ಸಿಂದಗಿ: ಸಮಾನತೆ, ಮಾನವತಾವಾದ, ಸಮಾಜವಾದ ಹಾಗೂ ಧರ್ಮ ನಿರಪೇಕ್ಷದಂತಹ ಮೌಲ್ಯಗಳನ್ನು ಸಂವಿಧಾನ ಜನರಿಗೆ ಕೊಡುಗೆಯಾಗಿ ನೀಡಿದೆ ಎಂದು ಸರಕಾರಿ ಪಪೂ ಕಾಲೇಜಿನ ಉಪನ್ಯಾಸಕ ಶಶಿಧರ ಅವಟಿ ಹೇಳಿದರು.
ಗುರುವಾರದಂದು ಪಟ್ಟಣದ ಅಂಬೇಡ್ಕರ್ ಭವನದಲ್ಲಿ ಸಿಂದಗಿ ಪುರಸಭೆ ಕಾರ್ಯಾಲಯ ವತಿಯಿಂದ ಸಂವಿಧಾನ ದಿನಾಚರಣೆಯ ಅಂಗವಾಗಿ ಹಮ್ಮಿಕೊಂಡ ಸಂವಿಧಾನ ಜಾಗೃತಿ ಕಾರ್ಯಕ್ರಮದಲ್ಲಿ ಉಪನ್ಯಾಸ ನೀಡಿ ಮಾತನಾಡಿದ ಅವರು, ಭಾರತ ಸಂವಿಧಾನವು ಐದು ಪ್ರಮುಖ ಮೌಲ್ಯಗಳಾದ ಸ್ವಾತಂತ್ರ್ಯ, ಏಕತೆ, ಭ್ರಾತೃತ್ವ, ಸಮಾನತೆ ಮತ್ತು ಸಹೋದರತ್ವ ನೀಡುವ ಮೂಲಕ ಪ್ರಪಂಚದಲ್ಲಿ ವಿಶೇಷ ಸ್ಥಾನಮಾನ ಹೊಂದಿದೆ. ಸಂವಿಧಾನದ ಮಹತ್ವ ಹಾಗೂ ಮೌಲ್ಯಗಳನ್ನು ಕುರಿತು ಜಾಗೃತಿ ಮೂಡಿಸುವುದು ಮತ್ತು ರಾಷ್ಟ್ರೀಯ ಏಕತೆಯನ್ನು ಎತ್ತಿ ಹಿಡಿಯುವ ಉದೇಶದಿಂದ ಜಾಗೃತಿ ಜಾಥಾ ಹಮ್ಮಿಕೊಂಡಿದೆ. ಪ್ರತಿಯೊಬ್ಬ ವ್ಯಕಿಯು ಸಂವಿಧಾನ ಪೀಠಿಕೆಯನ್ನು ಅರಿಯಬೇಕು ಎಂದು ಹೇಳಿದರು.
ಈ ವೇಳೆ ಕಾರ್ಯಕ್ರಮವನ್ನು ಉದ್ಘಾಟಿಸಿದ ತಾಲೂಕು ದಂಡಾಧಿಕಾರಿ ಪ್ರದೀಪಕುಮಾರ ಹಿರೇಮಠ ಸಂವಿಧಾನ ಪಿಠೀಕೆಯನ್ನು ಬೋಧಿಸಿದರು. ಎಸ್.ಕೆ.ಬಿರಾದಾರ ಸರಕಾರದ ಐದು ಗ್ಯಾರಂಟಿಗಳ ಬಗ್ಗೆ ಮಾತನಾಡಿದರು. ಸಂವಿಧಾನ ದಿನಾಚರಣೆಯ ಅಂಗವಾಗಿ ಹಮ್ಮಿಕೊಂಡ ವಿವಿಧ ಸ್ಪರ್ಧೆಯಲ್ಲಿ ಭಾಗವಹಿಸಿ ವಿಜೇತರಾದ ವಿವಿಧ ಶಾಲೆಯ ಮಕ್ಕಳಿಗೆ ಬಹುಮಾನ ನೀಡಲಾಯಿತು.
ಈ ವೇಳೆ ಪಟ್ಟಣದ ಜೈಭೀಮ ನಗರದ ನಿವಾಸಿಗಳ ವತಿಯಿಂದ ಸಂವಿಧಾನ ಜಾಥಾ ರಥಯಾತ್ರೆಯಲ್ಲಿ ಭಾಗವಹಿಸಿ ನೃತ್ಯ ಪ್ರದರ್ಶನ ಮಾಡಿದ ವಿದ್ಯಾರ್ಥಿಗಳಿಗೆ ಮತ್ತು ಜಾಗೃತಿ ರಥಯಾತ್ರೆಯನ್ನು ಯಶಸ್ವಿಗೊಳಿಸಿದ ತಾಲೂಕು ಮಟ್ಟದ ಅಧಿಕಾರಿಗಳಿಗೆ ಪುಸ್ತಕದ ಮಾಲೆ ಮಾಡಿ ಸನ್ಮಾನಿಸಿ ಗೌರವಿಸಲಾಯಿತು.
