ದೇವರಹಿಪ್ಪರಗಿ: ಬಸವ ಸಂಸ್ಕೃತಿ ರೂಢಿಸಿಕೊಂಡಾಗ ಬದುಕು ಸಾರ್ಥಕವಾಗುತ್ತದೆ ಎಂದು ಶರಣ ಸಾಹಿತ್ಯ ಪರಿಷತ್ ತಾಲ್ಲೂಕು ಅಧ್ಯಕ್ಷ ಎಸ್.ಎನ್.ಬಸವರೆಡ್ಡಿ ಹೇಳಿದರು.
ಪಟ್ಟಣದ ತಹಶೀಲ್ದಾರ ಕಾರ್ಯಾಲಯದಲ್ಲಿ ಶನಿವಾರದಂದು ಜರುಗಿದ ಕರ್ನಾಟಕದ ಸಾಂಸ್ಕೃತಿಕ ನಾಯಕ ಬಸವೇಶ್ವರ ಭಾವಚಿತ್ರ ಅನಾವರಣ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದರು.
ಬಸವಣ್ಣನವರ ಸಾಂಸ್ಕೃತಿಕ ಆಚಾರ, ವಿಚಾರಗಳನ್ನು ತಿಳಿದುಕೊಂಡು ಅದರಂತೆ ನಡೆದಾಗ ಮಾತ್ರ ಜೀವನಕ್ಕೆ ಸಾರ್ಥಕತೆ ಬಂದಂತಾಗುತ್ತದೆ ಎಂದರು.
ನಿವೃತ್ತ ನೌಕರರರ ಸಂಘದ ಅಧ್ಯಕ್ಷ ಸಿ.ಕೆ.ಕುದರಿ, ಬಸವಶರಣ ಸಂಗಮ ಸಮೀತಿ ಅಧ್ಯಕ್ಷ ಸಂಗಣ್ಣ ತಡವಲ್, ಉಪತಹಶೀಲ್ದಾರ ಸುರೇಶ ಮ್ಯಾಗೇರಿ, ಕಸಾಪ ತಾಲ್ಲೂಕು ಅಧ್ಯಕ್ಷ ಜಿ.ಪಿ.ಬಿರಾದಾರ ಮಾತನಾಡಿದರು. ತಹಶೀಲ್ದಾರ ಪ್ರಕಾಶ ಸಿಂದಗಿ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ನಂತರ ಪಟ್ಟಣದ ವಿಜಯಪುರ ರಸ್ತೆಯಲ್ಲಿನ ಬಸವೇಶ್ವರ ವೃತ್ತಕ್ಕೆ ತೆರಳಿ ಭಾವಚಿತ್ರಕ್ಕೆ ಮಾಲಾರ್ಪಣೆ ಮಾಡಲಾಯಿತು.
ಇದೇ ಸಂದರ್ಭದಲ್ಲಿ ಬಸವೇಶ್ವರ ಸಾಂಸ್ಕೃತಿಕ ಭವನ ನಿರ್ಮಿಸಲು ತಾಲ್ಲೂಕು ಆಡಳಿತ ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿ ವಿವಿಧ ಪರಿಷತ್ ಪದಾಧಿಕಾರಿಗಳು ಮನವಿ ಸಲ್ಲಿಸಿದರು.
ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಪ್ರಾಂಶುಪಾಲ ಅಶೋಕ ಹೆಗಡೆ, ಚುಟುಕು ಸಾಹಿತ್ಯ ಪರಿಷತ್ ಅಧ್ಯಕ್ಷ ಬಿ.ಸಿ.ಹಿರೇಮಠ, ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ ಎಲ್.ಡಿ.ಮುಲ್ಲಾ, ಕಿರಿಯ ಆರೋಗ್ಯ ನಿರೀಕ್ಷಕ ಫಿರೋಜ್ ಮುಲ್ಲಾ, ಸದಸ್ಯರಾದ ಕಾಶೀನಾಥ ಬಜಂತ್ರಿ, ಸಿಂಧೂರ ಡಾಲೇರ, ಚೈತನ್ಯ ಶಾಲೆಯ ಸಂಸ್ಥಾಪಕ ಗುರುರಾಜ್ ಕುಲಕರ್ಣಿ, ಜೆ.ಆರ್.ಬಿರಾದಾರ, ಪಂಚಾಕ್ಷರಿ ಮಿಂಚನಾಳ, ಗೊಲ್ಲಾಳಪ್ಪ ಬಿರಾದಾರ, ಶಾಂತಪ್ಪ ಪಡನೂರ, ಬಸವರಾಜ ದೇವಣಗಾಂವ, ಕಾಸಪ್ಪ ಕುಂಬಾರ, ಕಾಶೀನಾಥ ರಾಮಗೊಂಡ, ಬಸವರಾಜ ಕುಂಬಾರ ಸೇರಿದಂತೆ ಸಿಬ್ಬಂದಿ ಇದ್ದರು.
Subscribe to Updates
Get the latest creative news from FooBar about art, design and business.
Related Posts
Add A Comment

