ಸಿಂದಗಿ: ನಮ್ಮ ತಂದೆ ದಿ.ಎಂ.ಸಿ.ಮನಗೂಳಿ ಅವರ ಕನಸಿನ ಕೂಸಾಗಿರುವ ಆಲಮೇಲದಲ್ಲಿ ತೋಟಗಾರಿಕೆ ಮಹಾವಿದ್ಯಾಲಯವು ಇಂದಿನ ಬಜೆಟ್‌ನಲ್ಲಿ ಘೋಷಣೆಯಾಗಿದ್ದು, ಇದು ನಮ್ಮ ತಾಲೂಕಿನ ಜನತೆಗೆ ಅತೀವ ಸಂತಸ ತಂದ ವಿಚಾರವಾಗಿದೆ ಎಂದು ಶಾಸಕ ಅಶೋಕ ಮನಗೂಳಿ ತಿಳಿಸಿದ್ದಾರೆ.
ಈ ಸಂತಸಕ್ಕೆ ಕಾರಣರಾದ ಸಿಎಂ ಸಿದ್ದರಾಮಯ್ಯನವರಿಗೆ, ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್, ತೋಟಗಾರಿಕಾ ಸಚಿವ ಎಸ್.ಎಸ್ ಮಲ್ಲಿಕಾರ್ಜುನ್, ಜಿಲ್ಲಾ ಉಸ್ತುವಾರಿ ಸಚಿವ ಎಂ.ಬಿ ಪಾಟೀಲ್, ಸಚಿವ ಶಿವಾನಂದ ಪಾಟೀಲ್ ಅವರಿಗೆ ಕ್ಷೇತ್ರದ ಜನತೆಯ ಪರವಾಗಿ ತುಂಬು ಹೃದಯದ ಅಭಿನಂದನೆಗಳನ್ನು ಸಲ್ಲಿಸುವುದಾಗಿ ಶಾಸಕ ಮನಗೂಳಿ ಪತ್ರಿಕಾ ಪ್ರಕಟಣೆಯ ಮೂಲಕ ತಿಳಿಸಿದ್ದಾರೆ.
ಈ ವೇಳೆ ದಯಾನಂದಗೌಡ, ಹೊನ್ನಪ್ಪಗೌಡ ಬಿರಾದಾರ ಸೇರಿದಂತೆ ಪಕ್ಷದ ಮುಖಂಡರು ಇದ್ದರು.
Subscribe to Updates
Get the latest creative news from FooBar about art, design and business.
Related Posts
Add A Comment

