ಬಸವನಬಾಗೇವಾಡಿ: ಪಟ್ಟಣದ ತಹಸೀಲ್ದಾರ ಕಚೇರಿಯ ಸಭಾಂಗಣದಲ್ಲಿ ಗುರುವಾರ ತಾಲೂಕಾಡಳಿತದಿಂದ ಸಂತ ಸೇವಾಲಾಲ ಜಯಂತಿ ಆಚರಿಸಲಾಯಿತು.
ತಹಸೀಲ್ದಾರ ವೈ.ಎಸ್.ಸೋಮನಕಟ್ಟಿ ಸಂತ ಸೇವಾಲಾಲ ಅವರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ ಮಾತನಾಡಿದ ಅವರು, ಸರ್ಕಾರದ ಮಹಾತ್ಮರ ಜಯಂತಿಗಳನ್ನು ಆಚರಣೆ ಮಾಡುವ ಮೂಲಕ ಸಮಾಜಕ್ಕೆ ಅವರ ಸಂದೇಶಗಳನ್ನು ಮುಟ್ಟಿಸುವ ಕಾರ್ಯ ಮಾಡುತ್ತಿದೆ. ಮಹಾತ್ಮರು ಸಾರಿದ ಸಂದೇಶಗಳನ್ನು ಪ್ರತಿಯೊಬ್ಬರೂ ಅರಿತುಕೊಂಡು ಜೀವನ ಮಾಡಿದರೆ ಸುಂದರವಾದ ಸಮಾಜ ನಿರ್ಮಾಣ ಮಾಡಲು ಸಾಧ್ಯ ಎಂದರು.
ಪುರಸಭೆ ಸದಸ್ಯ ನೀಲಪ್ಪ ನಾಯಕ ಮಾತನಾಡಿದರು.
ಬ್ಲಾಕ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ರವಿ ರಾಠೋಡ, ಬಂಜಾರಾ ಸಮಾಜ ಧರ್ಮಗುರು ಸಂತ ಸೇವಾಲಾಲ ಅವರ ಬೋಧನೆಗಳು ಸಾರ್ವಕಾಲಿಕವಾಗಿವೆ. ನಮ್ಮ ಸಮಾಜದ ತಾಂಡಾಗಳು ಹಿಂದುಳಿದಿವೆ. ಅವುಗಳು ಅಭಿವೃದ್ಧಿಯಾಗುವ ಜೊತೆಗೆ ಅಲ್ಲಿ ಸರ್ಕಾರ ಎಲ್ಲ ಮೂಲಭೂತ ಸೌಲಭ್ಯಗಳನ್ನು ನೀಡುವಂತಾಗಬೇಕೆಂದರು.
ತಾಲೂಕು ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಶಿವಾನಂದ ಮಂಗಾನವರ ಅವರು ಸಂತ ಸೇವಾಲಾಲ ಅವರ ಜೀವನ ಕುರಿತು ಸವಿಸ್ತಾರವಾಗಿ ಮಾತನಾಡಿದರು. ಡಿಎಸ್ಎಸ್ ಮುಖಂಡ ಅಶೋಕ ಚಲವಾದಿ ಮಾತನಾಡಿದರು.
ಕಾರ್ಯಕ್ರಮದಲ್ಲಿ ಪುರಸಭೆ ಸದಸ್ಯರಾದ ರವಿ ನಾಯ್ಕೋಡಿ, ದೇವೇಂದ್ರ ಚವ್ಹಾಣ, ಬಂಜಾರಾ ಸೇವಾ ಸಮಿತಿ ಅಧ್ಯಕ್ಷ ಕಾಶೀನಾಥ ರಾಠೋಡ, ಡಾ.ಬಸವರಾಜ ಚವ್ಹಾಣ, ತಹಸೀಲ್ದಾರ ಕಚೇರಿ ಸಿಬ್ಬಂದಿಯಾದ ಮಂಜು ಹಳ್ಳೂರ, ಆರ್.ವಿ.ಘಾಟಗೆ, ನಿರ್ಮಲಾ ಪೂಜಾರಿ, ಎಎಸ್ಐ ಸಾರವಾಡ, ವಿವಿಧ ಇಲಾಖೆಯ ಅಧಿಕಾರಿಗಳು ಇದ್ದರು. ವಿರೇಶ ಗೂಡಲಮನಿ ನಿರೂಪಿಸಿ, ವಂದಿಸಿದರು.
Subscribe to Updates
Get the latest creative news from FooBar about art, design and business.
Related Posts
Add A Comment

