ಬಸವನಬಾಗೇವಾಡಿ: ವಿಶ್ವಗುರು ಮಹಾತ್ಮ ಬಸವಣ್ಣವರನ್ನು ಕರ್ನಾಟಕದ ಸಾಂಸ್ಕೃತಿಕ ನಾಯಕರೆಂದು ಘೋಷಣೆ ಮಾಡಿ ಇಂದು ಅಧಿಕೃತ ಭಾವಚಿತ್ರವನ್ನು ಅನಾವರಣಗೊಳಿಸಿದ ರಾಜ್ಯ ಸರ್ಕಾರಕ್ಕೆ ರಾಷ್ಟ್ರೀಯ ಬಸವಸೈನ್ಯದ ಸಂಸ್ಥಾಪಕ ಅಧ್ಯಕ್ಷರಾದ ಶಂಕರಗೌಡ ಬಿರಾದಾರ ಅಭಿನಂದನೆ ಸಲ್ಲಿಸಿದ್ದಾರೆ.
ರಾಜ್ಯ ಸರಕಾರವು ಕರ್ನಾಟಕದ ಸಾಂಸ್ಕೃತಿಕ ನಾಯಕನೆಂದು ಘೋಷಣೆ ಮಾಡಿ ಅಧಿಕೃತವಾಗಿ ಇಂದು ಅವರ ಭಾವಚಿತ್ರವನ್ನು ಅನಾವರಣಗೊಳಿಸಿ ರಾಜ್ಯದಲ್ಲಿರುವ ಎಲ್ಲ ಸರ್ಕಾರಿ ಕಚೇರಿಗಳಲ್ಲಿ ಸಾಂಸ್ಕೃತಿಕ ನಾಯಕ ಎಂದು ಬರೆದು ವಿಶ್ವಗುರು ಬಸವಣ್ಣನವರ ಭಾವಚಿತ್ರವನ್ನು ಕಡ್ಡಾಯವಾಗಿ ಅಳವಡಿಸಬೇಕೆಂದು ಆದೇಶ ಮಾಡಿರುವುದು ಇಡೀ ಬಸವನಾಡಿನ ಜನತೆಗೆ ಬಹಳ ಸಂತೋಷ ಉಂಟು ಮಾಡಿದೆ ರಾಜ್ಯ,ಜಿಲ್ಲೆ,ಹಾಗೂ ತಾಲೂಕ ಮಟ್ಟಗಳಲ್ಲಿ ನಡೆಯುವ ಎಲ್ಲಾ ಕಾರ್ಯಕ್ರಮಗಳಲ್ಲಿ ಬಸವಣ್ಣನವರ ಚಿಂತನೆಗಳು ಹಾಗೂ ಸರಕಾರದ ಉದ್ದೇಶಗಳ ಕುರಿತು ಅರಿವು ಮೂಡಿಸುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಇಂದು ನಿರ್ದೇಶನ ಮಾಡಿರುವುದು ಕನ್ನಡ ನಾಡಿನ ಹಲವಾರು ಮಠಾಧೀಶರ ಬಸವಾಭಿಮಾನಿಗಳ ಹೋರಾಟದ ಫಲವಾಗಿದೆ ಎಂದು ಹೇಳಿದರು ಈ ಸಂದರ್ಭದಲ್ಲಿ ರಾಜ್ಯ ಸರ್ಕಾರವು ಇದೇ ತಿಂಗಳು 16 ರಂದು ಸರ್ಕಾರದ ಬಜೆಟ್ ನಲ್ಲಿ ಬಸವಣ್ಣನವರ ಜನ್ಮಸ್ಥಳ ಬಸವನ ಬಾಗೇವಾಡಿಯ ಅಭಿವೃದ್ಧಿಗೆ ಪ್ರತ್ಯೇಕ ಅಭಿವೃದ್ಧಿ ಮಂಡಳಿಯನ್ನು ರಚನೆ ಮಾಡಿ ಸೂಕ್ತ ಅನುದಾನವನ್ನು ಬಿಡುಗಡೆ ಮಾಡುವುದರ ಮೂಲಕ ಬಸವಜನ್ಮಸ್ಥಳವನ್ನು ರಾಮ ಜನ್ಮ ಭೂಮಿ ಅಯೋದ್ಯೆ ಮಾದರಿಯಲ್ಲಿ ಅಭಿರುದ್ಧಿ ಪಡಿಸಬೇಕು ಅಂತರಾಷ್ಟ್ರೀಯ ಪ್ರವಾಸಿ ತಾಣವನ್ನಾಗಿ ಮಾಡಬೇಕೆಂದು ಸರ್ಕಾರಕ್ಕೆ ಆಗ್ರಹಿಸಿದರು. ಮುಂದಿನ ತಿಂಗಳು ಬಸವ ಜನ್ಮಸ್ಥಳ ಬಸವನಬಾಗೇವಾಡಿಯಲ್ಲಿ ಬಸವಣ್ಣನವರನ್ನ ಸಾಂಸ್ಕೃತಿಕ ನಾಯಕರೆಂದು ಘೋಷಣೆ ಮಾಡಿದ ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಅನೇಕ ಸಚಿವ ಸಂಪುಟದ ಸಚಿವರನ್ನು ನಾಡಿನ ವಿವಿಧ ಮಠಾಧೀಶರನ್ನು ಆಹ್ವಾನಿಸಿ ರಾಜ್ಯ ಸರ್ಕಾರಕ್ಕೆ ರಾಜ್ಯಮಟ್ಟದ ಅಭಿನಂದನಾ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲು ಈಗಾಗಲೇ ಬಸವನಬಾಗೇವಾಡಿಯ ಶಾಸಕರು ಹಾಗೂ ಜವಳಿ ಮತ್ತು ಕಬ್ಬು ಅಭಿವೃದ್ಧಿ ಸಕ್ಕರೆ ನಿರ್ದೇಶನಾಲಯ ಮತ್ತು ಕೃಷಿ ಮಾರುಕಟ್ಟೆ ಸಚಿವ ಶಿವನಂದ್ ಪಾಟೀಲ್ ಅವರಿಗೆ ಬಸವ ನಾಡಿನ ಜನತೆಯ ಪರವಾಗಿ ಮನವಿ ಮಾಡಿಕೊಂಡಿರುತ್ತೇವೆ ಶೀಘ್ರದಲ್ಲಿಯೇ ಮುಖ್ಯಮಂತ್ರಿಗಳು ಉಪಮುಖ್ಯಮಂತ್ರಿಗಳು ಬಸವನಬಾಗೇವಾಡಿಯಲ್ಲಿ ನಡೆಯಲಿರುವ ಅಭಿನಂದನಾ ಸಮಾರಂಭದಲ್ಲಿ ಭಾಗವಹಿಸಲಿದ್ದಾರೆ ಎಂದು ಪತ್ರಿಕಾ ಪ್ರಕಟನೆಯಲ್ಲಿ ತಿಳಿಸಿದ್ದಾರೆ.
Subscribe to Updates
Get the latest creative news from FooBar about art, design and business.
Related Posts
Add A Comment