ವಿಜಯಪುರ: ಕರ್ನಾಟಕ ರಾಜ್ಯ ಅಕ್ಕ ಮಹಾದೇವಿ ವಿಶ್ವ ವಿದ್ಯಾನಿಲಯ ವಿಜಯಪುರ ಅಧೀನದಲ್ಲಿ ಬರುವ ಕಾಲೇಜುಗಳ 17ನೇ ಅಂತರ್ ವಿಶ್ವವಿದ್ಯಾಲಯಗಳ ಅಥ್ಲೆಟಿಕ್ಸ್ ಕ್ರೀಡಾಕೂಟದಲ್ಲಿ ವಿಜಯಪುರ ಸರಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜಿನ ಬಿ.ಎ 3ನೇ ಸೆಮಿಸ್ಟರ್ ನ ವಿದ್ಯಾರ್ಥಿನಿ ಪೂಜಾ ಠಾಕೂರ ಜಾವಲಿನ್ ಥ್ರೋ( ಬರ್ಚಿ ಎಸೆತ )ದಲ್ಲಿ 27.33 ಮೀಟರ್ ಎಸೆದು ಬಂಗಾರದ ಪದಕ ಪಡೆದಿರುತ್ತಾಳೆ. ಕಾಲೇಜಿನ ಇನ್ನೋರ್ವ ಬಿ ಎ 3ನೇ ಸೆಮಿಸ್ಟರ್ ವಿದ್ಯಾರ್ಥಿನಿ ದೀಪ ಚವ್ಹಾಣ್ 20 ಕಿ. ಮೀ. ನಡುಗೆ ಸ್ಪರ್ಧೆಯಲ್ಲಿ ಕಂಚಿನ ಪದಕದೊಂದಿಗೆ ಮೂರನೇ ಸ್ಥಾನ ಪಡೆದಿರುತ್ತಾಳೆ ಹಾಗೂ ಕಾಲೇಜಿನ ಮತ್ತೋರ್ವ ವಿದ್ಯಾರ್ಥಿನಿ ಲಕ್ಷ್ಮಿ ಕ್ಷತ್ತ್ರಿ1500 ಮೀಟರ್ ಓಟದ ಸ್ಪರ್ಧೆಯಲ್ಲಿ ನಾಲ್ಕನೇ ಸ್ಥಾನ ಪಡೆದಿರುತ್ತಾಳೆ.
ಈ ಕ್ರೀಡೆಗಳಲ್ಲಿ ಸಾಧನೆ ಮಾಡಿ ಕಾಲೇಜಿನ ಕೀರ್ತಿಯನ್ನು ಹೆಚ್ಚಿಸಿದ್ದಕ್ಕಾಗಿ ಈ ಮೂವರು ವಿದ್ಯಾರ್ಥಿನಿಯರನ್ನು ಕಾಲೇಜಿನ ಪ್ರಾಂಶುಪಾಲರಾದ ಡಾ. ಆರ್ ಎಸ್ ಕಲ್ಲೂರಮಠ, ದೈಹಿಕ ಶಿಕ್ಷಣ ನಿರ್ದೇಶಕರಾದ ಡಾ. ರಾಜಶೇಖರ ಬೆನಕನಹಳ್ಳಿ, ಐ. ಕ್ಯೂ.ಎ.ಸಿ ಸಂಯೋಜಕರಾದ ಡಾ. ಚಿದಾನಂದ ಎಸ್. ಆನೂರ ಹಾಗೂ ಕಾಲೇಜಿನ ಬೋಧಕ -ಬೋಧಕೇತರ ಸಿಬ್ಬಂದಿ ಮತ್ತು ಕಾಲೇಜು ಅಭಿವೃದ್ಧಿ ಸಮಿತಿ ಸದಸ್ಯರು ಅಭಿನಂದಿಸಿ ಹರ್ಷ ವ್ಯಕ್ತಪಡಿಸಿದ್ದಾರೆ.
Subscribe to Updates
Get the latest creative news from FooBar about art, design and business.
Related Posts
Add A Comment