ಬಸವನಬಾಗೇವಾಡಿ: ರಾಜ್ಯದ ಬಜೆಟನಲ್ಲಿ ಮುಖ್ಯಮಂತ್ರಿ ಸಿದ್ಧರಾಮಯ್ಯನವರು ಬಸವಣ್ಣನವರ ಜನ್ಮಸ್ಥಳ ಬಸವನಬಾಗೇವಾಡಿಗೆ ಅಭಿವೃದ್ಧಿ ಪ್ರಾಧಿಕಾರ ರಚನೆ ಮಾಡುವುದಾಗಿ ಘೋಷಣೆ ಮಾಡಿದ್ದರಿಂದ ರಾಜಕೀಯ, ವಿವಿಧ ಸಂಘಟನೆ ಮುಖಂಡರು ಸೇರಿದಂತೆ ಬಸವಾಭಿಮಾನಿಗಳು ಸ್ವಾಗತಿಸಿ ಹರ್ಷ ವ್ಯಕ್ತಪಡಿಸಿದ್ದಾರೆ.
ಪ್ರತ್ಯೇಕ ಅಭಿವೃದ್ಧಿ ಪ್ರಾಧಿಕಾರ ರಚನೆ ಸುದ್ಧಿ ತಿಳಿಯುತ್ತಿದ್ದಂತೆ ಕೆಲವರು ತಮ್ಮ ಸ್ನೇಹಿತರಿಗೆ ಕರೆ ಮಾಡಿ ಸಂತಸ ಹಂಚಿಕೊಂಡರು. ಬಹು ದಿನಗಳ ಬೇಡಿಕೆಯಾಗಿದ್ದ ಪ್ರತ್ಯೇಕ ಪ್ರಾಧಿಕಾರ ರಚನೆ ಘೋಷಣೆಯನ್ನು ಬಜೆಟ್ ನಲ್ಲಿ ಮಾಡಿರುವುದಕ್ಕೆ ಮುಖ್ಯಮಂತ್ರಿ ಸಿದ್ಧರಾಮಯ್ಯನವರಿಗೆ ಹಾಗೂ ಸಚಿವ ಶಿವಾನಂದ ಪಾಟೀಲ ಅವರಿಗೆ ಅಭಿನಂದನೆ ಸಲ್ಲಿಸುತ್ತೇವೆ ಎಂದು ಸಹಕಾರ ಮಹಾಮಂಡಳ ನಿರ್ದೇಶಕ ಈರಣ್ಣ ಪಟ್ಟಣಶೆಟ್ಟಿ ತಿಳಿಸಿದರು.
ಬಸವನಬಾಗೇವಾಡಿ ಪ್ರತ್ಯೇಕ ಅಭಿವೃದ್ಧಿ ಪ್ರಾಧಿಕಾರ ರಚನೆ ಘೋಷಣೆ ಮಾಡಿರುವುದು ಹರ್ಷ ತಂದಿದೆ ಎಂದು ಕಾಂಗ್ರೆಸ್ ಬ್ಲಾಕ್ ಘಟಕದ ಅಧ್ಯಕ್ಷ ಸುರೇಶ ಹಾರಿವಾಳ, ಬಸವೇಶ್ವರ ಅಂತರಾಷ್ಟ್ರೀಯ ಶಾಲೆಯ ಸಲಹಾ ಸಮಿತಿ ಅಧ್ಯಕ್ಷ ಅನಿಲ ಅಗರವಾಲ, ಬಂಜಾರ ಸಮಾಜದ ಮುಖಂಡ ರವಿ ರಾಠೋಡ, ತಾಲೂಕು ಶರಣ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ವೀರಣ್ಣ ಮರ್ತುರ, ತಾಲೂಕು ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಶಿವಾನಂದ ಮಂಗಾನವರ, ಮುಖಂಡರಾದ ರವಿಗೌಡ ಚಿಕ್ಕೊಂಡ, ಮಲ್ಲಿಕಾರ್ಜುನ ನಾಯಕ, ಅಶೋಕ ಹಾರಿವಾಳ, ಪರಶುರಾಮ ಜಮಖಂಡಿ, ಅಶೋಕ ಚಲವಾದಿ, ರಾಜೇಶ್ವರಿ ಯರನಾಳ, ಜೇನುಗೂಡು ಸಂಘಟನೆ ಮುಖಂಡ ಸತೀಶ ಕ್ವಾಟಿ ಸೇರಿದಂತೆ ಅನೇಕರು ಹರ್ಷ ವ್ಯಕ್ತ ಪಡಿಸಿದ್ದಾರೆ.
Subscribe to Updates
Get the latest creative news from FooBar about art, design and business.
Related Posts
Add A Comment

