ವಿಜಯಪುರ: ಕೆಐಎಡಿಬಿ ೧೧೦/೧೧ ಕೆವಿ ವಿದ್ಯುತ್ ವಿತರಣಾ ಕೇಂದ್ರದಲ್ಲಿ ನಾಲ್ಕನೇ ತ್ರೈಮಾಸಿಕ ನಿರ್ವಹಣಾ ಕಾಮಗಾರಿಯನ್ನು ಫೆ.೧೭ರಂದು ಕೈಗೊಳ್ಳುವುದರಿಂದ ಸದರಿ ವಿದ್ಯುತ್ ವಿತರಣಾ ಕೇಂದ್ರದಿಂದ ಹೊರಡುವ ೩೩/೧೧ ಕೆವ್ಹಿ ಹೊನ್ನುಟಗಿ ಮತ್ತು ೩೩/೧೧ ಕೆವ್ಹಿ ನಾಗಠಾಣ ವಿದ್ಯುತ್ ವಿತರಣಾ ಕೇಂದ್ರಗಳಿಗೆ ಹಾಗೂ ೧೧೦/೧೧ ಕೆವ್ಹಿ ಕೆಐಎಡಿಬಿ ವಿದ್ಯುತ್ ವಿತರಣಾ ಕೇಂದ್ರದಿಂದ ಹೊರಡುವ ಎಲ್ಲ ೧೧ ಕೆವ್ಹಿ ವಿದ್ಯುತ್ ಮಾರ್ಗಗಳಿಗೆ ಅಂದು ಬೆಳಿಗ್ಗೆ ೯ ಗಂಟೆಯಿಂದ ಸಂಜೆ ೬ ಗಂಟೆಯವರೆಗೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯವಾಗಲಿದ್ದು, ಸಾರ್ವಜನಿಕರು ಸಹಕರಿಸುವಂತೆ ವಿಜಯಪುರ ಹೆಸ್ಕಾಂ ಕಾರ್ಯನಿರ್ವಾಹಕ ಅಭಿಯಂತರರು ಪ್ರಕಟಣೆಯಲ್ಲಿ ಕೋರಿದ್ದಾರೆ.
Subscribe to Updates
Get the latest creative news from FooBar about art, design and business.
Related Posts
Add A Comment
