ದೇವರಹಿಪ್ಪರಗಿ: ಸಂವಿಧಾನದ ಆಶಯಗಳನ್ನು ಅರಿಯುವಂತಾಗಲು ಇಂದಿನ ಜಾಗೃತಿ ಜಾಥಾ ಸಹಕಾರಿಯಾಗಿದೆ ಎಂದು ಜಿಲ್ಲಾಧಿಕಾರಿ ಟಿ.ಭೂಬಾಲನ ಹೇಳಿದರು.
ಪಟ್ಟಣದಲ್ಲಿ ಶುಕ್ರವಾರ ಸಂವಿಧಾನ ದಿನಾಚರಣೆಯ ಪ್ರಯುಕ್ತ ಸರ್ಕಾರದ ಆದೇಶದಂತೆ ಜರುಗಿದ ಜಾಗೃತಿ ಜಾಥಾದಲ್ಲಿ ಪಾಲ್ಗೊಂಡು ಮಾತನಾಡಿದರು.
ಸಂವಿಧಾನದ ಆಚರಣೆ ಮತ್ತು ಮಹತ್ವವನ್ನು ಸಾರ್ವಜನಿಕರು ತಿಳಿದುಕೊಳ್ಳಬೇಕಾಗಿದೆ. ಆದ್ದರಿಂದ ಜಿಲ್ಲೆಯ ಎಲ್ಲ ನಗರ ಪಟ್ಟಣ, ಗ್ರಾಮಗಳಲ್ಲಿ ಸಂಚರಿಸಲಿದೆ ಎಂದರು. ನಂತರ ಬಿ.ಆರ್.ಅಂಬೇಡ್ಕರ್ ವೃತ್ತಕ್ಕೆ ತೆರಳಿ ಅಂಬೇಡ್ಕರ್ ಪ್ರತಿಮೆಗೆ ಮಾಲಾರ್ಪಣೆ ಮಾಡಿದರು.
ಸಂವಿಧಾನ ಜಾಗೃತಿ ಜಾಥಾದ ರಥ ಪಟ್ಟಣ ಪ್ರವೇಶಿಸುತ್ತಿದ್ದಂತೆ ತಹಶೀಲ್ದಾರ ಪ್ರಕಾಶ ಸಿಂದಗಿ ನೇತೃತ್ವದಲ್ಲಿ ಬಸವೇಶ್ವರ ವೃತ್ತದಲ್ಲಿ ಸ್ವಾಗತಿಸಲಾಯಿತು. ನಂತರ ಟಿಪ್ಪುಸುಲ್ತಾನ ವೃತ್ತದಲ್ಲಿ ಅಧಿಕೃತವಾಗಿ ಚಾಲನೆ ನೀಡಲಾಯಿತು. ನಂತರ ಜಾಥಾದ ರಥ ಮೊಹರೆ ಹಣಮಂತ್ರಾಯ ವೃತ್ತದ ಮೂಲಕ ರಾಷ್ಟ್ರೀಯ ಹೆದ್ದಾರಿಯ ಮೂಲಕ ಕರಿದೇವರ ದೇವಸ್ಥಾನದ ರಸ್ತೆಯಲ್ಲಿ ಸಾಗಿ ಸಂಚರಿಸಿ ಬಿ.ಎಲ್.ಡಿ.ಇ ಸಂಸ್ಥೆಯ ಹಳೆಯ ಪ್ರೌಢಶಾಲಾ ಆವರಣ ತಲುಪಿತು.
ಇಲ್ಲಿ ಸಂವಿಧಾನದ ಕುರಿತು ಉಪನ್ಯಾಸ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳು ಜರುಗಿದವು. ಈ ಸಂದರ್ಭದಲ್ಲಿ ವಿವಿಧ ಶಾಲಾ ಕಾಲೇಜುಗಳ ವಿದ್ಯಾರ್ಥಿಗಳು ಪಾಲ್ಗೊಂಡರು.
ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ ಎಲ್.ಡಿ.ಮುಲ್ಲಾ, ಉಪತಹಶಿಲ್ದಾರ ಸುರೇಶ ಮ್ಯಾಗೇರಿ, ಶಿಕ್ಷಕರ ಸಂಘದ ತಾಲ್ಲೂಕು ಅಧ್ಯಕ್ಷ ಎ.ಎಚ್.ವಾಲೀಕಾರ, ಬೆಳಗಾವಿ ವಿಭಾಗ ದಲಿತ ಸಂಘರ್ಷ ಸಮಿತಿಯ ಸಂಚಾಲಕ ರಾವುತ ತಳಕೇರಿ, ಪಟ್ಟಣ ಪಂಚಾಯಿತಿ ಸದಸ್ಯ ಉಮೇಶ ರೂಗಿ, ಸುನೀಲ ಕನಮಡಿ, ಕಸಾಪ ತಾಲ್ಲೂಕು ಅಧ್ಯಕ್ಷ ಜಿ.ಪಿ.ಬಿರಾದಾರ, ಕಿರಿಯ ಆರೋಗ್ಯ ನಿರೀಕ್ಷಕ ಫಿರೋಜ್ ಮುಲ್ಲಾ, ಸಿಬ್ಬಂದಿ ಮುತ್ತುರಾಜ್ ಹಿರೇಮಠ, ಸೋಮು ಭೋವಿ, ಶಿಕ್ಷಕ ಪಿ.ಸಿ.ತಳಕೇರಿ, ಕಾಶೀನಾಥ ತಳಕೇರಿ, ಪ್ರಕಾಶ ಗುಡಿಮನಿ, ಬಸವರಾಜ ತಳಕೇರಿ, ಪ್ರಕಾಶ ಮಲ್ಲಾರಿ, ಸಿದ್ಧು ಮೇಲಿನಮನಿ, ಅರುಣ ಕೋರವಾರ, ರಾಘವೇಂದ್ರ ಗುಡಿಮನಿ ಸೇರಿದಂತೆ ವಿವಿಧ ಇಲಾಖೆಗಳು, ಶಾಲಾ, ಕಾಲೇಜುಗಳ ಸಿಬ್ಬಂದಿ, ಸಂಘ ಸಂಸ್ಥೆಗಳ ಪದಾಧಿಕಾರಿಗಳು ಇದ್ದರು.
Subscribe to Updates
Get the latest creative news from FooBar about art, design and business.
Related Posts
Add A Comment

