Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಉದಯರಶ್ಮಿ ಇಂದಿನ ದಿನಪತ್ರಿಕೆ ಜೂನ್ 26, 2026

ಅಥಣಿ: ಮತ್ತಷ್ಟು 4 ಎಐ ಕ್ಯಾಮೆರಾಗಳ ಕಾರ್ಯಾರಂಭ

ವಿದ್ಯಾರ್ಥಿಗಳು ಯಾವುದೇ ವ್ಯಸನಗಳಿಗೆ ಒಳಗಾಗಬಾರದು

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಸತತ ಪ್ರಯತ್ನ, ಶ್ರದ್ಧೆ, ಆತ್ಮವಿಶ್ವಾಸದಿಂದ ಸಾಧನೆ ಖಚಿತ
(ರಾಜ್ಯ ) ಜಿಲ್ಲೆ

ಸತತ ಪ್ರಯತ್ನ, ಶ್ರದ್ಧೆ, ಆತ್ಮವಿಶ್ವಾಸದಿಂದ ಸಾಧನೆ ಖಚಿತ

By No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಬಸವನಬಾಗೇವಾಡಿ: ಸತತ ಪ್ರಯತ್ನ, ಓದಿನಲ್ಲಿ ಶ್ರದ್ಧೆ, ಆತ್ಮವಿಶ್ವಾಸ ಇದ್ದರೆ ವಿದ್ಯಾರ್ಥಿಗಳಿಗೆ ಯಾವುದು ಅಸಾಧ್ಯವಲ್ಲ ಎಂದು ವಿಜಯಪುರದ ಎಕ್ಸಲೆಂಟ್ ಸಮೂಹ ಶಿಕ್ಷಣ ಸಂಸ್ಥೆಯ ಕಾರ್ಯದರ್ಶಿ ಶಿವಾನಂದ ಕೆಲೂರ ಹೇಳಿದರು.
ಸ್ಥಳೀಯ ಬಾಲಕಿಯರ ಸರ್ಕಾರಿ ಪ್ರೌಢ ಶಾಲೆಯಲ್ಲಿ ಬುಧವಾರ ಹಮ್ಮಿಕೊಂಡಿದ್ದ ವಾರ್ಷಿಕೋತ್ಸವ ಹಾಗೂ ಸ್ನೇಹಸಮ್ಮೇಳನ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ಬಡತನ, ಕನ್ನಡ ಮಾಧ್ಯಮ, ಹಳ್ಳಿ ಬದುಕಿನ ಹಿನ್ನೆಲೆ ಇದ್ದರೂ ಗುರಿ ಮುಟ್ಟಿದ ನೂರಾರು ಸಾಧಕರು ನಮ್ಮ ಕಣ್ಣಮುಂದಿದ್ದಾರೆ. ಸಾಧಿಸುವ ಛಲದೊಂದಿಗೆ ಸತತ ಪ್ರಯತ್ನದಲ್ಲಿದ್ದವರು ಯಶಸ್ಸು ಕಾಣುತ್ತಾರೆ ಎಂದು ಹೇಳಿದ ಅವರು ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ 625 ಕ್ಕೆ 625 ಅಂಕ ಪಡೆದರೆ ರೂ.25,000 ಹಾಗೂ ಗಣಿತ ವಿಷಯದಲ್ಲಿ 100 ಅಂಕ ಪಡೆದರೆ ರೂ. 5,000 ಬಹುಮಾನ ನೀಡುವುದಾಗಿ ಭರವಸೆ ನೀಡಿದರು.
ಕ್ಷೇತ್ರ ಸಮನ್ವಯಾಧಿಕಾರಿ ಪಿ.ಯು.ರಾಠೋಡ ಮಾತನಾಡಿ, ಅಂಕ ಗಳಿಕೆ ಜೊತೆಗೆ ಸಂಸ್ಕಾರಯುತ ಶಿಕ್ಷಣ ಇಂದಿನ ಅವಶ್ಯಕತೆಯಾಗಿದೆ ಎಂದು ಹೇಳಿದರು.
ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸುರೇಶ ಹಾರಿವಾಳ, ಮುಖಂಡ ಅನಿಲ ಅಗರವಾಲ ಮಾತನಾಡಿದರು.
ಪುರಸಭೆ ಸದಸ್ಯ ದೇವೇಂದ್ರ ರಾಠೋಡ, ಎಸ್.ಎ.ದೇಗಿನಾಳ, ಮುರಗೇಶ ನಾಯ್ಕೋಡಿ, ಶರಣಗೌಡ ಬಿರಾದಾರ, ಬಾಬು ಕೆಂಭಾವಿ, ಶಾರದಾ ಮ್ಯಾಗೇರಿ, ಪ್ರಕಾಶ ಬೆಣ್ಣೂರ, ಶಿವಲಿಂಗ ಕಿಣಗಿ ಇದ್ದರು.
ಶಿಕ್ಷಕ ಶಿವಕುಮಾರ ಹುಲಸೂರ ಸ್ವಾಗತಿಸಿದರು. ಅಶೋಕ ಹಂಚಲಿ, ಜಿ.ಎಂ.ಗಂಜಾಳ ನಿರೂಪಿಸಿದರು. ಸ್ನೇಹಾ ಪೂಜಾರ ವಂದಿಸಿದರು. ಇದೇ ಸಂದರ್ಭದಲ್ಲಿ ಮೇ ತಿಂಗಳಲ್ಲಿ ನಿವೃತ್ತಿ ಹೊಂದಲಿರುವ ಪ್ರಭಾಕರ ಢವಳಗಿ, ಆರ್.ಐ. ಗಬ್ಬೂರ ಹಾಗೂ ಆದರ್ಶ ವಿದ್ಯಾರ್ಥಿನಿ ಶ್ರೀರಕ್ಷಾ ಬಿರಾದಾರ ಅವರನ್ನು ಸನ್ಮಾನಿಸಲಾಯಿತು. ಸಂಜೆ ಜರುಗಿದ ಸಾಂಸ್ಕೃತಿಕ ಕಾರ್ಯಕ್ರಮಕ್ಕೆ ಡಿಸಿಸಿ ಬ್ಯಾಂಕ್ ನಿರ್ದೇಶಕಿ ಸಂಯುಕ್ತಾ ಪಾಟೀಲ ಚಾಲನೆ ನೀಡಿದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಉದಯರಶ್ಮಿ ಇಂದಿನ ದಿನಪತ್ರಿಕೆ ಜೂನ್ 26, 2026

