ವಿಜಯಪುರ: ಸಂವಿಧಾನದ ಮಹತ್ವ ಎಲ್ಲರೂ ಅರಿಯಬೇಕು. ಸಂವಿಧಾನ ಪ್ರತಿಯೊಬ್ಬರಿಗೂ ಮೂಲಭೂತ ಹಕ್ಕು ಹಾಗೂ ಕರ್ತವ್ಯ ನೀಡಿದೆ. ಇದರಡಿಯಲ್ಲಿ ಎಲ್ಲರೂ ಸಮನ್ವಯದಿಂದ ಜೀವನ ಮಾಡುವಂತಾಗಿದೆ ಎಂದು ಬಸವನ ಬಾಗೇವಾಡಿಯ ತಹಶೀಲ್ದಾರ್ ಯಮನಪ್ಪ ಸೋಮನಕಟ್ಟೆ ಹೇಳಿದರು.
ಬಸವನಬಾಗೇವಾಡಿ ತಾಲೂಕಿನ ಮಣೂರ ಗ್ರಾಮ ಪಂಚಾಯತ್ನಲ್ಲಿ ಸಂವಿಧಾನ ಜಾಗೃತಿ ಜಾಥಾ ಕಾರ್ಯಕ್ರಮವನ್ನು ಸ್ವಾಗತಿಸಿ, ಹಮ್ಮಿಕೊಂಡ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ಮಣೂರು ಗ್ರಾಮ ಪಂಚಾಯತ ಅಧ್ಯಕ್ಷರು, ಉಪಾಧ್ಯಕ್ಷರು, ಹಾಗೂ ಸದಸ್ಯರು, ಸಾರ್ವಜನಿಕರು ಹಾಗೂ ಅಧಿಕಾರಿಗಳು, ಶಿಕ್ಷಕರು, ವಿದ್ಯಾರ್ಥಿಗಳು ಭಾಗವಹಿಸಿ ಸಂವಿಧಾನ ಜಾಗೃತಿ ಜಾಥಾ ಕಾರ್ಯಕ್ರಮವನ್ನು ಯಶಸ್ವಿಗೊಳಿಸಿದರು.
ನಂತರ ಕಣಕಾಲ ಗ್ರಾಮ ಪಂಚಾಯತಗೆ ಆಗಮಿಸಿದ ಸಂವಿಧಾನ ಜಾಗೃತಿ ಜಾಥಾ ಸ್ಥಬ್ಧಚಿತ್ರಕ್ಕೆ ಗ್ರಾಮ ಪಂಚಾಯತ ಅಧ್ಯಕ್ಷರು, ಉಪಾಧ್ಯಕ್ಷರು, ಸದಸ್ಯರು, ಸಾರ್ವಜನಿಕರು ಹಾಗೂ ಅಧಿಕಾರಿಗಳು, ಶಿಕ್ಷಕರು, ವಿದ್ಯಾರ್ಥಿಗಳು ವಾಧ್ಯ ಮೇಳದೊಂದಿಗೆ, ಶಾಲಾ ಮಕ್ಕಳಿಂದ ಸಂವಿಧಾನ ಪೀಠಿಕೆ ವಾಚನ, ಗೊಂಬೆ ಕುಣಿತ, ವೇಷಭೂಷಣ, ಮಹಿಳೆಯರಿಂದ ಕುಂಭಮೇಳದೊಂದಿಗೆ ಅತೀ ವಿಜೃಂಭಣೆಯಿಂದ ಸ್ವಾಗತ ಮಾಡಿಕೊಂಡರು.
ಈ ಸಂದರ್ಭದಲ್ಲಿ ಮಣೂರ ಗ್ರಾಮ ಪಂಚಾಯತ್ ಅಧ್ಯಕ್ಷ ಬಾಲು ರಾಠೋಡ, ನೋಡಲ್ ಅಧಿಕಾರಿಗಳಾದ ಸಿ.ಬಿ ಪಾಟೀಲ, ಬ.ಬಾಗೇವಾಡಿ ಸಮಾಜ ಕಲ್ಯಾಣ ಇಲಾಖೆ ಅಧಿಕಾರಿ ಭವಾನಿ ಪಾಟೀಲ, ಗಾಮ ಪಂಚಾಯತ್ ಉಪಾಧ್ಯಕ್ಷೆ ನಿವೇದಿತಾ ಪತ್ತಾರ ಉಪಸ್ಥಿತರಿದ್ದರು.
Subscribe to Updates
Get the latest creative news from FooBar about art, design and business.
Related Posts
Add A Comment
