ಪರೀಕ್ಷಾ ಕೇಂದ್ರಗಳ ಸುತ್ತಲೂ ನಿಷೇಧಾಜ್ಞೆ ಜಾರಿಗೊಳಿಸಿ ಆದೇಶ
ವಿಜಯಪುರ: ವಿಜಯಪುರ ನಗರದ ಸರ್ಕಾರಿ ಉರ್ದು ಟಿಟಿಐ, ಸರ್ಕಾರಿ ಬಾಲಕರ ಪ.ಪೂ. ಕಾಲೇಜ್(ಪ್ರೌಢಶಾಲಾ ವಿಭಾಗ) ಹಾಗೂ ಟೇಕಡೆ ಗಲ್ಲಿಯಲ್ಲಿರುವ ಸರ್ಕಾರಿ ಹಿರಿಯ ಉರ್ದು ಹೆಣ್ಣು ಮಕ್ಕಳ ಶಾಲೆಯಲ್ಲಿ ಮತ್ತು ಸಿಂದಗಿಯ ಅಂಜುಮನ್ ಪದವಿಪೂರ್ವ ಕಾಲೇಜ್‌ನಲ್ಲಿ ಫೆ.೧೨ ರಿಂದ ೧೭ರವರೆಗೆ ಅರೇಬಿಕ್ ಪರೀಕ್ಷೆಗಳು ಜರುಗಲಿದ್ದು, ಮುಂಜಾಗ್ರತಾ ಕ್ರಮವಾಗಿ ಪರೀಕ್ಷಾ ಕೇಂದ್ರಗಳ ಸುತ್ತಲಿನ ೨೦೦ ಮೀಟರ್ ಪ್ರದೇಶದಲ್ಲಿ ಕಲಂ ೧೪೪ರನ್ವಯ ನಿಷೇಧಾಜ್ಞೆ ಜಾರಿಗೊಳಿಸಿ ಜಿಲ್ಲಾ ದಂಡಾಧಿಕಾರಿಗಳಾದ ಜಿಲ್ಲಾಧಿಕಾರಿ ಟಿ.ಭೂಬಾಲನ್ ಅವರು ಆದೇಶ ಹೊರಡಿಸಿದ್ದಾರೆ.
ಪರೀಕ್ಷಾ ಕಾರ್ಯದಲ್ಲಿ ತೊಡಗಿರುವ ಯಾವುದೇ ಅಧಿಕಾರಿ ಹಾಗೂ ಸಿಬ್ಬಂದಿಗಳು ಮತ್ತು ಇತರರು ಮೊಬೈಲ್ ಫೋನ್‌ಗಳನ್ನು ತರುವುದುನ್ನು ಹಾಗೂ ಬಳಸುವುದನ್ನು ನಿಷೇಧಿಸಿದೆ. ಪರೀಕ್ಷಾ ಕೇಂದ್ರಗಳ ಸುತ್ತಲಿನ ೨೦೦ ಮೀಟರ್ ಪ್ರದೇಶದಲ್ಲಿ ಬೆಳಿಗ್ಗೆ ೯ ರಿಂದ ಪರೀಕ್ಷೆ ಮುಕ್ತಾಯವಾಗುವರೆಗೆ ನಿಷೇಧಿತ ಪ್ರದೇಶವೆಂದು ಘೊಷಿಸಿ, ಸದರಿ ಪರೀಕ್ಷಾ ಕೇಂದ್ರಗಳ ವ್ಯಾಪ್ತಿಯಲ್ಲಿನ ಝರಾಕ್ಸ ಅಂಗಡಿಗಳು, ಕಂಪ್ಯೂಟರ್ ಸೆಂಟರ್‌ಗಳು, ಸೈಬರ್ ಕೆಫೆಗಳು, ಕೋಚಿಂಗ್ ಕೇಂದ್ರಗಳು ತೆರೆಯದಂತೆ ಆದೇಶಿಸಲಾಗಿದೆ.