ದೇವರಹಿಪ್ಪರಗಿ: ಪಟ್ಟಣ ಸೇರಿದಂತೆ ಗ್ರಾಮಮಟ್ಟದಲ್ಲಿ ಸಂವಿಧಾನ ಜಾಗೃತಿ ಜಾಥಾಗೆ ಅದ್ದೂರಿ ಸ್ವಾಗತದೊಂದಿಗೆ ಬೀಳ್ಕೊಡುವ ಸಂದರ್ಭದವರೆಗೆ ಎಲ್ಲ ಇಲಾಖೆಗಳ ಸಿಬ್ಬಂದಿ ತಮ್ಮ ಜವಾಬ್ದಾರಿ ಅರಿತು ಕಾರ್ಯನಿರ್ವಹಿಸಬೇಕು ಎಂದು ತಹಶೀಲ್ದಾರ ಪ್ರಕಾಶ ಸಿಂದಗಿ ಹೇಳಿದರು.
ಪಟ್ಟಣದ ಪ್ರವಾಸಿ ಮಂದಿರದಲ್ಲಿ ಸೋಮವಾರ ಜರುಗಿದ ಪೂರ್ವಭಾವಿ ಸಭೆಯಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿ, ತಾಲ್ಲೂಕಿನಲ್ಲಿ ಸಂವಿಧಾನ ಜಾಗೃತಿ ಜಾಥಾ ಫೆ:೧೫ರಿಂದ ೧೮ ವರೆಗೆ ತಾಲ್ಲೂಕಿನ ವಿವಿಧ ಗ್ರಾಮಗಳಲ್ಲಿ ಸಂಚರಿಸುತ್ತದೆ. ಈ ಸಂದರ್ಭದಲ್ಲಿ ಜಾಥಾಗೆ ಗೌರವಯುತವಾಗಿ ಸ್ವಾಗತಿಸಿ, ಬಿಳ್ಕೋಡುವ ಹಂತದವರೆಗೆ ವಿವಿಧ ಇಲಾಖೆಗಳ ಎಲ್ಲ ಅಧಿಕಾರಿಗಳು, ಸಿಬ್ಬಂದಿವರ್ಗ ಹಾಗೂ ಸಂಘ ಸಂಸ್ಥೆಗಳು ನಿರ್ವಹಿಸಬೇಕಾದ ಕಾರ್ಯಗಳ ಬಗ್ಗೆ ವಿವರಿಸಿದರು.
ನೋಡಲ್ ಅಧಿಕಾರಿ ಚಂದ್ರಕಾಂತ ಪವಾರ ಹಾಗೂ ಸಿಂದಗಿ ಕ್ಷೇತ್ರಶಿಕ್ಷಣಾಧಿಕಾರಿ ಆರೀಫ್ ಬಿರಾದಾರ ಮಾತನಾಡಿದರು.
ಸಾರ್ವಜನಿಕರು ಹಾಗೂ ಸಂಘ ಸಂಸ್ಥೆಗಳ ಪರವಾಗಿ ದಲಿತಪರ ಸಂಘಟನೆಯ ಬೆಳಗಾವಿ ವಿಭಾಗೀಯ ಸಂಚಾಲಕ ರಾವುತ ತಳಕೇರಿ ಹಾಗೂ ಸಿದ್ದು ಮೇಲಿನಮನಿ ಮಾತನಾಡಿದರು.
ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ ಎಲ್.ಡಿ.ಮುಲ್ಲಾ, ತಾಲ್ಲೂಕು ಪಂಚಾಯಿತಿ ಇಓ ಭಾರತಿ ಚೆಲುವಯ್ಯ, ಶಿರಸ್ತೇದಾರ ಸುರೇಶ ಮ್ಯಾಗೇರಿ, ಪಟ್ಟಣ ಪಂಚಾಯಿತಿ ಸದಸ್ಯರಾದ ಕಾಶೀನಾಥ ಜಮಾದಾರ, ಸುಮಂಗಲಾ ಸೇಬೆನವರ, ಹುಸೇನ್ ಕೊಕಟನೂರ, ಸುನೀಲ ಕನಮಡಿ, ತಾಲ್ಲೂಕು ಶಿಕ್ಷಕರ ಸಂಘದ ಅಧ್ಯಕ್ಷ ಎ.ಎಚ್.ವಾಲಿಕಾರ, ಸಿಆರ್‌ಪಿ ವಿಜಯಲಕ್ಷ್ಮಿ ನವಲಿ, ವಿಠ್ಠಲ ಯಂಕಂಚಿ, ಕಾಶೀನಾಥ ತಳಕೇರಿ, ಪ್ರಕಾಶ ಮಲ್ಲಾರಿ, ಬಸವರಾಜ ತಳಕೇರಿ, ಆರ್.ಎಚ್.ಜಮಾದಾರ, ಬಿ.ಎಲ್.ಜುಮನಾಳ ಸೇರಿದಂತೆ ವಿವಿಧ ಇಲಾಖೆಗಳ ಸಿಬ್ಬಂದಿ ಹಾಗೂ ಸಂಘ ಸಂಸ್ಥೆಗಳ ಪದಾಧಿಕಾರಿಗಳು ಇದ್ದರು.
Subscribe to Updates
Get the latest creative news from FooBar about art, design and business.
Related Posts
Add A Comment