ಬಸವನಬಾಗೇವಾಡಿ: ವಿದ್ಯಾರ್ಥಿಗಳು ಮೊಬೈಲ್, ಟಿವಿ ಧಾರವಾಹಿಗಳನ್ನು ವೀಕ್ಷಣೆ ಮಾಡುವದನ್ನು ಬಿಟ್ಟು ಅಧ್ಯಯನದ ಕಡೆಗೆ ಹೆಚ್ಚು ಗಮನಹರಿಸಿದರೆ ಸ್ಪರ್ಧಾತ್ಮಕ ಯುಗದಲ್ಲಿ ಮುಂದೆ ಬರಲು ಸಾಧ್ಯವಿದೆ ಎಂದು ವಿಜಯಪುರದ ಚಾಣಕ್ಯ ಕರಿಯರ ಅಕಾಡೆಮಿಯ ಅಧ್ಯಕ್ಷ ಎನ್.ಎಂ. ಬಿರಾದಾರ ಹೇಳಿದರು.
ಪಟ್ಟಣದ ಅಕ್ಕನಾಗಮ್ಮ ಬಾಲಕಿಯರ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಈಚೆಗೆ ಹಮ್ಮಿಕೊಂಡಿದ್ದ ವಾರ್ಷಿಕ ಸ್ನೇಹ ಸಮ್ಮೇಳನ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ನಮ್ಮ ಅಕಾಡೆಮಿಯಲ್ಲಿ ತರಬೇತಿ ಪಡೆದ ಸಾಕಷ್ಟು ವಿದ್ಯಾರ್ಥಿಗಳು ಉದ್ಯೋಗ ಪಡೆದಿದ್ದಾರೆ. ತಾವುಗಳು ನಮ್ಮ ಅಕಾಡೆಮಿ ಮಾರ್ಗದರ್ಶನ ಪಡೆದುಕೊಳ್ಳಬೇಕು ಎಂದು ಹೇಳಿದರು.
ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಸಹಕಾರ ಮಹಾಮಂಡಳ ನಿರ್ದೇಶಕ ಈರಣ್ಣ ಪಟ್ಟಣಶೆಟ್ಟಿ, ಒಳ್ಳೆಯ ವಿಚಾರಗಳನ್ನು ಗುರಿಯಾಗಿಟ್ಟುಕೊಂಡು ಅಭ್ಯಾಸದಲ್ಲಿ ತೊಡಗಿದರೆ ಜೀವನದಲ್ಲಿ ಯಶಸ್ಸು ಕಾಣಲು ಸಾಧ್ಯ ಎಂದು ಹೇಳಿದರು.
ಉಪನಿರ್ದೇಶಕ ಡಾ.ಸಿ.ಕೆ.ಹೊಸಮನಿ ಮಾತನಾಡಿ, ಇಲಾಖೆಯ ಎಲ್ಲ ಸೌಲಭ್ಯಗಳನ್ನು ವಿದ್ಯಾರ್ಥಿಗಳು ಪಡೆದುಕೊಳ್ಳಬೇಕು. ನಿರಂತರ ಅಧ್ಯಯನದೊಂದಿಗೆ ಪರೀಕ್ಷೆಯಲ್ಲಿ ಉತ್ತಮ ಅಂಕ ಪಡೆದುಕೊಳ್ಳಬೇಕು ಎಂದು ಹೇಳಿದರು.
ಸಾನಿಧ್ಯ ವಹಿಸಿದ್ದ ಸಿದ್ಧಲಿಂಗ ಸ್ವಾಮೀಜಿ, ವಕೀಲ ವಿ.ಬಿ.ಮರ್ತುರ, ಪ್ರಾಚಾರ್ಯ ಎಂ.ಬಿ.ವಗ್ಗರ ಮಾತನಾಡಿದರು. ಉಪನಿರ್ದೇಶಕರ ಕಚೇರಿ ಶಾಖಾಧಿಕಾರಿ ಪ್ರಕಾಶ ಗೊಂಗಡಿ, ಸುರೇಶ ಗಬ್ಬೂರ ಇದ್ದರು.
Subscribe to Updates
Get the latest creative news from FooBar about art, design and business.
Related Posts
Add A Comment