ಅಥಣಿ: ಮತ್ತಷ್ಟು 4 ಎಐ ಕ್ಯಾಮೆರಾಗಳ ಕಾರ್ಯಾರಂಭ

ವಿದ್ಯಾರ್ಥಿಗಳು ಯಾವುದೇ ವ್ಯಸನಗಳಿಗೆ ಒಳಗಾಗಬಾರದು

ಜು.೨೭ರಂದು ಬಿ.ಎಲ್.ಡಿ.ಇ–ರಘುಕುಲ ಸಮನ್ವಯ ಶಾಲೆ ಉದ್ಘಾಟನೆ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಉದಯರಶ್ಮಿ ಇಂದಿನ ದಿನಪತ್ರಿಕೆ ಜೂನ್ 26, 2026
    In ದಿನಪತ್ರಿಕೆ
  • ಅಥಣಿ: ಮತ್ತಷ್ಟು 4 ಎಐ ಕ್ಯಾಮೆರಾಗಳ ಕಾರ್ಯಾರಂಭ
    In (ರಾಜ್ಯ ) ಜಿಲ್ಲೆ
  • ವಿದ್ಯಾರ್ಥಿಗಳು ಯಾವುದೇ ವ್ಯಸನಗಳಿಗೆ ಒಳಗಾಗಬಾರದು
    In (ರಾಜ್ಯ ) ಜಿಲ್ಲೆ
  • ಜು.೨೭ರಂದು ಬಿ.ಎಲ್.ಡಿ.ಇ–ರಘುಕುಲ ಸಮನ್ವಯ ಶಾಲೆ ಉದ್ಘಾಟನೆ
    In (ರಾಜ್ಯ ) ಜಿಲ್ಲೆ
  • ಸಚಿವ ಎಂ ಬಿ ಪಾಟೀಲ ಜಿಲ್ಲಾ ಪ್ರವಾಸ ಇಂದು
    In (ರಾಜ್ಯ ) ಜಿಲ್ಲೆ
  • ನೀಟ್ ಪರೀಕ್ಷೆಯಲ್ಲಿ ಮಹಮ್ಮದ್ ಯಾಸೀನ್ 3226ನೇ ರ‍್ಯಾಂಕ್
    In (ರಾಜ್ಯ ) ಜಿಲ್ಲೆ
  • ಮತದಾರರ ಪಟ್ಟಿ ಪರಿಷ್ಕರಣೆ: 15.24 ಲಕ್ಷ ಗಣತಿ ಫಾರಂ ಡಿಜಿಟಲೀಕರಣ
    In (ರಾಜ್ಯ ) ಜಿಲ್ಲೆ
  • ಇಂಡಿಯಲ್ಲಿ ಸಂಚಲನ: ಎರಡೂವರೆ ತಿಂಗಳ ಬಳಿಕ ಕೊಲೆ ಆರೋಪದ ತಿರುವು
    In (ರಾಜ್ಯ ) ಜಿಲ್ಲೆ
  • ಸಿಂದಗಿಯಲ್ಲಿ ಜು.೨೭ ರಂದು ಪತ್ರಿಕಾ ದಿನಾಚರಣೆ
    In (ರಾಜ್ಯ ) ಜಿಲ್ಲೆ
  • ಶ್ರೀ ಖಾಸ್ಗತರ ಗದ್ದುಗೆ ದರ್ಶನ ಪಡೆದ ಶಾಸಕ ರಾಜುಗೌಡ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.