ಬಸವನಬಾಗೇವಾಡಿ: ಪಟ್ಟಣದ ಓಂ ನಗರದಲ್ಲಿರುವ ಕಾಳಿಕಾದೇವಿ ದೇವಸ್ಥಾನದ ಜಾತ್ರಾ ದಶಮಾನೋತ್ಸವದ ಅಂಗವಾಗಿ ಫೆ.15 ಮತ್ತು 16 ರಂದು ವಿವಿಧ ಧಾರ್ಮಿಕ, ಸಾಂಸ್ಕೃತಿಕ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.
ಫೆ.15 ರಂದು ಬೆಳಿಗ್ಗೆ 8 ಗಂಟೆಗೆ ವಿಶ್ವಕರ್ಮ ಧರ್ಮ ಧ್ವಜಾರೋಪಣ ಹಾಗೂ ದೇವಾಲಯದ ಕಳಸಾರೋಹಣ ಕಾರ್ಯಕ್ರಮ ನಡೆಯುವುದು. 8-30 ಗಂಟೆಗೆ ಜಗನ್ಮಾತಾ ಕಾಳಿಕಾದೇವಿಗೆ ಅಭಿಷೇಕ ನಂತರ ಸರ್ವಾಲಂಕಾರ ಪೂಜೆ ನೆರವೇರುವುದು, 9 ಗಂಟೆಗೆ ಚಂಡಿಕಾ ಹೋಮ ನಡೆಯುವುದು. ಮಧ್ಯಾಹ್ನ 12 ಗಂಟೆಗೆ ಮುತ್ತೈದೆಯರಿಗೆ ಉಡಿ ತುಂಬುವ ಕಾರ್ಯಕ್ರಮ ಜರುಗುವುದು.
ಮಧ್ಯಾಹ್ನ 3 ಗಂಟೆಗೆ ನಡೆಯಲಿರುವ ಧರ್ಮ ಸಭೆಯಲ್ಲಿ ಮಹೇಂದ್ರ ಸ್ವಾಮೀಜಿ, ಸಿದ್ಧಲಿಂಗ ಸ್ವಾಮೀಜಿ, ಶಿವಪ್ರಕಾಶ ಶಿವಾಚಾರ್ಯ ಸ್ವಾಮೀಜಿ ಸಾನಿಧ್ಯ ವಹಿಸುವರು. ಕಾಳಿಕಾದೇವಿ ಟ್ರಸ್ಟ್ ಕಮಿಟಿ ಅಧ್ಯಕ್ಷ ಕೆ.ಬಿ.ಕಡೆಮನಿ ಅಧ್ಯಕ್ಷತೆ ವಹಿಸುವರು,.ಜವಳಿ, ಸಕ್ಕರೆ ಅಭಿವೃದ್ಧಿ, ಕೃಷಿ ಮಾರಕಟ್ಟೆ ಸಚಿವ ಶಿವಾನಂದ ಪಾಟೀಲ ಕಾರ್ಯಕ್ರಮ ಉದ್ಘಾಟಿಸುವರು.
ಮಾಜಿ ಸಚಿವ ಎಸ್. ಕೆ. ಬೆಳ್ಳುಬ್ಬಿ, ಜೆಡಿಎಸ್ ಮುಖಂಡ ಅಪ್ಪುಗೌಡ ಪಾಟೀಲ, ಸಹಕಾರ ಮಹಾಮಂಡಳ ನಿರ್ದೇಶಕ ಐ.ಸಿ.ಪಟ್ಟಣಶೆಟ್ಟಿ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸುರೇಶ ಹಾರಿವಾಳ, ಪಿಕೆಪಿಎಸ್ ಅಧ್ಯಕ್ಷ ಸಂಗನಗೌಡ ಚಿಕ್ಕೊಂಡ, ಪಂಚಮಸಾಲಿ ಸಮಾಜದ ತಾಲೂಕು ಘಟಕದ ಅಧ್ಯಕ್ಷ ಬಸವರಾಜ ಗೊಳಸಂಗಿ, ಮುಖಂಡ ಚಂದ್ರಕಾಂತ ಪಟ್ಟಣಶೆಟ್ಟಿ, ಪುರಸಭೆ ಸದಸ್ಯರಾದ ರವಿ ಪಟ್ಟಣಶೆಟ್ಟಿ, ಪ್ರವೀಣ ಪವಾರ ಉಪಸ್ಥಿತರಿರುವರು. ಸಂಜೆ 6 ಗಂಟೆಗೆ ದೀಪೋತ್ಸವ ಕಾರ್ಯಕ್ರಮ ಜರಗುವುದು.
ಫೆ.16 ರಂದು ಬೆಳಗ್ಗೆ 7 ಗಂಟೆಗೆ ಕಾಳಿಕಾದೇವಿಯ ಅಲಂಕಾರ ಪೂಜೆ, 9 ಗಂಟೆಗೆ ಪಲ್ಲಕ್ಕಿ ಉತ್ಸವ ಪಟ್ಟಣದ ಪ್ರಮುಖ ಬೀದಿಗಳಲ್ಲಿ ನಡೆಯುವುದು. ಸಂಜೆ 6 ಗಂಟೆಗೆ ರಸಮಂಜರಿ ಕಾರ್ಯಕ್ರಮ ನಡೆಯಲಿದೆ ಎಂದು ಕಾಳಿಕಾದೇವಿ ಜಾತ್ರಾಮಹೋತ್ಸವ ಕಮಿಟಿ ಅಧ್ಯಕ್ಷ ಮೌನೇಶ ಪತ್ತಾರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Subscribe to Updates
Get the latest creative news from FooBar about art, design and business.
Related Posts
Add A Comment