಉದಯರಶ್ಮಿ ಇಂದಿನ ದಿನಪತ್ರಿಕೆ ಜೂನ್ 26, 2026

ಅಥಣಿ: ಮತ್ತಷ್ಟು 4 ಎಐ ಕ್ಯಾಮೆರಾಗಳ ಕಾರ್ಯಾರಂಭ

ವಿದ್ಯಾರ್ಥಿಗಳು ಯಾವುದೇ ವ್ಯಸನಗಳಿಗೆ ಒಳಗಾಗಬಾರದು

ಜು.೨೭ರಂದು ಬಿ.ಎಲ್.ಡಿ.ಇ–ರಘುಕುಲ ಸಮನ್ವಯ ಶಾಲೆ ಉದ್ಘಾಟನೆ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಉದಯರಶ್ಮಿ ಇಂದಿನ ದಿನಪತ್ರಿಕೆ ಜೂನ್ 26, 2026
    In ದಿನಪತ್ರಿಕೆ
  • ಅಥಣಿ: ಮತ್ತಷ್ಟು 4 ಎಐ ಕ್ಯಾಮೆರಾಗಳ ಕಾರ್ಯಾರಂಭ
    In (ರಾಜ್ಯ ) ಜಿಲ್ಲೆ
  • ವಿದ್ಯಾರ್ಥಿಗಳು ಯಾವುದೇ ವ್ಯಸನಗಳಿಗೆ ಒಳಗಾಗಬಾರದು
    In (ರಾಜ್ಯ ) ಜಿಲ್ಲೆ
  • ಜು.೨೭ರಂದು ಬಿ.ಎಲ್.ಡಿ.ಇ–ರಘುಕುಲ ಸಮನ್ವಯ ಶಾಲೆ ಉದ್ಘಾಟನೆ
    In (ರಾಜ್ಯ ) ಜಿಲ್ಲೆ
  • ಸಚಿವ ಎಂ ಬಿ ಪಾಟೀಲ ಜಿಲ್ಲಾ ಪ್ರವಾಸ ಇಂದು
    In (ರಾಜ್ಯ ) ಜಿಲ್ಲೆ
  • ನೀಟ್ ಪರೀಕ್ಷೆಯಲ್ಲಿ ಮಹಮ್ಮದ್ ಯಾಸೀನ್ 3226ನೇ ರ‍್ಯಾಂಕ್
    In (ರಾಜ್ಯ ) ಜಿಲ್ಲೆ
  • ಮತದಾರರ ಪಟ್ಟಿ ಪರಿಷ್ಕರಣೆ: 15.24 ಲಕ್ಷ ಗಣತಿ ಫಾರಂ ಡಿಜಿಟಲೀಕರಣ
    In (ರಾಜ್ಯ ) ಜಿಲ್ಲೆ
  • ಇಂಡಿಯಲ್ಲಿ ಸಂಚಲನ: ಎರಡೂವರೆ ತಿಂಗಳ ಬಳಿಕ ಕೊಲೆ ಆರೋಪದ ತಿರುವು
    In (ರಾಜ್ಯ ) ಜಿಲ್ಲೆ
  • ಸಿಂದಗಿಯಲ್ಲಿ ಜು.೨೭ ರಂದು ಪತ್ರಿಕಾ ದಿನಾಚರಣೆ
    In (ರಾಜ್ಯ ) ಜಿಲ್ಲೆ
  • ಶ್ರೀ ಖಾಸ್ಗತರ ಗದ್ದುಗೆ ದರ್ಶನ ಪಡೆದ ಶಾಸಕ ರಾಜುಗೌಡ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.