Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಮಾ.೧೫ರಂದು ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ

ತಾತ್ಕಾಲಿಕ ಆಯ್ಕೆ ಪಟ್ಟಿ ಪ್ರಕಟ: ಆಕ್ಷೇಪಣೆ ಆಹ್ವಾನ

ಮಾ.೧೫ರಂದು ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ರಸ್ತೆ ಸುರಕ್ಷತಾ ನಿಯಮಗಳನ್ನು ಪಾಲಿಸಲು ಜಾಗೃತಿ ಮೂಡಿಸಿ
(ರಾಜ್ಯ ) ಜಿಲ್ಲೆ

ರಸ್ತೆ ಸುರಕ್ಷತಾ ನಿಯಮಗಳನ್ನು ಪಾಲಿಸಲು ಜಾಗೃತಿ ಮೂಡಿಸಿ

By Updated:No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಜಿಲ್ಲಾ ಮಟ್ಟದ ರಸ್ತೆ ಸುರಕ್ಷತಾ ಸಮಿತಿ ಸಭೆಯಲ್ಲಿ ಡಿಸಿ ಟಿ.ಭೂಬಾಲನ್ ಸೂಚನೆ

ವಿಜಯಪುರ: ಜಿಲ್ಲೆಯಲ್ಲಿ ಅಪಘಾತ ಪ್ರಕರಣಗಳು ಸಂಭವಿಸದಂತೆ ರಸ್ತೆ ಸುರಕ್ಷತಾ ನಿಮಮಗಳು ಪಾಲನೆಯಾಗುವಂತೆ ನೋಡಿಕೊಳ್ಳಲು ಸಂಬಂಧಿಸಿದ ಅಧಿಕಾರಿಗಳು ಮುಂಜಾಗೃತ ಕ್ರಮ ವಹಿಸಿಕೊಂಡು ರಸ್ತೆ ಸುರಕ್ಷತಾ ನಿಯಮಗಳನ್ನು ಪಾಲಿಸುವಂತೆ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವಂತೆ ಎಂದು ಜಿಲ್ಲಾಧಿಕಾರಿ ಟಿ.ಭೂಬಾಲನ್ ಅವರು ಸೂಚಿಸಿದರು.
ಗುರುವಾರ ಜಿಲ್ಲಾಧಿಕಾರಿ ಕಚೇರಿಯ ಸಭಾಂಗಣದಲ್ಲಿ ನಡೆದ ಜಿಲ್ಲಾ ಮಟ್ಟದ ರಸ್ತೆ ಸುರಕ್ಷತಾ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿ, ವಾಹನ ಸವಾರರು ಕಡ್ಡಾಯವಾಗಿ ರಸ್ತೆ ನಿಯಮಗಳನ್ನು ಪಾಲಿಸುವಂತೆ ಜಾಗೃತಿ ಮೂಡಿಸಬೇಕು. ರಸ್ತೆಗಳ ಸುಧಾರಣೆ ಮಾಡಬೇಕು. ವೈಜ್ಞಾನಿಕವಾಗಿ ರಸ್ತೆಗಳನ್ನು ನಿರ್ಮಿಸಬೇಕು. ಅಪಘಾತ ತಡೆಗೆ ಸಂಬಂಧಿಸಿದ ಇಲಾಖೆಗಳು ಪೂರ್ವ ಸಿದ್ಧತಾ ಕ್ರಮ ತೆಗೆದುಕೊಂಡು ಅಪಘಾತ ತಡೆಗೆ ಕ್ರಮವಹಿಸಬೇಕು ಎಂದು ಹೇಳಿದರು.
ಅಪಘಾತಗಳು ತಡೆ ನಿಟ್ಟಿನಲ್ಲಿ ಪೂರ್ವ ಯೋಜನೆ ರೂಪುರೇಷೆ ಸಿದ್ಧಪಡಿಸಿಕೊಂಡು ಸಂಬಂಧಿಸಿದ ಇಲಾಖೆಯ ಅಧಿಕಾರಿಗಳು ಈ ದಿಶೆಯಲ್ಲಿ ಕಾರ್ಯ ನಿರ್ವಹಿಸಬೇಕು. ರಾಷ್ಟ್ರೀಯ ಹೆದ್ದಾರಿಗಳಲ್ಲಿ ಅಪಘಾತ ಸಂಭವಿಸಿದಾಗ ತುರ್ತು ಸೂಕ್ತ ಚಿಕಿತ್ಸೆ ನೀಡಲು ಅನುಕೂಲವಾಗುವ ನಿಟ್ಟಿನಲ್ಲಿ ಆಂಬ್ಯುಲೆನ್ಸ್ ಮತ್ತು ವೈದ್ಯಕೀಯ ಸೇವೆ ಒದಗಿಸಬೇಕು. ಶಾಲಾ ಮಕ್ಕಳಿಗೆ ಹಾಗೂ ಸಾರ್ವಜನಿಕರಿಗೆ ರಸ್ತೆ ನಿಮಯಗಳ ಬಗ್ಗೆ ತಿಳಿಸಬೇಕು. ಸಾರಿಗೆ ನಿಮಯಗಳ ಉಲ್ಲಂಘನೆಯಾಗದಂತೆ ಸಂಬಂಧಿಸಿದ ಇಲಾಖೆಗಳು ನಿಗಾ ವಹಿಸಬೇಕು. ರಾಷ್ಟ್ರೀಯ ಹೆದ್ದಾರಿಯಲ್ಲಿ ಪಟ್ಟಣ ಸಂಪರ್ಕಿಸುವ ಕಡೆ ಅಗತ್ಯ ಮಾಹಿತಿ ಫಲಕ ಅಳವಡಿಸಬೇಕು. ಕಾಮಗಾರಿ ನಡೆಯುವ ಸ್ಥಳದಲ್ಲಿ ಅಪಾಯದ ಸೂಚನೆಯ ಮಾಹಿತಿ ಫಲಕ ಅಳವಡಿಸಬೇಕು. ಸಾರಿಗೆ ಇಲಾಖೆ,ಪೊಲೀಸ್ ಇಲಾಖೆ ಹಾಗೂ ಲೋಕೋಪಯೋಗಿ ಇಲಾಖೆ ರಾಷ್ಟ್ರೀಯ ಹೆದ್ದಾರಿ ಇಲಾಖೆಗಳ ಅಧಿಕಾರಿಗಳು ಜಂಟಿಯಾಗಿ ಸಮಿಕ್ಷೆ ನಡೆಸಿ, ಅಪಘಾತ ತಡೆಗಟ್ಟುವ ವಿಧಾನಗಳನ್ನು ಅನುಸರಿಸಿ, ವೇಗದ ಮಿತಿ, ರಸ್ತೆ ತಿರುವು, ಅಡ್ಡರಸ್ತೆ ಹಾಗೂ ಮುನ್ನೆಚರಿಕೆಗಳ ಬಗ್ಗೆ ನಾಮಫಲಕಗಳನ್ನು ಕಾಣುವಂತೆ ಕಡ್ಡಾಯವಾಗಿ ಅಳವಡಿಸಬೇಕು ಎಂದು ಹೇಳಿದರು.
ನಗರದಲ್ಲಿ ಉಂಟಾಗುವ ಸಂಚಾರ ದಟ್ಟಣೆಯನ್ನು ತಡೆಯಲು ಅವಶ್ಯಕತೆ ಇದ್ದಲ್ಲಿ ರಸ್ತೆ ಸಿಗ್ನಲ್ ದೀಪಗಳನ್ನು ಅಳವಡಿಕೆ ಮಾಡಬೇಕು. ಮುಖ್ಯ ರಸ್ತೆಯಲ್ಲಿರುವ ಶಾಲೆಗಳಲ್ಲಿ ವಿದ್ಯಾರ್ಥಿಗಳು ಆಗಮನ ಹಾಗೂ ನಿರ್ಗಮನ ಸಮಯದಲ್ಲಿ ಸಂಚಾರ ನಿಯಮಗಳ ಪಾಲನೆಗೆ ಅರಿವು ಮೂಡಿಸುವಂತೆ ಅವರು ಸೂಚನೆ ನೀಡಿದರು.
ಸಾರ್ವಜನಿಕ ಶಿಕ್ಷಣ ಇಲಾಖೆ, ಪೋಲಿಸ್ ಇಲಾಖೆ, ಆರೋಗ್ಯ ಇಲಾಖೆ ಹಾಗೂ ಸಾರಿಗೆ ಇಲಾಖೆಗಳು ಸಮನ್ವಯದಿಂದ ಅಪಘಾತಗಳನ್ನು ತಡೆಗಟ್ಟುವಲ್ಲಿ ಕಾರ್ಯ ನಿರ್ವಹಿಸಬೇಕೆಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಋಷಿಕೇಶ್ ಸೋನಾವಣೆ ಅವರು ಹೇಳಿದರು.
ಸಭೆಯಲ್ಲಿ ಜಿಲ್ಲಾ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಶಂಕರ ಮಾರಿಹಾಳ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಅಧಿಕಾರಿ ಬಸವರಾಜ ಹುಬ್ಬಳ್ಳಿ, ಪ್ರಾದೇಶಿಕ ಸಾರಿಗೆ ಅಧಿಕಾರಿ ಆನಂದ ಪಾರ್ತನಹಳ್ಳಿ, ಲೊಕೋಪಯೋಗಿ ಇಲಾಖೆಯ ಕಾರ್ಯ ನಿರ್ವಾಹಕ ಅಭಿಯಂತರರು, ರಾಷ್ಟ್ರೀಯ ಹೆದ್ದಾರಿ ಇಲಾಖೆಯ ಅಧಿಕಾರಿಗಳು ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಮಾ.೧೫ರಂದು ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ

