ಕಲಕೇರಿ: ವಿದ್ಯೆಯ ಜೊತೆಗೆ ವಿನಯತೆ ವಿದ್ಯಾರ್ಥಿಗಳ ಜೀವನದ ಯಶಸ್ಸಿಗೆ ಮುಖ್ಯ ಕಾರಣವಾಗುತ್ತದೆ, ಅರಿವಿನ ಮೂಲಕ ತಾವು ಸಂಪಾದಿಸಿದ ಜ್ಞಾನವನ್ನು ಸಮಾಜದ ಒಳಿತಿಗೆ ಬಳಕೆ ಮಾಡಬೇಕು ಎಂದು ವಿಜಯಪುರದ ನೂತನ ಚಾಣಕ್ಯ ಕರಿಯರ್ ಅಕಾಡೆಮಿಯ ಸಂಸ್ಥಾಪಕ ಬಿ ಡಿ ಪಾಟೀಲ ಹೇಳಿದರು.
ಕಲಕೇರಿ ಗ್ರಾಮದ ಎಸ್‌ಎಂವಿವಿ ಸಂಘದ ಬಸವೇಶ್ವರ ಸಂಯುಕ್ತ ಪಪೂ ಕಾಲೇಜಿನಲ್ಲಿ ಹಮ್ಮಿಕೊಂಡ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳ ಬೀಳ್ಕೊಡುವ ಸಮಾರಂಭ ಹಾಗೂ ವಾರ್ಷಿಕ ಸ್ನೇಹ ಸಮ್ಮೇಳನ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ಇಂದಿನ ಆಧುನಿಕ ಯುಗದಲ್ಲಿ ವಿದ್ಯಾರ್ಥಿಗಳು ತಮಗೆ ಸಿಗುವ ಅವಕಾಶಗಳನ್ನು ಶ್ರದ್ದೆಯಿಂದ ಬಳಸಿಕೊಂಡು ಜೀವನದಲ್ಲಿ ಏನಾದರು ಸಾಧನೆ ಮಾಡುವ ಛಲವನ್ನು ಮೈಗೂಡಿಸಿಕೊಳ್ಳಬೇಕು, ಜ್ಞಾನ ಸಂಪಾದನೆಗೆ ಶ್ರಮಿಸಿದಷ್ಟೂ ವ್ಯಕ್ತಿತ್ವ ವಿಕಸನಗೊಳ್ಳುವದರ ಜೊತೆಗೆ ಉಜ್ವಲ ಭವಿಷ್ಯ ಹೊಂದಲು ನಾಂದಿಯಾಗುತ್ತದೆ. ಕಠಿಣ ಪರಿಶ್ರಮದಿಂದ ಮಾತ್ರ ಯಶಸ್ಸು ಪಡೆಯಲು ಸಾಧ್ಯ. ಆದ್ದರಿಂದ ವಿದ್ಯಾರ್ಥಿಗಳು ನಿರಂತರ ಪ್ರಯತ್ನವಾದಿಗಳಾಗಿರಬೇಕು ಶಿಕ್ಷಣದ ಜೊತೆಗೆ ಸಂಸ್ಕಾರವನ್ನು ಬೆಳೆಸಿಕೊಳ್ಳಬೇಕು ಎಂದು ಹೇಳಿದರು.
ಕಲಕೇರಿ ಗುರುಮರುಳಾರಾಧ್ಯರ ಹಿರೇಮಠದ ಸಿದ್ದರಾಮ ಶಿವಾಚಾರ್ಯರು ಸಾನಿಧ್ಯ ವಹಿಸಿ ಆಶೀರ್ವಚನ ನೀಡಿದರು, ಪ್ರಾಚಾರ್ಯ ಸಿ ಎಸ್ ಹಿರೇಮಠ ಅಧ್ಯಕ್ಷತೆ ವಹಿಸಿದ್ದರು, ವಿಜಯಪುರ ಜಿಲ್ಲಾ ಅನುದಾನಿತ ಶಿಕ್ಷಣ ಸಂಸ್ಥೆಗಳ ಓಕ್ಕೂಟದ ಪದಾಧಿಕಾರಿ ಮಲ್ಲಿಕಾರ್ಜುನ ಜೋಗುರ, ಕಲಕೇರಿ ಪಿ ಎಸ್ ಐ ರೋಹಿಣಿ ಪಾಟೀಲ, ಮುಖ್ಯಗುರು ಜಗದೀಶ ಗುಮಶೆಟ್ಟಿ ಮಾತನಾಡಿದರು.
ಈ ವೇಳೆ ೨೦೨೨-೨೩ ನೇ ಸಾಲಿನಲ್ಲಿ ದ್ವಿತೀಯ ಪಿಯುಸಿಯಲ್ಲಿ ಸಾಧನೆ ಮಾಡಿದ ವಿದ್ಯಾರ್ಥಿಗಳಿಗೆ, ಪದವಿಪೂರ್ವ ಶಿಕ್ಷಣ ಇಲಾಖೆಯ ವತಿಯಿಂದ ನಡೆದ ರಾಜ್ಯ ಮಟ್ಟ, ಜಿಲ್ಲಾ ಮಟ್ಟದ ಕುಸ್ತಿ ಪಂದ್ಯಾವಳಿಯಲ್ಲಿ ಸಾಧನೆ ಮಾಡಿದ ಕ್ರೀಡಾಪಟುಗಳನ್ನು ಸನ್ಮಾನಿಸಿ ಗೌರವಿಸಲಾಯಿತು.
ಈ ಸಂದರ್ಭದಲ್ಲಿ ಷಣ್ಮುಕಪ್ಪ ಝಳಕಿ, ಸಿದ್ದಣ್ಣ ಚಳ್ಳಗಿ, ಶಿವಪುತ್ರಪ್ಪ ಕಡಕೋಳ, ಮಲಕಾಜಪ್ಪಗೌಡ ಬಿರಾದಾರ, ದೇವಿಂದ್ರ ಗುಮಶೆಟ್ಟಿ, ಅಪ್ಪಾಸಾಬ್ ಗುಮಶೆಟ್ಟಿ, ಡಾ. ಜಿ ಜಿ ಮೇಡೆದಾರ, ಎಸ್ ಎಸ್ ಕಲಶೇಟ್ಟಿ, ರವಿಕುಮಾರ ಗುಮಶೇಟ್ಟಿ, ಶಾಂತವೀರ ದುರ್ಗಿ, ಬಿ ಎಂ ಕುಂಬಾರಸ ಸೇರಿದಂತೆ ಇತರರು ಇದ್ದರು.
Subscribe to Updates
Get the latest creative news from FooBar about art, design and business.
Related Posts
Add A Comment