ಗಮನ ಸೆಳೆದ ಸ್ಥಬ್ದಚಿತ್ರ: ಸಂವಿಧಾನ ಜಾಗೃತಿ ರಥ ಪಟ್ಟಣದ ಬಸವೇಶ್ವರ ವೃತ್ತದಲ್ಲಿ ಆಗಮಿಸುತ್ತಿದ್ದಂತೆ ತಾಲೂಕು ಆಡಳಿತ, ಪುರಸಭೆ, ವಿವಿಧ ಸಂಘಟನೆಯ ಪದಾಧಿಕಾರಿಗಳ ನೇತೃತ್ವದಲ್ಲಿ ಭವ್ಯವಾಗಿ ಸ್ವಾಗತಿಸಿಕೊಳ್ಳಲಾಯಿತು.
ಇದೇ ಸಂದರ್ಭದಲ್ಲಿ ದಸಂಸ ಜಿಲ್ಲಾ ಸಂಚಾಲಕ ವಾಯ್.ಸಿ.ಮಯೂರ್, ಕಸಾಪ ನಿಕಟಪೂರ್ವ ತಾಲೂಕಾಧ್ಯಕ್ಷ ರಾಜಶೇಖರ ಕೂಚಬಾಳ, ಎಸ್.ಬಿ.ಹಚ್ಚಡದ, ಸಿಡಿಪಿಒ ಶಂಭುಲಿಂಗ ಹಿರೇಮಠ, ಎಸಿಡಿಪಿಒ ಎಸ್.ಎನ್.ಕೋರವಾರ, ಪುರಸಭೆ ಸದಸ್ಯ ಬಸವರಾಜ ಯರನಾಳ, ಮಾಜಿ ಲಿಂಬೆ ಅಭಿವೃದ್ಧಿ ನಿಗಮ ಮಂಡಳಿ ಅಧ್ಯಕ್ಷ ಅಶೋಕ ಅಲ್ಲಾಪುರ, ನೌಕರರ ಸಂಘದ ತಾಲೂಕಾಧ್ಯಕ್ಷ ಅಶೋಕ ತೆಲ್ಲೂರ, ನಬಿರಸೂಲ್ ಉಸ್ತಾದ್, ಡಾ.ಅನಿಲ ನಾಯಕ್, ಪೀರು ಕೆರೂರ, ಪ್ರವೀಣ ಹಾಲಹಳ್ಳಿ, ಕಸಾಪ ಮಾಜಿ ತಾಲೂಕಾಧ್ಯಕ್ಷ ಚಂದ್ರಶೇಖರ ದೇವರೆಡ್ಡಿ, ಶಿಕ್ಷಕಿ ಸೈನಬಿ ಮಸಳಿ, ಜಯಶ್ರೀ ಹದನೂರ, ನಿಖಿಲ ಖಾನಾಪೂರ, ಚಂದ್ರಕಾಂತ ಸಿಂಗೆ, ಸಾಯಬಣ್ಣ ದೇವರಮನಿ, ರಾಜಕುಮಾರ ಭಾಸಗಿ, ಸಂತೋಷ ಮಣಗೀರಿ, ಆರ್ ಆರ್ ನಿಂಬಾಳಕರ, ಸುನಂದಾ ಯಂಪುರೆ, ಸೇರಿದಂತೆ ತಾಲೂಕು ಮಟ್ಟದ ಅಧಿಕಾರಿಗಳು, ಶಿಕ್ಷಕರು, ಅಂಗನವಾಡಿ ಕಾರ್ಯಕರ್ತರು, ಶಾಲಾ ಮಕ್ಕಳು ಸೇರಿದಂತೆ ಅನೇಕರು ಉಪಸ್ಥಿತರಿದ್ದರು.
ಕಾರ್ಯಕ್ರಮವನ್ನು ಶಿವಾನಂದ ಆಲಮೇಲ ಸ್ವಾಗತಿಸಿ, ನಿರೂಪಿಸಿದರು. ಕ್ಷೇತ್ರ ಶಿಕ್ಷಣಾಧಿಕಾರಿ ಆರಿಫ್ ಬಿರಾದಾರ ವಂದಿಸಿದರು.
Subscribe to Updates
Get the latest creative news from FooBar about art, design and business.
Related Posts
Add A Comment

