ದೇವರಹಿಪ್ಪರಗಿ: ಮಕ್ಕಳ ಮನೋದೈಹಿಕ ವಿಕಾಸಕ್ಕೆ ಶಿಕ್ಷಣದ ಜೊತೆಗೆ ಕ್ರೀಡಾ ಚಟುವಟಿಕೆಗಳು ಅಗತ್ಯವಾಗಿವೆ ಎಂದು ವಿಜಯಪುರ ಅನುಗ್ರಹ ಆಸ್ಪತ್ರೆಯ ಖ್ಯಾತ ನೇತ್ರತಜ್ಞ ಪ್ರಭುಗೌಡ ಬಿ.ಎಲ್ (ಚಬನೂರ) ಹೇಳಿದರು.
ಪಟ್ಟಣದಲ್ಲಿ ಗುರುವಾರ ಜರುಗಿದ ಜ್ಞಾನಜ್ಯೋತಿ ಹಿರಿಯ ಪ್ರಾಥಮಿಕ ಹಾಗೂ ಪ್ರೌಢಶಾಲೆಯ ೧೯ನೇ ವಾರ್ಷಿಕ ಸ್ನೇಹ ಸಮ್ಮೇಳನದಲ್ಲಿ ಪಾಲ್ಗೊಂಡು ಮಾತನಾಡಿದರು. ಮಕ್ಕಳ ಸರ್ವಾಂಗೀಣ ವಿಕಾಸದಲ್ಲಿ ಶಿಕ್ಷಣ ಪಾತ್ರ ದೊಡ್ಡದು ಈ ಸಂದರ್ಭದಲ್ಲಿ ಪಾಲಕರು ಹಾಗೂ ಶಿಕ್ಷಕರು ಒಂದೇ ನಾಣ್ಯದ ಎರಡು ಮುಖಗಳಂತೆ ಕಾರ್ಯನಿರ್ವಹಿಸುವುದು ಅಗತ್ಯವಾಗಿದೆ ಎಂದರು.
ಖ್ಯಾತ ವೈದ್ಯ ಆರ್.ಆರ್.ನಾಯಿಕ್, ಶರಣ ಸಾಹಿತ್ಯ ಪರಿಷತ್ ತಾಲ್ಲೂಕು ಅಧ್ಯಕ್ಷ ಎಸ್.ಎನ್. ಬಸವರೆಡ್ಡಿ, ಬಿ.ಕೆ.ಪಾಟೀಲ ಮಾತನಾಡಿದರು
ಸಂಸ್ಥೆಯ ಅಧ್ಯಕ್ಷ ನಾನಾಗೌಡ ಪಾಟೀಲ ಪ್ರಸ್ತಾವಿಕವಾಗಿ ಮಾತನಾಡಿದರು. ಮುಖ್ಯಗುರು ಅಕೀಲ ಬಾಗವಾನ ವರದಿ ವಾಚಿಸಿದರು. ಗ್ರಾಮ ಪಂಚಾಯಿತಿ ಮಾಜಿಸದಸ್ಯ ಶಂಕರಗೌಡ ಪಾಟೀಲ ಅಧ್ಯಕ್ಷತೆ ವಹಿಸಿದ್ದರು. ಸ್ಥಳೀಯ ಶ್ರೀಗಳು ಸಾನಿಧ್ಯ ವಹಿಸಿ ಆಶೀರ್ವಚನ ನೀಡಿದರು.
ಶಾಲಾ ವಾರ್ಷಿಕೋತ್ಸವದ ಅಂಗವಾಗಿ ವಿದ್ಯಾರ್ಥಿಗಳಿಗೆ ಏರ್ಪಡಿಸಿದ ವಿವಿಧ ಸ್ಫರ್ಧೆಗಳ ವಿಜೇತರಿಗೆ ಬಹುಮಾನ ವಿತರಿಸಲಾಯಿತು. ನಂತರ ಮಕ್ಕಳಿಂದ ಜರುಗಿದ ಸಿದ್ದೇಶ್ವರ ಸ್ವಾಮೀಜಿಯವರ ಸಂತನೆಂದರೆ ಎಂಬ ಗೀತೆ ಹಾಗೂ ನೃತ್ಯ ರೂಪಕದೊಂದಿಗೆ ಸಾಂಸ್ಕೃತಿಕ ಚಟುವಟಿಕೆಗಳಿಗೆ ಚಾಲನೆ ನೀಡಲಾಯಿತು.
ನಿವೃತ್ತ ನೌಕರರ ಸಂಘದ ತಾಲ್ಲೂಕು ಅಧ್ಯಕ್ಷ ಸಿ.ಮಹಾಲಕ್ಷ್ಮಿ, ಜೆಡಿಎಸ್ ಜಿಲ್ಲಾ ಉಪಾಧ್ಯಕ್ಷ ರಿಯಾಜ್ ಯಲಗಾರ, ಪಟ್ಟಣ ಪಂಚಾಯಿತಿ ಸದಸ್ಯ ಬಶೀರ್ ಅಹ್ಮದ್ ಬೇಪಾರಿ, ಕಸಾಪ ತಾಲ್ಲೂಕು ಅಧ್ಯಕ್ಷ ಜಿ.ಪಿ.ಬಿರಾದಾರ, ಆಡಳಿತಾಧಿಕಾರಿ ಕೆ.ಬಿ.ಪಾಟೀಲ, ಪ್ರಭುಗೌಡ ಪಾಟೀಲ, ಹಸನಸಾಬ್ ಹರನಾಳ, ಕಾಶೀನಾಥ ವಡ್ಡೋಡಗಿ, ಮುರ್ತುಜಾ ತಾಂಬೋಳಿ ಸಿಬ್ಬಂದಿ ಜ್ಯೋತಿ ಬಾಗೇವಾಡಿ, ಮಹಾಲಕ್ಷ ಗೊದ್ಯಾಳ ಸೇರಿದಂತೆ ವಿದ್ಯಾರ್ಥಿಗಳು, ಪಾಲಕರು ಇದ್ದರು.
Subscribe to Updates
Get the latest creative news from FooBar about art, design and business.
Related Posts
Add A Comment

