ಸಿಂದಗಿ: ಕನ್ನಡ ಸಾಹಿತ್ಯ, ಪರಂಪರೆ, ಉಡುಗೆ ತೊಡುಗೆ, ಆಹಾರ ಪದ್ಧತಿ ಮತ್ತು ಇವುಗಳ ಹಿಂದಿರುವ ವೈಜ್ಞಾನಿಕ ಹಿನ್ನೆಲೆ ಕುರಿತು ಪ್ರಸ್ತುತ ದಿನಮಾನಗಳಲ್ಲಿ ಅವುಗಳ ಅವಶ್ಯಕತೆ ಇದೆ ಎಂದು ಉಪನ್ಯಾಸಕ ಹಾಗೂ ತಾಲೂಕು ಶರಣ ಸಾಹಿತ್ಯ ಪರಿಷತ್ ಅಧ್ಯಕ್ಷ ಡಾ.ಶರಣಬಸವ ಜೋಗೂರು ಹೇಳಿದರು.
ಪಟ್ಟಣದ ಶ್ರೀ ಪದ್ಮರಾಜ ವಿದ್ಯಾವರ್ಧಕ ಸಂಸ್ಥೆಯ ಅಂಗ ಸಂಸ್ಥೆಯಾದ ಜಿ.ಪಿ.ಪೋರವಾಲ್ ಕಲಾ, ವಾಣಿಜ್ಯ ಹಾಗೂ ವಿ.ವಿ.ಸಾಲಿಮಠ ಪದವಿ ಮಹಾವಿದ್ಯಾಲಯದಲ್ಲಿ ಹಮ್ಮಿಕೊಂಡ ವಾಣಿಜ್ಯ ಉತ್ಸವ ೨೦೨೪ರ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಕಾಲೇಜಿನಲ್ಲಿ ನಡೆಯವ ಇಂತಹ ಕಾರ್ಯಕ್ರಮಗಳಿಂದ ವಿದ್ಯಾರ್ಥಿಗಳ ಪ್ರತಿಭೆಯನ್ನು ಹೊರಹಾಕಲು ಒಳ್ಳೆಯ ಅವಕಾಶ ದೊರೆಯುತ್ತದೆ. ಎಲ್ಲರೂ ಇಂತಹ ಅವಕಾಶಗಳನ್ನು ಸರಿಯಾಗಿ ಬಳಸಿಕೊಳ್ಳುವಂತೆ ಸಲಹೆ ನೀಡಿದರು.
ಈ ವೇಳೆ ಪ್ರಾಚಾರ್ಯ ಡಿ.ಎಂ.ಪಾಟೀಲ ಅಧ್ಯಕ್ಷತೆ ವಹಿಸಿದ್ದರು.
ಸಂಯೋಜಕ ಡಾ.ರವಿ ಲಮಾಣಿ ವಿದ್ಯಾರ್ಥಿ ಒಕ್ಕೂಟದ ಕಾರ್ಯಾಧ್ಯಕ್ಷ ಬಸವರಾಜ ಮಹಾಜನಶೆಟ್ಟಿ, ಸಾಂಸ್ಕೃತಿಕ ಮತ್ತು ಕ್ರೀಡಾ ವಿಭಾಗದ ಮುಖ್ಯಸ್ಥರು ಹಾಗು ದೈಹಿಕ ನಿರ್ದೇಶಕ ರವಿ ಗೋಲಾ, ಪ್ರಕಾಶ್ ತೇಜು ರಾಠೋಡ, ಉಪನ್ಯಾಸಕ ಡಾ.ಶ್ರೀಕಾಂತ್ ಪಾಟೀಲ, ಮಲ್ಲಮ್ಮ ಯರಗಲ್, ಯಮನಪ್ಪ ದಿಂಡವಾರ ಸೇರಿದಂತೆ ಮಹಾವಿದ್ಯಾಲಯದ ಬೋಧಕ ಮತ್ತು ಬೋಧಕೇತರ ಸಿಬ್ಬಂದಿಗಳು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.
Subscribe to Updates
Get the latest creative news from FooBar about art, design and business.
Related Posts
Add A Comment

