ಬಸವನಬಾಗೇವಾಡಿ: ವಿದ್ಯಾರ್ಥಿಗಳಲ್ಲಿನ ಪ್ರತಿಭೆ ಗುರುತಿಸಿ ಸೂಕ್ತ ಮಾರ್ಗದರ್ಶನ ಮಾಡಿದರೆ ಅವರು ಸಾಧಕರಾಗುತ್ತಾರೆ. ವಿದ್ಯಾರ್ಥಿಗಳು ನಿರಂತರ ಅಧ್ಯಯನದಿಂದ ಇಟ್ಟುಕೊಂಡಿರುವ ಗುರಿ ತಲುಪಬೇಕು ಎಂದು ನಿವೃತ್ತ ಶಿಕ್ಷಕ ಮಹಾಂತೇಶ ಆದಿಗೊಂಡ ಹೇಳಿದರು.
ಪಟ್ಟಣದ ಬಸವೇಶ್ವರ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಶನಿವಾರ ಹಮ್ಮಿಕೊಂಡಿದ್ದ ವಾರ್ಷಿಕೋತ್ಸವ ಹಾಗೂ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳ ಬೀಳ್ಕೊಡುಗೆ ಸಮಾರಂಭದಲ್ಲಿ ಮಾತನಾಡಿದ ಅವರು, ವಿದ್ಯಾರ್ಥಿಗಳು ಪಠ್ಯದೊಂದಿಗೆ ಪಠ್ಯೇತರ ಚಟುವಟಿಕೆಗಳಲ್ಲಿ ಉತ್ಸಾಹದಿಂದ ಭಾಗವಹಿಸಬೇಕು. ಪಿಯುಸಿ ಹಂತ ಸಾಹಸದ ಹಂತವಾಗಿದೆ. ಪರೀಕ್ಷೆಗೆ ಭಯಪಡದೇ ಸಂತೋಷದಿಂದ ಬರೆಯುವಂತಾಗಬೇಕು. ಗುರಿ ಇಲ್ಲದಿದ್ದರೆ ಪ್ರಯತ್ನ ವ್ಯರ್ಥ ಎಂಬುದನ್ನು ಅರಿತುಕೊಳ್ಳಬೇಕು. ಜೀವನದಲ್ಲಿ ಪರಿವರ್ತನೆಯಾಗುವಂತಹ ಶಿಕ್ಷಣ ಪಡೆದುಕೊಳ್ಳಬೇಕು. ಮಾನವೀಯ ಮೌಲ್ಯ ಅಳವಡಿಸಿಕೊಳ್ಳಬೇಕು. ಪ್ರಾಮಾಣಿಕತೆ ಗೆಲುವಿಗೆ ದಾರಿಯಾಗಲಿದೆ ಎಂದು ಹೇಳಿದರು.
ಅಧ್ಯಕ್ಷತೆ ವಹಿಸಿದ್ದ ಪ್ರಾಚಾರ್ಯ ಎಸ್.ಡಿ.ಪಾಟೀಲ ಮಾತನಾಡಿದರು.
ಕಾಲೇಜು ಅಭಿವೃದ್ಧಿ ಸಮಿತಿ ಉಪಾಧ್ಯಕ್ಷ ಶೇಖರ ಗೊಳಸಂಗಿ ಕಾರ್ಯಕ್ರಮ ಉದ್ಘಾಟಿಸಿದರು. ಉಪನ್ಯಾಸಕರಾದ ಜಿ.ಎಸ್.ಡೊಮನಾಳ, ಎಸ್.ವಿ.ಅಗಸರ, ವಿದ್ಯಾರ್ಥಿಗಳಾದ ಭೀಮರಾವ ದಿವಟಗಿ, ಸವಿತಾ ಪೂಜಾರಿ, ಗಂಗುಬಾಯಿ ಜಾಧವ, ಶಿವಲಿಂಗ ಗುಂದಗಿ, ನಿಂಗರಾಯ ಗುಗದಡ್ಡಿ ಮಾತನಾಡಿದರು.
ಗ್ರಂಥಪಾಲಕಿ ಮಹಾನಂದಾ ನಾಯಕ ವರದಿ ವಾಚನ ಮಾಡಿದರು. ಪ್ರಕಾಶ ಮಸಬಿನಾಳ ಸ್ವಾಗತಿಸಿದರು. ಚೇತನ ಬಾಗೇವಾಡಿ, ರಾಜಕುಮಾರ ಮುರಗೋಡ ನಿರೂಪಿಸಿದರು. ಮಲ್ಲಿಕಾರ್ಜುನ ಹೂಗಾರ ವಂದಿಸಿದರು.
ಕಾರ್ಯಕ್ರಮದಲ್ಲಿ ವಿವಿಧ ಸ್ಪರ್ಧೆಯಲ್ಲಿ ವಿಜೇತ ವಿದ್ಯಾರ್ಥಿಗಳಿಗೆ ಪರೀಕ್ಷೆಯಲ್ಲಿ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳಿಗೆ ಬಹುಮಾನ ವಿತರಿಸಲಾಯಿತು.
Subscribe to Updates
Get the latest creative news from FooBar about art, design and business.
Related Posts
Add A Comment