ರಾಣಿ ಚೆನ್ನಮ್ಮ ವಿಶ್ವವಿದ್ಯಾಲಯದ ಅವೈಜ್ಞಾನಿಕ ಶೈಕ್ಷಣಿಕ ನೀತಿಗೆ ಖಂಡನೆ
ವಿಜಯಪುರ: ರಾಣಿ ಚೆನ್ನಮ್ಮ ವಿಶ್ವವಿದ್ಯಾಲಯದ ಶೈಕ್ಷಣಿಕ ಸಮಸ್ಯೆಗಳನ್ನು ಬಗೆಹರಿಸುವಂತೆ ಆಗ್ರಹಿಸಿ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ನಗರದ ಬಸವೇಶ್ವರ ವೃತ್ತದ ರಸ್ತೆ ಬಂದ್ ಮಾಡಿ ಪ್ರತಿಭಟನೆ ನಡೆಸಲಾಯಿತು.
ಈ ಸಂದರ್ಭದಲ್ಲಿ ರಸ್ತೆ ತಡೆಗಟ್ಟಿದ ಕಾರಣ ಪೊಲೀಸ್ ಮತ್ತು ವಿದ್ಯಾರ್ಥಿ ಪರಿಷತ್ತಿನ ಕಾರ್ಯಕರ್ತರ ನಡುವೆ ಮಾತಿನ ಚಕಮಕ್ಕಿ ನಡೆಯಿತು ಅದಾದ ನಂತರ ವಿದ್ಯಾರ್ಥಿಗಳ ಸಮಸ್ಯೆಗಳನ್ನು ಕೂಡಲೆ ಬಗೆಹರಿಸುವಂತೆ ರಾಜ್ಯ ಕಾರ್ಯದರ್ಶಿಗಳಾದ ಸಚಿನ ಕುಳಗೇರಿ ಇವರು ರಾಣಿ ಚೆನ್ನಮ್ಮ ವಿಶ್ವವಿದ್ಯಾಲಯದ ಮೌಲ್ಯಮಾಪನ ಕುಲಪತಿಗಳಾದ ಪ್ರೊ ರವೀಂದ್ರನಾಥ ಕದಮ್ ಇವರಿಗೆ ಆಗ್ರಹಪಡಿಸಿದರು.
ಅನೇಕ ವಿಶ್ವವಿದ್ಯಾಲಯಗಳು ಅತ್ಯಂತ ವ್ಯವಸ್ಥಿತವಾಗಿ ವಿದ್ಯಾರ್ಥಿಗಳಿಗೆ ಶಿಕ್ಷಣವನ್ನು ನೀಡುವ ಕೆಲಸವನ್ನು ಮಾಡಿದೆ, ಆದರೆ ಇವತ್ತಿನ ವಿಶ್ವವಿದ್ಯಾಲಯಗಳಿಗೆ ಶಿಕ್ಷಣವು ಪ್ರಾಮುಖ್ಯತೆ ಆಗದೆ ಕೇವಲ ಆಡಳಿತ ಮಾಡುವ ಕೇಂದ್ರಗಳಾಗಿವೆ, ಸರ್ಕಾರಗಳು ವಿಶ್ವವಿದ್ಯಾಲಯಗಳು ವಿದ್ಯಾರ್ಥಿಗಳ ಸಮಸ್ಯೆಗಳಿಗೆ ಸ್ಪಂದಿಸಬೇಕು ಶಿಕ್ಷಣ ಕ್ಷೇತ್ರಕ್ಕೆ ಮಹತ್ವದ ಪ್ರಾಮುಖ್ಯತೆಯನ್ನು ನೀಡಬೇಕೆಂದು ಆಗ್ರಹಿಸಿದರು.
ಪ್ರಾಂತ ಸಹ ಸಂಘಟನಾ ಕಾರ್ಯದರ್ಶಿ ಗಂಗಾಧರ ಹಂಜಗಿ ಮಾತನಾಡಿದರು.
ಮೌಲ್ಯಮಾಪನ ಕುಲಸಚಿವರು ಸಮಸ್ಯೆ ಬಗೆಹರಿಸುವ ಭರವಸೆಯನ್ನು ನೀಡಿ, ಮನವಿ ಪತ್ರವನ್ನು ತೆಗೆದುಕೊಂಡರು.
ಈ ಹೋರಾಟದಲ್ಲಿ ಅಖಿಲ ಭಾರತ ವಿದ್ಯಾರ್ಥಿ ಪರಿಷತ್ತಿನ ವಿಜಯಪುರ ಜಿಲ್ಲಾ ಸಂಚಾಲಕರಾದ ಮಂಜುನಾಥ ಹಳ್ಳಿ, ಹರ್ಷ ನಾಯಕ, ರೇಖಾ ಮಾಳಿ, ಕವಿತಾ ಬಿರಾದಾರ, ಸಿದ್ದು ಪತ್ತಾರ, ಶಿವನಗೌಡ ಬಿರಾದಾರ, ಮಲ್ಲಿಕಾರ್ಜುನ ಮಾಳಿ, ಮಾಂತೇಶ ಕಂಬಾರ, ಶ್ರೀಕಾಂತ ರೆಡ್ಡಿ, ಪ್ರವೀಣ ಬಿರಾದಾರ, ಅಭಿಷೇಕ ಬಿರಾದಾರ, ಅಭಿಷೇಕ ಗುಡದಿನ್ನಿ , ಸಂದೀಪ ಅರಳಗುಂಡಗಿ, ಐಶ್ವರ್ಯ ಆಸಂಗಿ, ವಿನಾಯಕ , ಪೂಜಾ ವೀರಶೆಟ್ಟಿ, ಶ್ರವಣ್ ಕುಮಾರ್,ಅಮಿತ ದರ್ಶನ ಪ್ರದೀಪ, ವಿಜಯಲಕ್ಷ್ಮಿ, ಶಿಲ್ಪಾ ಪೂಜಾರಿ, ಇತರರು ಉಪಸ್ಥಿತರಿದ್ದರು.