ಇಂಡಿ: ಫೆ. ೧೧ ರಂದು ಮರಗೂರ ಗ್ರಾಮದ ಸಮೀಪವಿರುವ ಭೀಮಾಶಂಕರ ಸಹಕಾರಿ ಸಕ್ಕರೆ ಕಾರ್ಖಾನೆ ಚುನಾವಣೆಯಲ್ಲಿ ನಕಲಿ ಮತದಾನಕ್ಕೆ ಯತ್ನಿಸಲಾಗಿದೆ ಎಂದು ಮಾಜಿ ಶಾಸಕ, ಭೀಮಾಶಂಕರ ಸಹಕಾರಿ ಸಕ್ಕರೆ ಕಾರ್ಖಾನೆಯ ನಿರ್ದೇಶಕ ಹುದ್ದೆಗೆ ಸ್ಪರ್ಧೆ ಮಾಡಿದ್ದ ಡಾ. ಸಾರ್ವಭೌಮ ಬಗಲಿ ಝಳಕಿ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.
ಚುನಾವಣಾ ವೇಳೆ ಮೃತಪಟ್ಟಿರುವ ಗುರುಬಸಪ್ಪ ದೇಸಾಯಿ ಎಂಬುವರ ಹೆಸರಿನಲ್ಲಿ ನಕಲಿ ಒಟರ್ ಐಡಿ ಕಾರ್ಡ್ ತಯಾರಿಸಿ ಅನಾಮಿಕನೊಬ್ಬ ಮತದಾನ ಮಾಡಲು ಬಂದಿದ್ದಾನೆ. ಈತನನ್ನು ಹಿಡಿಯಲು ಹೋದಾಗ ಪರಾರಿಯಾಗಿದ್ದಾನೆ. ಈ ಬಗ್ಗೆ ಭೀಮಾಶಂಕರ ಸಹಕಾರಿ ಸಕ್ಕರೆ ಕಾರ್ಖಾನೆ ಮ್ಯಾನೇಜಿಂಗ್ ಡೈರೆಕ್ಟರ್‌ಗೆ ಮಾಹಿತಿ ನೀಡಿದ್ರೂ ಕ್ರಮ ತೆಗೆದುಕೊಂಡಿಲ್ಲ ಎಂದು ಅವರು ದೂರಿನಲ್ಲಿ ಉಲ್ಲೇಖ ಮಾಡಿದ್ದಾರೆ.
ಇನ್ನು ಭೀಮಾಶಂಕರ ಸಹಕಾರಿ ಸಕ್ಕರೆ ಕಾರ್ಖಾನೆ ಮ್ಯಾನೇಜಿಂಗ್ ಡೈರೆಕ್ಟರ್ ಹಾಗೂ ಅಪರಿಚಿತನ ವಿರುದ್ಧ ಕೇಸ್ ದಾಖಲಾಗಿದೆ. ಈ ಕುರಿತು ಝಳಕಿ ಪೊಲೀಸ ಠಾಣೆಯಲ್ಲಿ ಎ೧೪/೨೦೨೪ ಅಡಿಯಲ್ಲಿ ಭಾರತೀಯ ದಂಡ ಸಂಹಿತೆ ೧೮೬೦ ಸೆಕ್ಷನ್ ೪೧೯,೪೨೦,೪೬೮,೪೭೧ ಅಡಿಯಲ್ಲಿ ಪ್ರಕರಣ ದಾಖಲಾಗಿದೆ.
Subscribe to Updates
Get the latest creative news from FooBar about art, design and business.
Related Posts
Add A Comment