ತಾತ್ಕಾಲಿಕ ಆಯ್ಕೆ ಪಟ್ಟಿ ಪ್ರಕಟ: ಆಕ್ಷೇಪಣೆ ಆಹ್ವಾನ

ಮಾ.೧೫ರಂದು ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ

ಶ್ರೀಶೈಲ ದರ್ಶನಕ್ಕೆ ವಿಶೇಷ ಬಸ್ ಸೌಲಭ್ಯ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಮಾ.೧೫ರಂದು ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ
    In (ರಾಜ್ಯ ) ಜಿಲ್ಲೆ
  • ತಾತ್ಕಾಲಿಕ ಆಯ್ಕೆ ಪಟ್ಟಿ ಪ್ರಕಟ: ಆಕ್ಷೇಪಣೆ ಆಹ್ವಾನ
    In (ರಾಜ್ಯ ) ಜಿಲ್ಲೆ
  • ಮಾ.೧೫ರಂದು ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ
    In (ರಾಜ್ಯ ) ಜಿಲ್ಲೆ
  • ಶ್ರೀಶೈಲ ದರ್ಶನಕ್ಕೆ ವಿಶೇಷ ಬಸ್ ಸೌಲಭ್ಯ
    In (ರಾಜ್ಯ ) ಜಿಲ್ಲೆ
  • ನಾಟಕ ಕಲೆ ಉಳಿಸಿ-ಬೆಳೆಸುವುದು ಅಗತ್ಯ :ಡಾ.ಪ್ರಭುಗೌಡ
    In (ರಾಜ್ಯ ) ಜಿಲ್ಲೆ
  • ಉಳುವಿ ಪಾದಯಾತ್ರಿಗಳಿಗೆ ಸ್ವಾಗತ, ಬೀಳ್ಕೊಡುಗೆ
    In (ರಾಜ್ಯ ) ಜಿಲ್ಲೆ
  • ಜಮೀನು ದಾರಿ ಸಮಸ್ಯೆ ಇತ್ಯರ್ಥ ಅಧಿಕಾರ ತಹಸೀಲ್ದಾರರಿಗಿರಲಿ
    In (ರಾಜ್ಯ ) ಜಿಲ್ಲೆ
  • ಅಭ್ಯಾಸವು ಪರಿಪೂರ್ಣ ವ್ಯಕ್ತಿಯನ್ನಾಗಿ ನಿರ್ಮಿಸುತ್ತದೆ :ಡಾ.ಗುಡಿ
    In (ರಾಜ್ಯ ) ಜಿಲ್ಲೆ
  • ಪಾರಂಪರಿಕ ಕಲೆಗಳ ಸಂರಕ್ಷಣೆ ಅಗತ್ಯ :ಡಾ.ಪ್ರಭುಸಾರಂಗದೇವ ಶ್ರೀ
    In (ರಾಜ್ಯ ) ಜಿಲ್ಲೆ
  • ಆಧ್ಯಾತ್ಮಿಕ ಮೌಲ್ಯಗಳನ್ನು ಬೆಳೆಸಿಕೊಳ್ಳಿ :ಡಾ.ಪ್ರಭುಸಾರಂಗದೇವ ಶ್ರೀ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.