ವಿಜಯಪುರ: ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯಲ್ಲಿ ಖಾಲಿ ಇರುವ ಸಶಸ್ತ್ರ ಪೊಲೀಸ್ ಕಾನ್ಸ್ಟೇಬಲ್ ೧೧೩೭ ಹುದ್ದೆಗಳ ಭರ್ತಿಗೆ ರಾಜ್ಯದಾದ್ಯಂತ ಫೆ.೨೫ರಂದು ಬೆಳಿಗ್ಗೆ ೧೧ ರಿಂದ ಮಧ್ಯಾಹ್ನ ೧೨-೩೦ರವರೆಗೆ ಲಿಖಿತ ಪರೀಕ್ಷೆಗಳು ಜರುಗಲಿದ್ದು, ಲಿಖಿತ ಪರೀಕ್ಷೆಗೆ ಹಾಜರಾಗುವ ಜಿಲ್ಲೆಯ ಅಭ್ಯರ್ಥಿಗಳು ಕಡ್ಡಾಯವಾಗಿ ವಸ್ತ್ರ ಸಂಹಿತೆ ಪಾಲಿಸುವಂತೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಋಷಿಕೇಶ ಸೋನಾವಣೆ ಅವರು ತಿಳಿಸಿದ್ದಾರೆ.
ಪುರುಷ ಮತ್ತು ತೃತೀಯಲಿಂಗ ಪುರುಷ ಅಭ್ಯರ್ಥಿಗಳು ಅರ್ಧ ತೋಳಿನ ಶರ್ಟ್ಗಳನ್ನು ಕಡ್ಡಾಯವಾಗಿ ಧರಿಸಬೇಕು ಹಾಗೂ ಸಾಧ್ಯವಾದಷ್ಟು ಕಾಲರ್ ರಹಿತ ಶರ್ಟ್ಗಳನ್ನು ಧರಿಸಬೇಕು. ಜಿಪ್ ಪ್ಯಾಕೆಟ್‌ಗಳು, ದೊಡ್ಡ ಬಟನ್‌ಗಳು ಇರುವ ಶರ್ಟಗಳನ್ನು ಧರಿಸುವಂತಿಲ್ಲ. ಜೀನ್ಸ್ ಪ್ಯಾಂಟ್ ಮತ್ತು ಹೆಚ್ಚಿನ ಜೇಬುಗಳಿರುವ ಪ್ಯಾಂಟ್‌ಗಳನ್ನು ಧರಿಸುವಂತಿಲ್ಲ. ಪರೀಕ್ಷಾ ಕೇಂದ್ರದೊಳಗೆ ಷೂಗಳನ್ನು ನಿಷೇಧಿಸಲಾಗಿದ್ದು, ಪರೀಕ್ಷಾರ್ಥಿಗಳು ತೆಳುವಾದ ಅಡಿಭಾಗವಿರುವ ಪಾದರಕ್ಷೆಗಳನ್ನು ಧರಿಸಬೇಕು. ಕುತ್ತಿಗೆ ಸುತ್ತ ಯಾವುದೇ ಲೋಹದ ಆಭರಣಗಳು ಅಥವಾ ಉಂಗುರು ಮತ್ತು ಕಡಗಳನ್ನು ಧರಿಸುವುದನ್ನು ನಿಷೇಧಿಸಲಾಗಿದೆ.
ಮಹಿಳಾ ಮತ್ತು ತೃತೀಯಲಿಂಗ ಮಹಿಳಾ ಅಭ್ಯರ್ಥಿಗಳು ವಿಸ್ತಾರವಾದ ಕಸೂತಿ, ಹೂಗಳು, ಬ್ರೂಚ್‌ಗಳು ಅಥವಾ ಬಟನ್‌ಗಳು ಹೊಂದಿರುವ ಬಟ್ಟೆಗಳನ್ನು ಧರಿಸುವುದನ್ನು ನಿಷೇಧಿಸಲಾಗಿದೆ. ಪರೀಕ್ಷಾ ದಿನದಂದು ಪೂರ್ಣ ತೋಳಿನ ಬಟ್ಟೆಗಳನ್ನು-ಜೀನ್ಸ್ ಪ್ಯಾಂಟ್ ಧರಿಸಬಾರದು. ಅದರ ಬದಲಾಗಿ ಅರ್ಧ ತೋಳಿನ ಬಟ್ಟೆಗಳನ್ನು ಅವರಿಗೆ ಮುಜುಗರವಾಗದಂತೆ ಅಭ್ಯರ್ಥಿಗಳು ಧರಿಸುವಂತೆ ನಿರ್ದೇಶಿಸಲಾಗಿದೆ. ಎತ್ತರವಾದ ಹಿಮ್ಮಡಿಯ ಶೂಗಳನ್ನು-ಚಪ್ಪಲಿಗಳನ್ನು ಮತ್ತು ದಪ್ಪವಾದ ಅಡಿ ಭಾಗ ಹೊಂದಿರುವ ಶೂಗಳನ್ನಾಗಲಿ, ಚಪ್ಪಲಿಗಳನ್ನಾಲಿ ಧರಿಸಬಾರದು, ತೆಳುವಾದ ಅಡಿಭಾಗ ಹೊಂದಿರುವ ಚಪ್ಪಲಿಗಳು ಧರಿಸುವುದು ಕಡ್ಡಾಯವಾಗಿದೆ. ಮಹಿಳಾ ಮತ್ತು ತೃತೀಯಲಿಂಗ ಮಹಿಳಾ ಅಭ್ಯರ್ಥಿಗಳು ಯಾವುದೇ ರೀತಿಯ ಲೋಹದ ಆಭರಣಗಳನ್ನು ಧರಿಸುವುದು ನಿಷೇಧಿಸಿದೆ (ಮಂಗಳಸೂತ್ರ ಮತ್ತು ಕಾಲುಂಗುರ ಹೊರತುಪಡಿಸಿ) ಎಂದು ಅವರು ತಿಳಿಸಿದ್ದಾರೆ.
Subscribe to Updates
Get the latest creative news from FooBar about art, design and business.
ಸಶಸ್ತ್ರ ಪೊಲೀಸ್ ಕಾನ್ಸಟೇಬಲ್ ಹುದ್ದೆ ಪರೀಕ್ಷೆ :ವಸ್ತ್ರ ಸಂಹಿತೆ ಪಾಲನೆಗೆ ಸೂಚನೆ
Related Posts
Add A Comment
