ವಿಜಯಪುರ: ನಾವು ಮಾಡುವ ಕೆಲಸವನ್ನು ನಿಷ್ಠೆಯಿಂದ, ಪ್ರೀತಿಯಿಂದ, ಪ್ರಾಮಾಣಿಕವಾಗಿ ಮಾಡಿದಾಗ ನಮಗೆ ಅದರಲ್ಲಿ ತೃಪಿ ಸಿಗುತ್ತದೆ ಎಂಬ ಸಂದೇಶ ಸಾರಿದ ಕಾಯಕ ಶರಣರ ಆದರ್ಶ ಜೀವನ ಸಂದೇಶ ನಮಗೆ ಪ್ರೇರೆಣೆಯಾಗಬೇಕು ಎಂದು ಅಪರ ಜಿಲ್ಲಾಧಿಕಾರಿ ಮಹದೇವ ಮುರಗಿ ಹೇಳಿದರು.
ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯಿಂದ ನಗರದ ಕಂದಗಲ್ ಶ್ರೀ ಹನುಮಂತರಾಯ ರಂಗಮಂದಿರದಲ್ಲಿ ಹಮ್ಮಿಕೊಂಡ ಕಾಯಕ ಶರಣರಾದ ಮಾದರ ಚೆನ್ನಯ್ಯ, ಮಾದರ ಧೂಳಯ್ಯ, ಸಮಗಾರ ಹರಳಯ್ಯ, ಡೋಹರ ಕಕ್ಕಯ್ಯ, ಉರಿಲಿಂಗ ಪೆದ್ದಿ ಕಾಯಕ ಶರಣರ ಜಯಂತಿ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
ಕಾಯಕದಲ್ಲಿ ಯಾವುದೇ ಮೇಲು-ಕೀಳು ಎಂಬುದು ಇಲ್ಲ. ನಾವು ಮಾಡುವ ಕೆಲಸದಿಂದ ಸಮಾಜಕ್ಕೆ ಒಳಿತಾಗಬೇಕು. ೧೨ನೇ ಶತಮಾನದ ಎಲ್ಲಾ ಶರಣರು ತಮ್ಮ ಕಾಯಕ ತತ್ವದಿಂದ ಸಮಾಜವನ್ನು ಸರಿದಾರಿಗೆ ತರುವ ಪ್ರಯತ್ನ ಮಾಡಿದ್ದಾರೆ ಎಂದರು.
ವಿಜಯಪುರದ ಬಿ.ವಿ ದರಬಾರ ಪದವಿ ಪೂರ್ವ ಮಹಾವಿದ್ಯಾಲಯದ ಉಪನ್ಯಾಸಕರಾದ ಕಾಶಿನಾಥ ಕೋಣೆನವರ ಮಾದರ ಧೂಳಯ್ಯ ಹಾಗೂ ಸಮಗಾರ ಹರಳಯ್ಯ ಅವರ ಜೀವನ ಚರಿತ್ರೆ ಬಗ್ಗೆ ತಿಳಿಸಿಕೊಟ್ಟರು.
ತಾಳಿಕೋಟೆಯ ಎಸ್.ಕೆ. ಕಾಲೇಜಿನ ಸಹಾಯಕ ಪ್ರಾಧ್ಯಾಪಕರಾದ ಶ್ರೀಮತಿ ಸುಜಾತಾ ಚಲವಾದಿ ಅವರು ಮಾದರ ಚೆನ್ನಯ್ಯ , ಡೋಹರ ಕಕ್ಕಯ್ಯ, ಉರಿಲಿಂಗ ಪೆದ್ದಿ ಅವರ ಜೀವನ ಚರಿತ್ರೆಯ ಬಗ್ಗೆ ವಿಶೇಷ ಉಪನ್ಯಾಸ ನೀಡಿದರು.
ವೇದಿಕೆಯ ಮೇಲೆ ಜಿಲ್ಲಾ ಪಂಚಾಯತ್ ಮುಖ್ಯ ಲೆಕ್ಕಾಧಿಕಾರಿಗಳಾದ ರಾಮಣ್ಣ ಅಥಣಿ, ಅಶೋಕ್ ಸೌದಾಗರ, ಭೀಮರಾಯ ಜಿಗಜಿಣಗಿ, ದಿಲೀಪ್ ಪೋಳ ಉಪಸ್ಥಿತರಿದ್ದರು.
ಶ್ರೀಮತಿ ಶ್ರೀದೇವಿ ಪತ್ತಾರ ಹಾಗು ಸಂಗಡಿಗರು ವಚನ ಗಾಯನ ನಡೆಸಿಕೊಟ್ಟರು. ಸಂಗೀತ ಮಠಪತಿ ನಿರೂಪಿಸಿದರು.
Subscribe to Updates
Get the latest creative news from FooBar about art, design and business.
Related Posts
Add A Comment