ಬಸವನಬಾಗೇವಾಡಿ: ಸಂವಿಧಾನವು ಪ್ರಜಾಪ್ರಭುತ್ವದ ಮೇರು ಗ್ರಂಥವಾಗಿದೆ ಎಂದು ಉಪನ್ಯಾಸಕ ಹಣಮಂತಪ್ಪ ದಿವಿಗನಹಳ್ಳಿ ಹೇಳಿದರು.
ತಾಲೂಕಿನ ವಡವಡಗಿ ಗ್ರಾಮದ ಬೆಂಗಳೂರು ಮಠದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ, ಸಮಾಜ ಕಲ್ಯಾಣ ಇಲಾಖೆ, ತಾಲೂಕು ಪಂಚಾಯತ, ವಡವಡಗಿ ಗ್ರಾಮ ಪಂಚಾಯತ ಸಹಯೋಗದಲ್ಲಿ ಸಂವಿಧಾನ ಜಾಗೃತಿ ಜಾಥಾ ಕಾರ್ಯಕ್ರಮದಂಗವಾಗಿ ಸೋಮವಾರ ಹಮ್ಮಿಕೊಂಡಿದ್ದ ಸಮಾನತೆಗಾಗಿ ಪ್ರಜಾಪ್ರಭುತ್ವ ಕಾರ್ಯಕ್ರಮದಲ್ಲಿ ಭಾರತದ ಸಂವಿಧಾನ ಇಡೀ ಜಗತ್ತಿನಲ್ಲಿಯೇ ಆದರ್ಶಮಯವಾಗಿದೆ. ಎಲ್ಲರಿಗೂ ಮಾರ್ಗದರ್ಶಿಯಾಗಿದೆ. ಸಂವಿಧಾನವು ನೀಡಿದ ಆಶಯಗಳನ್ನು ಎಲ್ಲರೂ ಪಾಲಿಸಿ ಗೌರವಿಸಬೇಕೆಂದರು.
ಡಿಎಸ್ಎಸ್ ಮುಖಂಡ ಪರಶುರಾಮ ದಿಂಡವಾರ ಮಾತನಾಡಿದರು.
ಸಾನಿಧ್ಯ ವಹಿಸಿದ್ದ ಗ್ರಾಮದ ವೀರಸಿದ್ದ ಸ್ವಾಮೀಜಿ ಮಾತನಾಡಿ, 12 ನೇ ಶತಮಾನದಲ್ಲಿ ಬಸವಣ್ಣನವರು ಸಂವಿಧಾನದ ಮಾದರಿಯಲ್ಲಿ ಅನುಭವ ಮಂಟಪ ಸ್ಥಾಪನೆ ಮಾಡುವ ಮೂಲಕ ಸಮಾಜದ ಎಲ್ಲ ಜನಾಗದ ಬಾಂಧವರಿಗೆ ಅವಕಾಶ ನೀಡಿದರು. ಅದರಂತೆ ದೇಶದ ಸಂವಿಧಾನವು ರಚನೆ ಆಗಿದೆ. ಇದನ್ನು ಎಲ್ಲರೂ ಗೌರವಿಸಬೇಕೆಂದರು.
ಸಾನಿಧ್ಯವನ್ನು ಬೃಂಗೀಶ್ವರ ಶಿವಾಚಾರ್ಯರು ವಹಿಸಿದ್ದರು. ಅಧ್ಯಕ್ಷತೆಯನ್ನು ಗ್ರಾಮ ಪಂಚಾಯತ್ ಅಧ್ಯಕ್ಷೆ ಪೂರ್ಣಿಮಾ ಹೆಬ್ಬಾಳ ವಹಿಸಿದ್ದರು.
ಕಾರ್ಯಕ್ರಮದಲ್ಲಿ ಬಿಇಓ ವಸಂತ ರಾಠೋಡ, ಸಮಾಜ ಕಲ್ಯಾಣ ಇಲಾಖೆ ಅಧಿಕಾರಿ ಭವಾನಿ ಪಾಟೀಲ, ಹಿಂದುಳಿದ ವರ್ಗಗಳ ಇಲಾಖೆಯ ಅಧಿಕಾರಿ ಶಾಂತಾ ನಿಂಬಾಳ, ರೇಷ್ಮೆ ಇಲಾಖೆಯ ಅಧಿಕಾರಿ ಎಸ್.ಐ.ಗೋಲಗೊಂಡ, ಮುಖಂಡರಾದ ಮಹಾಂತೇಶ ಸಾಸಾಬಾಳ, ಅಶೋಕ ಚಲವಾದಿ, ಇತರರು ಇದ್ದರು. ರವಿ ನಾಯಕ ಸ್ವಾಗತಿಸಿ, ನಿರೂಪಿಸಿ, ವಂದಿಸಿದರು.
Subscribe to Updates
Get the latest creative news from FooBar about art, design and business.
Related Posts
Add A Comment